ಬೆಂಗಳೂರು, ಏ. 12: ಇಡೀ ಜಗತ್ತಿನಾದ್ಯಂತ ರಣಕೇಕೆ ಹಾಕುತ್ತಿರುವ ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್‌ಡೌನ್ ರಾಮಬಾಣ. ಜಗತ್ತಿನ ಹಲವು ದೇಶಗಳು ಲಾಕ್‌ಡೌನ್ ಅಸ್ತ್ರದ ಮೂಲಕ ಕೊರೊನಾ ವೈರಸ್ ಕಟ್ಟಿಹಾಕಲು ಪ್ರಯತ್ನಿಸುತ್ತಿವೆ. ಆದರೆ ಅದು ಸಮುದಾಯಕ್ಕೆ ವೈರಸ್ ಹರಡುವ ಮೊದಲು ಕೈಗೊಳ್ಳಬೇಕಾಗಿದ್ದ ಅಸ್ತ್ರ. ಸಮುದಾಯಕ್ಕೆ ವೈರಸ್ ಹರಡಿದ್ರೆ ಲಾಕ್‌ಡೌನ್ ಬದಲಿಗೆ ಸೀಲ್‌ಡೌನ್ ಅಸ್ತ್ರವನ್ನು ಜಾರಿಗೆ ತರಲಾಗುತ್ತದೆ....ದೇಶದ ಕೊರೊನಾ ವೈರಸ್ ಹಾಟ್‌ಸ್ಪಾಟ್ ಎಂದು ಗುರುತಿಸಿಕೊಂಡಿರುವ ಬೆಂಗಳೂರಿನಲ್ಲಿ ಈಗಾಗಲೇ ಎರಡು ವಾರ್ಡ್‌ಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಆದರೂ ಹೆಚ್ಚುತ್ತಿರುವ ಪ್ರಕರಣಗಳು ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿವೆ. ಹೀಗಾಗಿ ಇಡೀ ಬೆಂಗಳೂರಿನಾದ್ಯಂತ ಸೀಲ್‌ಡೌನ್ ಜಾರಿಯಾಗುತ್ತದೆ ಎಂಬ ಆತಂಕ ಜನರಲ್ಲಿದೆ. ಇದಕ್ಕೆ ಸರ್ಕಾರ ಅಧಿಕೃತವಾಗಿ ಸ್ಪಷ್ಟನೆಯನ್ನು ಕೊಟ್ಟಿದೆ. ಕೊರೊನಾ ಹಾಟ್‌ಸ್ಪಾಟ್‌ಗಳಲ್ಲಿ ಸ್ಥಾನ ಪಡೆದಿದೆ ಬೆಂಗಳೂರು ದೇಶದಲ್ಲಿ ದಿನದಿಂದ ದಿನಕ್ಕೆ ಹರಡುವುದು ಹೆಚ್ಚಾಗುತ್ತಿದೆ. ಈಗಾಗಲೇ ನಮ್ಮ ದೇಶದಲ್ಲಿ ಒಟ್ಟು 8,356 ಪ್ರಕರಣಗಳು ವರದಿಯಾಗಿದೆ. ಅದರಲ್ಲಿ 7,367 ಕೇಸ್‌ಗಳು ಚಾಲ್ತಿಯಲ್ಲಿದೆ. 716 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್ ಆಗಿದ್ದಾರೆ. 273 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿಯೂ ಈವರೆಗೆ 226 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 6 ಜನರು ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ. ಬೆಂಗಳೂರು ದೇಶದ ಕೊರೊನಾ ಹಾಟ್‌ಸ್ಪಾಟ್‌ಗಳಲ್ಲಿ ಒಂದಾಗಿದೆ. ಬೆಂಗಳೂರಿನಲ್ಲಿ 76 ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು ಒಬ್ಬರು ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ