ಬಾಗಲಕೋಟೆ: ದೇಶಾದ್ಯಂತ ಕೊರೋನಾ ಲಾಕ್‌ಡೌನ್‌ನಿಂದ ಕಾರಣ ಮನೆಯಿಂದ ಜನ ಹೊರ ಬರುತ್ತಿಲ್ಲ. ಕೆಲ ಗ್ರಾಮಗಳಲ್ಲಿ ಗ್ರಾಮಕ್ಕೆ ಬರುವ ರಸ್ತೆಗಳನ್ನೇ ಅಗೆದು ಹಾಕಲಾಗಿದ್ದು ಹೊರ ಪ್ರದೇಶದವರು ಗ್ರಾಮಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಆದರೆ ರಸ್ತೆ ಅಗೆದಿದ್ದ ಕಾರಣಕ್ಕೆ ಗ್ರಾಮದ ಅನಾರೋಗ್ಯಪೀಡಿತ ವೃದ್ದೆಗೆ ಸಕಾಲಕ್ಕೆ ಚಿಕಿತ್ಸೆ ಸಿಕ್ಕದೆ ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದ ತೇರದಾಳ ಪಟ್ಟಣದ ನಿರ್ಮಲಾ ತೆಳಗಿನಮನಿ (61) ಎಂಬುವ ಮಹಿಳೆ ಸಾವನ್ನಪ್ಪಿದ್ದಾರೆ.
ಹೃದಯ ಸಮಸ್ಯೆಯ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ದೆಯನ್ನು ಅವರ ಕುಟುಂಬಸ್ಥರು ಚಿಕಿತ್ಸೆಗಾಗಿ ಬೆಳಗಾವಿಯ ಹಾರೋಗೇರಿಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗದ ಮಧ್ಯೆ ಮುಖ್ಯ ರಸ್ತೆಯನ್ನು ಅಗೆದಿದ್ದು ಕಾರು ಸಂಚರಿಸಲು ಸಾಧ್ಯವಾಗಿಲ್ಲ.
ಸುಮಾರು ಎರಡು ಗಂಟೆಗಳ ಕಾಲ ಆಸ್ಪತ್ರೆಗೆ ತಲುಪುವ ಮಾರ್ಗದ ಹುಡುಕಾಟ ನಡೆದರೂ ವೃದ್ದೆಯನ್ನು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಿಲ್ಲ. ಪರಿಣಾಮ ಅವರಿಗೆ ತೀವ್ರ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಘಟನೆಗೆ ರಸ್ತೆ ಅಗೆದಿರುವ ತಾಲೂಕು ಆಡಳಿತವೇ ಕಾರಣವೆಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ