ಚಿತ್ರದುರ್ಗ,ಏ.16(ಹಿ.ಸ): ಚಿತ್ರದುರ್ಗ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧ ವಿಧಿಸಿ ಆದೇಶಿಸಲಾಗಿದ್ದು, ಈ ಆದೇಶ ಉಲ್ಲಂಘಿಸುವವರ ವಿರುದ್ಧ ಗರಿಷ್ಠ 1000 ರೂ. ವರೆಗೆ ದಂಡ ಹಾಗೂ ಕಾನೂನು ರೀತ್ಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಎಚ್ಚರಿಕೆ ನೀಡಿದ್ದಾರೆ.
ಕೋವಿಡ್-19 ಸೋಂಕು ತಡೆ ಹಾಗೂ ನಿಯಂತ್ರಣ ಉದ್ದೇಶಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿದೆ. ಅಲ್ಲದೆ ಸೋಂಕು ಹರಡುವುದನ್ನು ತಡೆಗಟ್ಟಲು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಇದರ ಜೊತೆಗೆ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಈ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಕೂಡ ನಿರ್ಬಂಧಿಸಲಾಗಿದೆ. ವಸತಿ ಸಮುಚ್ಛಯಗಳು, ಆಸ್ಪತ್ರೆ ಕಟ್ಟಡಗಳು , ಬಸ್ ಹಾಗೂ ರೈಲ್ವೆ ನಿಲ್ದಾಣಗಳು , ಹೋಟೆಲ್‍ಗಳು , ಸರ್ಕಾರಿ ಕಚೇರಿಗಳು , ನ್ಯಾಯಾಲಯ ಕಟ್ಟಡಗಳು , ಶಿಕ್ಷಣ ಸಂಸ್ಥೆ , ಶಾಲಾ ಕಾಲೇಜು ಕಟ್ಟಡಗಳು , ಗ್ರಂಥಾಲಯ , ಸಾರ್ವಜನಿಕ ಉದ್ಯಾನವನ ಸೇರಿದಂತೆ ಸಾರ್ವಜನಿಕರಿಂದ ಹೆಚ್ಚಾಗಿ ಬಳಸಲ್ಪಡುವ ಎಲ್ಲ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಗರಿಷ್ಠ 1000 ರೂ. ವರೆಗೆ ದಂಡ ಹಾಗೂ ಕಾನೂನು ರೀತ್ಯ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ಥಾನ್ ಸಮಾಚಾರ್/ಪ್ರಬಿ/ಎಂವೈ
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ