ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ವಿರುದ್ಧದ ಹೋರಾಟದಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಹಾಗೂ ಸೇವಾ ಇಲಾಖೆಗಳ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರ ವಿರುದ್ಧ ಉತ್ತರ ಪ್ರದೇಶ ಮಾದರಿ ಕಾನೂನು ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವರದಿಯಾಗಿದೆ.
ಹಲ್ಲೆ ಮಾಡುವವರ ವಿರುದ್ಧ ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ ಮಾಡಲಾಗುತ್ತದೆ, ಇದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಕೇಂದ್ರದ ಮಾರ್ಗಸೂಚಿಯಂತೆ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಮೇ.3 ರವರೆಗೆ ಮುಂದುವರಿಸಿ ಪಾಲನೆ ಮಾಡಲು ತೀರ್ಮಾನ ಮಾಡಲಾಗಿದೆ. ಹೀಗಾಗಿ ಏಪ್ರಿಲ್ 21ರ ನಂತರವೂ ಲಾಕ್ ಡೌನ್ ಸಡಿಲ ಮಾಡಲಾಗುವುದಿಲ್ಲ.ಮೇ 3 ರವರೆಗೂ ಲಾಕ್ ಡೌನ್ ಯಥಾಸ್ಥಿತಿ ಮುಂದುವರಿಯಲಿದೆ.
ಲಾಕ್ ಡೌನ್ ಪಾಲನೆ ನಿಯಮಾವಳಿ ಕುರಿತು ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಟಾಸ್ಕ್ ಫೋರ್ಸ್ ಜೊತೆ ಚರ್ಚಿಸಿ ಮುಖ್ಯಮಂತ್ರಿಯವರು ತೀರ್ಮಾನ ಮಾಡುತ್ತಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ