ಬೆಂಗಳೂರು : ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆರೋಗ್ಯ ಸೇತು ಆಯಪ್ ನ್ನು ಎಲ್ಲರೂ ಕಡ್ಡಾಯವಾಗಿ ಬಳಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರು, ಸ್ವಯಂ ಸೇವಕರು. ಸರ್ಕಾರಿ ನೌಕರರು ಕಡ್ಡಾಯವಾಗಿ ಆರೋಗ್ಯ ಸೇತು ಆಯಪ್ ನ್ನು ನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಈ ಆಪ್ ಬಿಡುಗಡೆ ಮಾಡಲಾಗಿದೆ. ಈ ಆಪ್ ಮೂಲಕ ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸುತ್ತಿರುವ ಕೇಂದ್ರ ಸರ್ಕಾರ, ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಬ್ರೇಕ್ ಆಗುವ ಕೆಲಸ ಮಾಡುತ್ತಿದೆ.
ದೇಶಾದ್ಯಂತ ಕೊರೊನಾ ವೈರಸ್ ಸೋಂಕತ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಹೋಂ ಕ್ವಾರಂಟೈನ್ ನಲ್ಲಿದ್ದವರು ಹೊರಗೆ ಬರುವ ಮೂಲಕ, ಸೋಂಕಿನ ಸಂಖ್ಯೆ ಕೂಡ ದ್ವಿಗುಣವಾಗುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ, ಕೇಂದ್ರ ಆರೋಗ್ಯ ಸೇತು ಎನ್ನುವಂತ ಆಪ್ ಬಿಡುಗಡೆ ಮಾಡಿದೆ. ಈ ಮೂಲಕ ಕೊರೊನಾ ವೈರಸ್ ಸೋಂಕು ಸೇರಿದಂತೆ ದೇಶದ ಜನರ ಆರೋಗ್ಯದ ಮೇಲೆ ನಿಗಾ ವಹಿಸುತ್ತಿದೆ.ಈ ಆಪ್ ಮೂಲಕ ಕೊರೊನಾ ವೈರಸ್ ಸೋಂಕಿತರ ಲೊಕೇಷನ್ ಮಾಹಿತಿ ಸೇರಿದಂತೆ ಸೋಂಕಿತರು ಮತ್ತೊಬ್ಬ ಆರೋಗ್ಯ ವಂತ ವ್ಯಕ್ತಿಯ ಸಂಪರ್ಕ ಹೊಂದಿ, ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಿದೆ.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ