ಬೆಂಗಳೂರು: ರೇವಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕೊರೊನಾ ಸೋಂಕಿತ ರೋಗಿಗಳಿಗೆ ಅನುಕೂಲವಾಗಲೆಂದು, ನೂತನವಾಗಿ 'ಜೀವ ಸೇತು' ಮೆಡಿಕಲ್ ವೆಂಟಿಲೇಟರ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ್ದಾರೆ. ಇದನ್ನು ಶನಿವಾರ ಬಿಡುಗಡೆ ಮಾಡಲಾಯಿತು.
'ಕೋವಿಡ್-19ರ ವಿರುದ್ಧ ಇಡೀ ದೇಶವೇ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶ ನಮ್ಮದಾಗಿತ್ತು. ಈ ಕುರಿತು ವೈದ್ಯರೊಂದಿಗೆ ಚರ್ಚಿಸಿದಾಗ, ಉಸಿರಾಟದ ಸಮಸ್ಯೆ ನಿವಾರಣೆಗೆ ಅನುಕೂಲವಾಗುವ ವೆಂಟಿಲೇಟರ್ ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದರು. ನಮ್ಮ ವಿ.ವಿ ತಂಡ ಈ ನಿಟ್ಟಿನಲ್ಲಿ ಶ್ರಮಿಸಿ, ವೆಂಟಿಲೇಟರ್ ವಿನ್ಯಾಸಗೊಳಿಸಿದೆ' ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಶ್ಯಾಮರಾಜು ತಿಳಿಸಿದರು.
'ಸದ್ಯಕ್ಕೆ ರೂ.35 ಸಾವಿರ ವೆಚ್ಚದಲ್ಲಿ ಎರಡು ವೆಂಟಿಲೇಟರ್‌ಗಳನ್ನು ಸಿದ್ಧಪಡಿಸಲಾಗಿದೆ.
'ಸಾಮಾಜಿಕ ಕಾರ್ಯ ಮಾಡುತ್ತಿರುವ ಆಸ್ಪತ್ರೆಗಳಿಗೆ ಕಡಿಮೆ ದರದಲ್ಲಿ ವೆಂಟಿಲೇಟರ್ ಪೂರೈಸಲು ಆದ್ಯತೆ ನೀಡಲಾಗುವುದು. ಭವಿಷ್ಯದಲ್ಲೂ ಈ ಸಾಧನ ಸಿದ್ಧಪಡಿಸುವ ಗುರಿ ಹೊಂದಲಾಗಿದೆ' ಎಂದರು.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ