ಬೆಂಗಳೂರು : ಈಗಾಗಲೇ ಬೆಂಗಳೂರಿನಲ್ಲಿ 10 ಸಾವಿರ ವಾಹನಗಳನ್ನು ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದಿದ್ದಕ್ಕೆ ಸೀಜ್ ಮಾಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜನರು ಮನೆಯಿಂದ ಹೊರಗೆ ಬರಬಾರದು. ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಮತ್ತಷ್ಟು ಟೈಟ್ ಮಾಡಲಾಗುತ್ತಿದ್ದು, ರೋಡಿಗಿಳಿದ್ರೆ.. ನಿಮ್ಮ ವಾಹನವನ್ನು ಸೀಜ್ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸಬೇಕೇ..? ಬೇಡವೇ ಎಂಬ ಕುರಿತಂತೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ತುರ್ತು ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಲಾಕ್ ಡೌನ್ ರಾಜ್ಯದಲ್ಲಿ ಮುಂದುವರೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 11ರಂದು ಕರೆ ನೀಡಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯ ನಂತ್ರ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ರಾಜ್ಯದ ಜನರಲ್ಲಿ ವಿನಂತಿ ಮಾಡುತ್ತೇನೆ. ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮನೆಯಿಂದ ಹೊರಗೆ ಬರಬೇಡಿ. ಮನೆಯಲ್ಲಿಯೇ ಇದ್ದು ಲಾಕ್ ಡೌನ್ ನಿಯಮವನ್ನು ಪಾಲಿಸಿ. ಏಪ್ರಿಲ್ 14ರ ವರೆಗೆ ಒಬ್ಬ ವ್ಯಕ್ತಿಯೂ ಮನೆಯಿಂದ ಹೊರಗೆ ಬರಬಾರದು. ವಿನಾ ಕಾರಣ ವ್ಯಕ್ತಿಗಳು ಹೊರಗೆ ಬಂದ್ರೆ ಕ್ರಮ ಕೈಗೊಳ್ಳಲಾಗುತ್ತಿದೆ. ಲಾಕ್ ಡೌನ್ ಒಂದು ಹಂತಕ್ಕೆ ಬರಬೇಕು ಅಂದ್ರೆ ಯಾರೂ ಹೊರಗೆ ಬರಬಾರದು. ಒಂದು ವೇಳೆ ಲಾಕ್ ಡೌನ್ ಉಲ್ಲಂಘಿಸಿ ಹೊರಗೆ ಬರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ರಸ್ತೆಗೆ ಇಳಿಯುವ ವಾಹನಗಳನ್ನು ಸೀಜ್ ಮಾಡಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದರು.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ