ಬೆಂಗಳೂರು: ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಮತ್ತೆ 22 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ ಕಂಡಿದೆ. ಇಂದು ಬೆಣ್ಣೆ ನಗರಿ ದಾವಣಗೆರೆ ಮತ್ತೆ ಶಾಕ್ ನೀಡಿದ್ದು ಇಂದು 12 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇನ್ನು ಬೆಂಗಳೂರಿನಲ್ಲಿ 3 ಹೊಸ ಕೇಸ್ಗಳು ಪತ್ತೆಯಾಗಿದ್ದು, ಬಾಗಲಕೋಟೆಯಲ್ಲಿ 2 ಹಾಗೂ ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಹಾವೇರಿ, ಧಾರವಾಡದ ಭಟ್ಕಳದಲ್ಲಿ ತಲಾ ಒಂದು ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ.
ಇಂದು 10 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದನ್ನು ಸೇರಿ, ರಾಜ್ಯದಲ್ಲಿ ಒಟ್ಟು 331 ಜನರು ಕೊರೊನಾ ಸೋಂಕು ಮುಕ್ತವಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ವಿಜಯಪುರದಲ್ಲಿ ಇಂದು ಒಬ್ಬ ಹಾಗೂ ದಾವಣಗೆರೆಯಲ್ಲಿ ಮತ್ತೊಬ್ಬ ಸೋಂಕಿತ ಸಾವನ್ನಪ್ಪಿದ್ದಾನೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಕಾರಣದಿಂದಾಗಿ ಒಟ್ಟು 29 ಜನರು ಸಾವನ್ನಪ್ಪಿದ್ದರೆ, ಆತ್ಮಹತ್ಯೆ ಮಾಡಿಕೊಂಡ ಒಬ್ಬ ಸೋಂಕಿತನೂ ಸೇರಿ ಒಟ್ಟು 30 ಸೋಂಕಿತರು ಸಾವನ್ನಪ್ಪಿದಂತಾಗಿದೆ.
ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್ ಪತ್ತೆ?
- ದಾವಣಗೆರೆ-12
- ಬೆಂಗಳೂರು -03
- ಬಾಗಲಕೋಟೆ-02
- ಬಳ್ಳಾರಿ -01
- ದಕ್ಷಿಣಕನ್ನಡ -01
- ಉತ್ತರ ಕನ್ನಡ (ಭಟ್ಕಳ) -01
- ಧಾರವಾಡ -01
- ಹಾವೇರಿ -01
ಇಂದು ಒಟ್ಟು 10 ಮಂದಿ ಡಿಸ್ಚಾರ್ಜ್ ಆಗಿದ್ದು, ಜಿಲ್ಲಾವಾರು ಅಂಕಿ ಅಂಶ ಹೀಗಿದೆ..
ಬಾಗಲಕೋಟೆ- 3
ವಿಜಯಪುರ- 3
ಮೈಸೂರು- 3
ಕಲಬುರ್ಗಿ- 1
ಬಾಗಲಕೋಟೆ- 3
ವಿಜಯಪುರ- 3
ಮೈಸೂರು- 3
ಕಲಬುರ್ಗಿ- 1
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ