ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಗುರಿಯಾದ ವಲಸಿಗರು, ಕಾರ್ಮಿಕ ಕಾನೂನಿನ ತಿದ್ದುಪಡಿ- ಇತ್ಯಾದಿ ವಿಚಾರಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮೇ 22ರಂದು ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ. ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಎಸ್ಪಿ, ಬಿಎಸ್ಪಿ ಸೇರಿದಂತೆ 17 ಪಕ್ಷಗಳು ಸಮ್ಮತಿ ಸೂಚಿಸಿವೆ. ಶರದ್ ಪವಾರ್, ಸ್ಟಾಲಿನ್, ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳ ಹಲವು ಮುಖಂಡರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಏನೇನು ಚರ್ಚೆ?: ಲಾಕ್‌ಡೌನ್ ನಿರ್ವಹಿಸುವಲ್ಲಿ ಕೇಂದ್ರ ಸರಕಾರದ ವೈಫಲ್ಯ, ನಿರುದ್ಯೋಗ ಸಮಸ್ಯೆಗಳ ಬಗ್ಗೆ ಸಭೆ ಧ್ವನಿಯಾಗಲಿದೆ. ಕೇಂದ್ರ ಸರಕಾರ ಪರಿಷ್ಕರಿ ಸುತ್ತಿರುವ ಕಾರ್ಮಿಕ ನೀತಿಯಿಂದ, ಬಿಜೆಪಿ ಅಧಿಕಾರ ಹಿಡಿದಿರುವ ರಾಜ್ಯಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಆಗುವ ಸಾಧ್ಯತೆ ಇದೆ ಎನ್ನುವುದು ಕಾಂಗ್ರೆಸ್‌ನ ಆರೋಪ.
ಹೀಗಾಗಿ, ಸಭೆಯಲ್ಲಿ ಕಾರ್ಮಿಕ ಕಾನೂನಿನ ಕುರಿತು ಚರ್ಚೆಗಳೂ ನಡೆಯಲಿವೆ.
(ಮಾಹಿತಿ ಕೃಪೆ ಉದಯವಾಣಿ...)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ