WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, May 9, 2020

ಮಗು ಚಿರತೆಗೆ ಬಲಿ; ಸಂತ್ರಸ್ತ ಕುಟುಂಬ ಭೇಟಿಯಾಗಿ 7.5 ಲಕ್ಷ ರೂ. ಪರಿಹಾರ ನೀಡಿದ ಆನಂದ್ ಸಿಂಗ್

ರಾಮನಗರ: ಚಿರತೆಗೆ ಬಲಿಯಾದ ಮೂರು ವರ್ಷದ ಮಗುವಿನ ಕುಟುಂಬಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶನಿವಾರ ಘಟನಾ ಸ್ಥಳಕ್ಕೆ ಭೇಟಿ‌ ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು, ಮನೆಯಲ್ಲಿ ಮಲಗಿದ್ದ ಮೂರು ವರ್ಷದ ಮಗುವನ್ನು ಚಿರತೆ ಎಳೆದೊಯ್ದು ಕೊಂದುಹಾಕಿದ ಹಿನ್ನೆಲೆಯಲ್ಲಿ ಬೇಜವಾಬ್ದಾರಿ‌ತನ ತೋರಿದ ಅರಣ್ಯ ಇಲಾಖೆ ಸಿಬ್ಬಂದಿ‌‌ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇಂತಹ ‌ಘಟನೆ‌ ಜರುಗಬಾರದಿತ್ತು. ಇದು ಅತ್ಯಂತ ದುಃಖದ ಸಂಗತಿ ಎಂದರು. ಲಾಕ್​ಡೌನ್​​ ಹಿನ್ನೆಲೆಯಲ್ಲಿ ಜನ ಸಂಚಾರ ಕಡಿಮೆಯಾಗಿದ್ದರಿಂದ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿವೆ. ನಾಳೆಯೇ ಕ್ಯೂಬಿಂಗ್ ಕೆಲಸ ಆರಂಭಿಸಿ ಚಿರತೆ ಸೆರೆ ಹಿಡಿಯಲಾಗುವುದು ಎಂದು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್, ಮಾಗಡಿ ಶಾಸಕ ಎ.ಮಂಜುನಾಥ್ ಉಪಸ್ಥಿತರಿದ್ದರು. ಮನೆಯಲ್ಲಿ ಮಲಗಿದ್ದ 3 ವರ್ಷದ ಗಂಡು ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಚಂದ್ರಣ್ಣ ಹಾಗೂ ಮಂಗಳ ಗೌರಮ್ಮ ದಂಪತಿಯ ಮಗನಾದ ಹೇಮಂತ್ ಚಿರತೆ ದಾಳಿಗೆ ಬಲಿಯಾಗಿದ್ದನು. (ಮಾಹಿತಿ ಕೃಪ ಕನ್ನಡ ಪ್ರಭ )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ