WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, May 2, 2020

ಸರಕಾರದಿಂದ ಅವ್ಯವಹಾರ: ಡಿಕೆಶಿ

ಬೆಂಗಳೂರು: ಸರಕಾರಕ್ಕೆ ನೀಡಿದ್ದ ಸಹಕಾರ ಕಾಲಾವಕಾಶ ಮುಗಿದಿದೆ. ಬಡವರಿಗೆ ವಿತರಿಸುವ ಅಕ್ಕಿಯಿಂದ ಹಿಡಿದು, ಹಾಲು, ತರಕಾರಿ, ದಿನಸಿ ಹಂಚಿಕೆವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇನ್ನೇನಿದ್ದರೂ ನಾವು ಸರಕಾರದ ವೈಫಲ್ಯಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ.
ರೈತರು ಮತ್ತಿತರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿ, ರಾಜಕಾರಣ ಮಾಡಬಾರದು ಮತ್ತು ಮಾನವೀಯತೆ ದೃಷ್ಟಿಯಿಂದ ಸರಕಾರದ ಜತೆ ಕೈ ಜೋಡಿಸಿದ್ದೇವೆ. ಕಳೆದ 40 ದಿನಗಳಲ್ಲಿ ಸರಕಾರ ಏನು ಮಾಡಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಸಚಿವರ ನಡುವೆ ಸಮನ್ವಯತೆ, ಅಧಿಕಾರಿಗಳಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಪ್ರತಿ ವಿಚಾರದಲ್ಲೂ ದಂಧೆ ನಡೆಯುತ್ತಿದೆ. ಇದನ್ನು ನೋಡಿಕೊಂಡು ಕುಳಿತುಕೊಳ್ಳಲು ಇನ್ನು ಸಾಧ್ಯವಿಲ್ಲ ಎಂದು ಹೇಳಿದರು.ಪಿಂಚಣಿ ಹಣ ಸರಿಯಾಗಿ ತಲುಪಿಲ್ಲ
ಕೇಂದ್ರ ಮತ್ತು ರಾಜ್ಯ ಸರಕಾರ ಜನರಿಗೆ ಏನು ಆಶ್ವಾಸನೆ ಕೊಟ್ಟರೋ ಅದರಲ್ಲಿ ಒಂದೇ ಒಂದೂ ಕಾರ್ಯ ರೂಪಕ್ಕೆ ಬಂದಿಲ್ಲ. ಆಹಾರ ವಿತರಣೆಯಲ್ಲಿ ಶೇ. 20ರಷ್ಟು ಕೆಲಸ ಆಗಿರುವುದು ಬಿಟ್ಟರೆ, ಆರೋಗ್ಯ ವಿಷಯದಿಂದ ಹಿಡಿದು ಕಾರ್ಮಿಕರ ಸಮಸ್ಯೆವರೆಗೂ ಎಲ್ಲೂ ಕೆಲಸ ಆಗಿಲ್ಲ. ಆದಾಯ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿದಾಗ ಪಿಂಚಣಿ ಹಣ ಕೂಡ ಸರಿಯಾಗಿ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದು ಗೊತ್ತಾಗಿದೆ.ಇದನ್ನು ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
“ಎಲ್ಲ ವಿಚಾರಗಳಲ್ಲೂ ಸರಕಾರ ವಿಫಲ’
ಹಾಲು, ಅಕ್ಕಿ ಕೊಡುವುದರಲ್ಲೂ ಅವ್ಯವಹಾರ. ಈವರೆಗೂ ಸರಕಾರ ಒಂದೇ ಒಂದು ಕಡೆ ತರಕಾರಿಗಳನ್ನು ಖರೀದಿ ಮಾಡಿಲ್ಲ. ಇನ್ನು ವಾಹನ ಸಾಲ ಪಡೆದಿರುವವರಿಗೆ ಕಂತಿನ ವಿನಾಯಿತಿ, ಬಡ್ಡಿ ಮನ್ನಾ ಅಥವಾ ವಿಮೆ ಕಂತು ತಡವಾಗಿ ಕಟ್ಟಲು ಅವಕಾಶ ಕಲ್ಪಿಸಲಾಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಎಲ್ಲ ವಿಚಾರಗಳಲ್ಲೂ ವಿಫಲವಾಗಿರುವುದು ಎದ್ದು ಕಾಣುತ್ತದೆ. ಇಂಥ ಪರಿಸ್ಥಿತಿಯಲ್ಲಿ ಸರಕಾರಗಳು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದನ್ನು ನಾನು ಈವರೆಗೂ ನೋಡಿರಲಿಲ್ಲ. ವಿಪಕ್ಷದ ಪ್ರತಿನಿಧಿಗಳಾಗಿ ನಮ್ಮ ನಾಯಕರು ವಾಹನ ಚಾಲಕರಿಂದ, ಅಸಂಘಟಿತ ಕಾರ್ಮಿಕರವರೆಗೂ ಸಮಾಜದ ಎಲ್ಲ ವರ್ಗದವರನ್ನು ಕರೆದು ಮಾತನಾಡಿ ಅವರ ಕಷ್ಟಕ್ಕೆ ಧ್ವನಿಯಾಗಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ