WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Sunday, May 3, 2020

ಗಾಯಾಳು ಚಾಲಕನಿಗೆ ಆಂಬ್ಯುಲೆನ್ಸ್‌ ವ್ಯವಸ್ಥೆ ಮಾಡಿದ ಸಚಿವ ಸವದಿ

ಹೊಸಪೇಟೆ: ಕೂಡ್ಲಿಗಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭಾನುವಾರ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕನಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮಾನವೀಯತೆ ತೋರಿದ್ದಾರೆ.
ಸಾರಿಗೆ ಸಂಸ್ಥೆಯ ಬಸ್ಸು ಬಾಗಲಕೋಟೆಯಲ್ಲಿ ವಲಸೆ ಕಾರ್ಮಿಕರನ್ನು ಬಿಟ್ಟು ರಾಮನಗರಕ್ಕೆ ಹಿಂತಿರುಗುವಾಗ ಕೂಡ್ಲಿಗಿ ಬಳಿ ಕಂದಕಕ್ಕೆ ಉರುಳಿದೆ. ಈ ವೇಳೆ ಅದರೊಳಗಿದ್ದ ಚಾಲಕ ಶರಣಪ್ಪ ಕಾಲ್ಗುಡಿ ಗಾಯಗೊಂಡಿದ್ದಾರೆ. ಅದೇ ಮಾರ್ಗವಾಗಿ ಲಕ್ಷ್ಮಣ ಸವದಿ ಅವರು ಬೆಂಗಳೂರಿಗೆ ಹೋಗುತ್ತಿದ್ದರು. ಬಸ್‌ ಅಪಘಾತಕ್ಕೀಡಾಗಿರುವುದನ್ನು ಕಂಡು, ಕಾರು ನಿಲ್ಲಿಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಬಳಿಕ ಪೊಲೀಸರಿಗೆ ಕರೆ ಮಾಡಿ, ಸ್ಥಳಕ್ಕೆ ಆಂಬ್ಯುಲೆನ್ಸ್‌ ಕರೆಸಿ ಶರಣಪ್ಪ ಅವರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಅಲ್ಲಿಂದ ನಿರ್ಗಮಿಸಿದ್ದಾರೆ.
ಚಾಲಕ ಸೋಮಣ್ಣ, ಹೆಚ್ಚುವರಿ ಚಾಲಕ ಮೌನೇಶ ಪತ್ತಾರ ಬಸ್ಸಿನಲ್ಲಿದ್ದರು. ಬಾಗಲಕೋಟೆಯವರಾದ ಶರಣಪ್ಪ ಅವರು ಮಾಗಡಿ ಡಿಪೊದಲ್ಲಿ ಕೆಲಸ ಮಾಡುತ್ತಾರೆ. ಕೆಲಸದ ನಿಮಿತ್ತ ಬಸ್ಸಿನಲ್ಲಿ ತೆರಳುವಾಗ ಈ ಘಟನೆ ನಡೆದಿದೆ.
'ಬಸ್ಸಿನ ಎದುರು ಏಕಾಏಕಿ ಕರು ಅಡ್ಡ ಬಂದಿತ್ತು. ಚಾಲಕ ಸೋಮಣ್ಣ ಅದನ್ನು ತಪ್ಪಿಸಲು ಹೋದಾಗ ರಸ್ತೆಬದಿಯ ಕಂದಕಕ್ಕೆ ಬಸ್‌ ಇಳಿದಿದೆ. ನನಗೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಚಿವರು ಆಂಬ್ಯುಲೆನ್ಸ್‌ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಾನು ಆರೋಗ್ಯವಾಗಿದ್ದೇನೆ' ಎಂದು ಶರಣಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ