ಬೆಂಗಳೂರು: ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ತಿರಸ್ಕೃತ ಅರ್ಜಿದಾರರಿಗೆ ಮತ್ತೊಂದು ಸಲ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರಿಂದ 13 ಲಕ್ಷ ರೈತರಿಗೆ ಅನುಕೂಲವಾಗಲಿದೆ.
ಲಾಕ್ ಡೌನ್ ಮುಗಿದ ಬಳಿಕ ಫಾರಂ ನಂಬರ್ 50, 53 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರಿ ಜಮೀನಿನ ಬಗರ್ ಹುಕುಂ ಸಾಗುವಳಿಯನ್ನು ಸಕ್ರಮ ಮಾಡಬೇಕೆಂದು ರೈತರು ವರ್ಷಗಳಿಂದ ಮನವಿ ಮಾಡಿದ್ದಾರೆ. ಅವರ ಮನವಿಗೆ ಸರ್ಕಾರ ಸ್ಪಂದಿಸಿದ್ದು ಸಾಗುವಳಿದಾರರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಕೆ ತಿರಸ್ಕೃತವಾಗಿದ್ದರೂ ಬಹುತೇಕ ರೈತರು ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದಾರೆ.
ಹಿಂದಿನ ಸರ್ಕಾರಗಳ ಅವಧಿಯಲ್ಲಿ ತಿರಸ್ಕೃತಗೊಂಡ ಅರ್ಜಿದಾರರಿಂದ ಮತ್ತೊಮ್ಮೆ ಅರ್ಜಿ ಸ್ವೀಕರಿಸಲು ಅವಕಾಶ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.
ಭೂ ಸುಧಾರಣಾ ಕಾಯ್ದೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಅಕ್ರಮ ಸಕ್ರಮ ಅರ್ಜಿಗಳು ತಿರಸ್ಕೃತವಾಗಿದೆ. ಅವುಗಳಿಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು ಎನ್ನಲಾಗಿದೆ.
ಭೂ ಸುಧಾರಣಾ ಕಾಯ್ದೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಅಕ್ರಮ ಸಕ್ರಮ ಅರ್ಜಿಗಳು ತಿರಸ್ಕೃತವಾಗಿದೆ. ಅವುಗಳಿಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು ಎನ್ನಲಾಗಿದೆ.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ