ಮೇಲ್ಮನೆಯ 7 ಅಭ್ಯರ್ಥಿಗಳ ಅವಿರೋಧ ಆಯ್ಕೆ
ಬೆಂಗಳೂರು, ಜೂ.19-ರಾಜ್ಯ ವಿಧಾನಸಭೆ ಯಿಂದ ವಿಧಾನಪರಿಷತ್‍ನ ಏಳು ಸದಸ್ಯ ಸ್ಥಾನಗಳ
ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಸಿದ್ದ 9 ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಇಂದು
ನಡೆದಿದ್ದು, ಇಬ್ಬರ ನಾಮಪತ್ರಗಳು ತಿರಸ್ಕøತಗೊಂಡಿವೆ. ಏಳು ಅಭ್ಯರ್ಥಿಗಳ ನಾಮಪತ್ರಗಳು
ಕ್ರಮಬದ್ಧವಾಗಿವೆ.
ನಿನ್ನೆ ಉಮೇದುವಾರಿಕೆ
ಸಲ್ಲಿಸಿದ್ದ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳಾದ ಮಾಜಿ ಸಚಿವರಾದ ಎಂ.ಟಿ.ಬಿ.ನಾಗರಾಜ್,
ಆರ್.ಶಂಕರ್, ಸುನಿಲ್ ವಲ್ಯಾಪುರೆ, ಕೆ.ಪ್ರತಾಪ್‍ಸಿಂಹ ನಾಯಕ್, ಕಾಂಗ್ರೆಸ್
ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಾಜಿರ್ ಅಹಮ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ
ಗೋವಿಂದ ರಾಜು ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ. ಮೂರು ಪಕ್ಷಗಳ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ.
ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ನಿನ್ನೆ ಸೂಚಕರಾಗಿ
ಯಾವುದೇ ಶಾಸಕರು ಸಹಿ ಮಾಡದಿದ್ದರೂ ಪಕ್ಷೇತರ ಅಭ್ಯರ್ಥಿ ಎ.ಯಡವನಹಳ್ಳಿ ಪಿ.ಸಿ.ಕೃಷ್ಣಗೌಡ
ಹಾಗೂ ಮಂಡಿಕಲ್ ನಾಗರಾಜ ಅವರು ನಾಮಪತ್ರ ಸಲ್ಲಿಸಿದ್ದರು. ರಾಜ್ಯಸಭೆ
ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ
ಪರಿಶೀಲನೆ ನಡೆಸಿದರು.
ಸೂಚಕರ ಸಹಿ ಇಲ್ಲದ ಇವರಿಬ್ಬರ ನಾಮಪತ್ರವನ್ನು
ತಿರಸ್ಕರಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರಗಳು
ಕ್ರಬದ್ಧವಾಗಿವೆ ಎಂದು ಪ್ರಕಟಿಸಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಜೂ.22 ಕಡೆಯ
ದಿನವಾಗಿದ್ದು, ಅಂದು ಸಂಜೆ ವೇಳೆಗೆ ಅವಿರೋಧ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ
ಚುನಾವಣಾ ಅಧಿಕಾರಿ ಪ್ರಕಟಿಸಲಿದ್ದಾರೆ.
(ಮಾಹಿತಿ ಈ ಸಂಜೆ ಕೃಪೆ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ