
ಹೀಗಿದ್ದರೂ ಕೂಡ ಸರ್ಕಾರದ ಆದೇಶ ಧಿಕ್ಕರಿಸಿ ವಿಜಯಪುರದಲ್ಲಿ ಖಾಸಗಿ ಶಾಲೆಯೊಂದು ಆರಂಭವಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಶಾಲೆಯ ಮಾನ್ಯತೆಯನ್ನೇ ರದ್ದುಗೊಳಿಸಿದ್ದಾರೆ.
ಕೊರೊನಾ ಸೋಂಕು
ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಿರಲು
ಚಿಂತನೆ ನಡೆದಿದೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಆದೇಶವನ್ನು ಧಿಕ್ಕರಿಸಿ ವಿಜಯಪುರದ
ರಹೀಂ ನಗರದ ಖಾಸಗಿ ಶಾಲೆಯ ಆಡಳಿತ ಮಂಡಳಿ ಮಕ್ಕಳನ್ನು ಶಾಲೆಗೆ ಕರೆಸಿಕೊಂಡು
ತರಗತಿಗಳನ್ನು ಆರಂಭಿಸಿದೆ.
ಅಲ್ಲದೆ ಮಕ್ಕಳ ಪೋಷಕರಿಂದ ದುಬಾರಿ ಶುಲ್ಕವನ್ನು ಕೂಡ ವಸೂಲಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಎಲ್ಲಾ
ಶಾಲೆಗಳು ಬಂದ್ ಆಗಿದ್ದರೂ ಈ ಶಾಲೆಯಲ್ಲಿ ಮಕ್ಕಳು ಇರುವ ಬಗ್ಗೆ ಸ್ಥಳೀಯರೊಬ್ಬರು
ವಿಡಿಯೋ ಮಾಡಿಕೊಂಡು ಶಿಕ್ಷಣ ಇಲಾಖೆಗೆ ನೀಡಿದ್ದು, ಶಾಲೆಗೆ ಭೇಟಿ ನೀಡಿ ಪರಿಶೀಲನೆ
ನಡೆಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೊರೋನಾ ಆತಂಕದ
ಹೊತ್ತಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದೆ ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡಿದ ಶಾಲೆಯ
ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದು, ಶಿಕ್ಷಣ ಇಲಾಖೆಯಿಂದ
ಶಾಲೆಯ ಮಾನ್ಯತೆಯನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.(ಮಾಹಿತಿ ಕೃಪೆಕನ್ನಡದುನಿಯಾ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ