ನವದೆಹಲಿ : ಯಾವುದೇ ಕಾರಣಕ್ಕೂ ದೇಶದ ಒಂದೇ ಒಂದು ಇಂಚು ಜಾಗವನ್ನು ಬಿಟ್ಡುಕೊಡುವ ಪ್ರಶ್ನೆಯೇ ಇಲ್ಲ ಎಂದು ನೇರವಾಗಿಯೇ ಚೀನಾಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ರಾಷ್ಟ್ರದ ಪ್ರತಿಯೊಂದು ಭಾಗವನ್ನು ಯಾವುದೇ ಬೆಲೆ ತೆತ್ತದಾರೂ ಸರಿಯೇ. ದೇಶದ ರಕ್ಷಣಾ ವಿಷಯದಲ್ಲಿ ನಾವು ಯಾರ ಜೊತೆಯೂ ಸಂಧಾನ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸರ್ವ ಪಕ್ಷಗಳ ಸಭೆಯ ನಂತರ ರಾಷ್ಟವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ತಾಯ್ನಾಡಿಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿರುವ ವೀರ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ಚೀನಾಕ್ಕೆ ಎಚ್ಚರಿಕೆ ಕೊಟ್ಟರು.
ಗಡಿಯಲ್ಲಿ ಈಗ ಮೂಲಸೌಕರ್ಯಗಳನ್ನು ನಿರ್ಮಿಸಲಾಗುತ್ತದೆ.
ಎಲ್ಲಕ್ಕಿಂತ ಮುಖ್ಯವಾಗಿ ನಮಗೆ ದೇಶದ ಸಾರ್ವಭೌಮತೆಯೇ ಮುಖ್ಯ. ಸೇನೆಗೆ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ಗಳು, ಕ್ಷಿಪಣಿಗಳು ಸೇರಿವೆ. ಭೂ, ವಾಯು, ನೌಕಾ ದಳಗಳು ಯಾವುದೇ ದಾಳಿಯನ್ನು ಎದುರಿಸಲು ನಾವು ಸಮರ್ಥವಾಗಿದ್ದೇವೆ ಎಂದು ತಿಳಿಸಿದರು.
ಅಗತ್ಯ ಕ್ರಮಗಳನ್ನಯ ತೆಗೆದುಕೊಳ್ಳಲು ನಮ್ಮ ಸೇನೆಗೆ ಪೂರ್ತಿ ಸ್ವಾತಂತ್ರ್ಯ ನೀಡಲಾಗಿದೆ. ನಮ್ಮ ಸೇನಾ ಪಡೆಗಳು ನಮ್ಮ ಗಡಿಗಳನ್ನು ರಕ್ಷಿಸುವ ಪೂರ್ಣ ಸಾಮರ್ಥ್ಯ ಹೊಂದಿವೆ. ಸೈನಿಕರ ಬೆಂಬಲಕ್ಕೆ ಇಡೀ ದೇಶ ಇರಲಿದೆ ಎಂಬ ಭರವಸೆಯನ್ನು ಯೋಧರಿಗೆ ನಾನು ನೀಡುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಎಲ್‌ಎಸಿ ಬಳಿ ಸೇನೆಯ ಗಸ್ತು ಹೆಚ್ಚಿಸಲಾಗಿದೆ. ನಮ್ಮ ದೇಶ ಸುಭದ್ರವಾಗಿದ್ದು ಯಾರು ಭಯ ಪಡಬೇಕಾದ ಅಗತ್ಯವಿಲ್ಲ. ರಾಷ್ಟ್ರೀಯ ಸುರಕ್ಷತೆಯೇ ನಮ್ಮ ಆಧ್ಯತೆಯಾಗಿದೆ ಎಂದು ನಾನು ಆಶ್ವಾಸನೆ ನೀಡುತ್ತಿದ್ದೇನೆ ಎಂದು ಮೋದಿ ತಿಳಿಸಿದರು.
ಭಾರತದ ಗಡಿಯ ಒಳಗಡೆ ಚೀನಾದವರು ಬಂದಿಲ್ಲ. ಭಾರತ ಮಾತೆಯನ್ನು ಎದುರು ಹಾಕಿದವರಿಗೆ ನಮ್ಮ ಸೈನಿಕರು ಪಾಠ ಕಲಿಸಿ ಬಲಿದಾನ ಮಾಡಿದ್ದಾರೆ. ನಮ್ಮ ಸೈನಿಕರು ಏನು ಮಾಡಬೇಕೋ ಅದನ್ನು ಸರಿಯಾಗಿ ಮಾಡುತ್ತಿದ್ದಾರೆ. ಕ್ರಿಯೆ ತಕ್ಕ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಮೋದಿ ಸರ್ವ ಪಕ್ಷ ಸಭೆಯಲ್ಲಿ ತಿಳಿಸಿದ್ದಾರೆ.
ಆರ್‌ಜೆಡಿ ಮತ್ತು ಆಪ್ ಹೊರತು ಪಡಿಸಿ ಎಲ್ಲಾ ಪಕ್ಷಗಳ ನಾಯಕರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು. ಈ ವೇಳೆ, ಪಕ್ಷಗಳ ನಾಯಕರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮತ್ತು ವಿದೇಶಾಂಗ ಸಚಿವ ಜೈಶಂಕರ್ ವಿವರಣೆ ನೀಡಿದರು.
ಬಳಿಕ ಎಲ್ಲಾ ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯ ಮಂಡಿಸಿದ್ರು. ಗಡಿ ವಿಚಾರವಾಗಿ ಬಹುತೇಕ ನಾಯಕರು ಸರ್ಕಾರಕ್ಕೆ ವಿಶ್ವಾಸ ತುಂಬಿದ್ದಾರೆ. ಭಾರತದ ಸರ್ವಪಕ್ಷ ಸಭೆ ಬೆನ್ನಲ್ಲೇ ಮಾಡೋದನ್ನೆಲ್ಲಾ ಮಾಡಿರುವ ಚೀನಾ ಈಗ ಶಾಂತಿ ಮಂತ್ರ ಜಪಿಸುತ್ತಿದೆ. ಪರಿಸ್ಥಿತಿ ಬಿಗಡಾಯಿಸೋದು ಬೇಡ. ದ್ವಿಪಕ್ಷೀಯ ಬಾಂಧವ್ಯಕ್ಕೆ ಧಕ್ಕೆ ಆಗಬಹುದು ಎಂದು ಹೇಳಿದೆ.
ಮೋದಿ ಭಾಷಣದ ಆರಂಭದಲ್ಲಿ ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ಭಾನುವಾರ ಎಲ್ಲರೂ ಮನೆಯಲ್ಲೇ ಕುಟುಂಬದವರ ಜೊತೆ ಯೋಗ ಮಾಡಿ. ಕೊರೊನಾ ವಿರುದ್ಧ ಹೋರಾಡಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಬೇಕಾಗುತ್ತದೆ. ಯೋಗದಿಂದ ರೋಗ ನಿರೋಧಕ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಮೊದಲಿಗರಾಗಿ ಮಾತು ಆರಂಭಿಸಿದ ವಿರೋಧ ಪಕ್ಷದ ನಾಯಕಿ ಸೋನಿಯಾ ಗಾಂಧಿ, 'ನಮ್ಮನ್ನು ಈಗಲೂ ಕತ್ತಲಿನಲ್ಲಿ ಇಡಲಾಗಿದೆ,' ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಮಮತಾ ಬ್ಯಾನರ್ಜಿ ಸೇರಿ ಇನ್ನುಳಿದ ಹೆಚ್ಚಿನ ನಾಯಕರೆಲ್ಲಾ ಸರಕಾರದ ಜೊತೆಗಿರುವುದಾಗಿ ಭರವಸೆ ನೀಡಿದರು.
ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಲಡಾಖ್‌ನಲ್ಲಿ ನಡೆದ ಘಟನೆಯ ಬಗ್ಗೆ ವಿರೋಧ ಪಕ್ಷಗಳಿಗೆ ವಿವರಣೆ ನೀಡುವುದರೊಂದಿಗೆ ಈ ವರ್ಚುವಲ್ ಸರ್ವಪಕ್ಷ ಸಭೆ ಆರಂಭಗೊಂಡಿತು. ನಂತರ ಪ್ರತಿಪಕ್ಷಗಳ ನಾಯಕರು ಒಬ್ಬೊಬ್ಬರಾಗಿ ತಮ್ಮ ಅಭಿಪ್ರಯಾಗಳನ್ನು ಹೇಳಿದರು
(ಮಾಹಿತಿ ಕೃಪೆ ಈ ಸಂಜೆ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ