WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, June 2, 2020

ಶಾಲೆ ಪುನಾರಂಭ: ಎಸ್ ಡಿ ಎಂಸಿ , ಪೋಷಕರ ಜೊತೆ ಚರ್ಚಿಸಿ ತೀರ್ಮಾನ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸುವ ಸಾಧಕ- ಬಾಧಕಗಳ ಕುರಿತು ಪೋಷಕರು ಮತ್ತು ಸಂಬಂಧಿಸಿದ ಪಾಲುದಾರರ ಸಭೆಗಳನ್ನು ಪ್ರತಿ ಶಾಲೆಯ ಮಟ್ಟದಲ್ಲಿ ಆಯೋಜಿಸಿ ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಮೇ 30ರಂದು ಹೊರಡಿಸಿರುವ ಮಾರ್ಗಸೂಚಿಯಂತೆ ಶಾಲಾಗಳ ಪುನರಾರಂಭಕ್ಕೆ ಸೂಕ್ತ ಸಮಾಲೋಚನೆ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಇದೇ ತಿಂಗಳ 10 ರಿಂದ 12ರ ಒಳಗಾಗಿ ಪೋಷಕರು_ಮತ್ತು_ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರ ಸಭೆ ನಡೆಸಿ ಚರ್ಚೆ ನಡೆಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.  ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ, ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನ, ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಚರ್ಚೆ ನಡೆಸಿ ಸರ್ಕಾರಕ್ಕೆ ಅಭಿಪ್ರಾಯ ತಿಳಿಸುವಂತೆ ಮುಖ್ಯೋಪಧ್ಯಾಯರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
(ಮಾಹಿತಿ ಕೃಪೆ ಕನ್ನಡಪ್ರಭ...)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ