ಬೆಳಗಾವಿ: ರಾಮದುರ್ಗ ತಾಲೂಕಿನ ಅಂಗವಿಕಲ ಯುವತಿಯೊಬ್ಬಳು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರ ಬಳಿ ಕಣ್ಣೀರಿಟ್ಟ ಘಟನೆ ಗುರುವಾರ ನಡೆದಿದೆ.
ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜನತಾ ದರ್ಶನಕ್ಕೆ ಬಂದಿದ್ದ ಅಂಗವಿಕಲ ಯುವತಿ ಸಲೀಮಾ ಅವರಿಗೆ ಅನುಕಂಪ ತೋರಿ ರಾಮದುರ್ಗ ತಹಸೀಲ್ದಾರ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸಲಾಗಿತ್ತು. ಈಗ ದಿಢೀರನೆ ಕೆಲಸದಿಂದ ತೆಗೆದಿದ್ದಾರೆ. ಇದರಿಂದ ಮನನೊಂದ ಆ ಯುವತಿ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಎದುರು 'ನನಗೆ ನ್ಯಾಯ ಕೊಡಿಸಿ' ಎಂದು ಮಕ್ಕಳಂತೆ ಗಳಗಳನೆ ಅತ್ತರು.
'ಕಳೆದ ಅಕ್ಟೋಬರ್‌ನಿಂದ ಪ್ರಸಕ್ತ ವರ್ಷದ ಮಾರ್ಚ್‌ವರೆಗೂ ಕೆಲಸ ಮಾಡಿರುವೆ.
ತಿಂಗಳಿಗೆ 5 ಸಾವಿರ ರೂ. ಸಂಬಳ ಎಂದು ಹೇಳಿ 5 ತಿಂಗಳು ಕೆಲಸ ಮಾಡಿಸಿಕೊಂಡು ಕೇವಲ 10 ಸಾವಿರ ರೂ. ನೀಡಿದ್ದಾರೆ. ಈಗ ಮತ್ತೆ ಕೆಲಸಕ್ಕೆ ಹೋದರೆ ಬರುವುದು ಬೇಡ ಎನ್ನುತ್ತಿದ್ದಾರೆ' ಎಂದು ಅಳಲು ತೋಡಿಕೊಂಡಳು. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ, ಗುತ್ತಿಗೆ ಆಧಾರದ ಮೇಲೆ ಕೆಲಸ ಕೊಡಿಸುವೆ ಎಂದು ತಿಳಿಸಿದರು. ಅಷ್ಟಕ್ಕೆ ಸುಮ್ಮನಾಗದ ಯುವತಿ, ತಕ್ಷಣವೇ ಬಾಕಿ ಸಂಬಳ ಹಾಗೂ ಕೆಲಸ ನೀಡುವಂತೆ ಹಠ ಹಿಡಿದಳು. ಆದರೆ, ಜಿಲ್ಲಾಧಿಕಾರಿ ಅವರು ಭರವಸೆ ನೀಡಿ ಹೊರಟು ಹೋದರು.
(ಮಾಹಿತಿ ಕೃಪೆ ವಿಜಯವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ