ರಾಜ್ಯದಲ್ಲಿ ಇಂದು 2313 ಹೊಸ ಸೋಂಕು ಪ್ರಕರಣ ; ಒಂದೇ ದಿನ 57 ಸಾವು
ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಒಂದೇ ದಿನದಲ್ಲಿ 2313 ಕೋವಿಡ್ 19 ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಮಾತ್ರವಲ್ಲದೇ ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕು ಸಂಬಂಧಿತ ಪ್ರಕರಣಗಳಲ್ಲಿ ಒಟ್ಟು 57 ಜನರು ಮೃತಪಟ್ಟಿದ್ದಾರೆ.
ಇಂದೂ
ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ.
ಮತ್ತು ಇಲ್ಲಿ ಇಂದು ಒಟ್ಟು 1447 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.
ಇಂದು
ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 57 ಜನ ಬಲಿಯಾಗಿದ್ದಾರೆ. ಈ ಮೂಲಕ
ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಸಂಖ್ಯೆ 543ಕ್ಕೆ ಏರಿಕೆ ಆಗಿದೆ.
ರಾಜ್ಯ
ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತೀ ಹೆಚ್ಚಿನ 1447
ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು ರಾಜಧಾನಿಯಲ್ಲಿ ಸೋಂಕಿನ ಆರ್ಭಟ ಮಿತಿ
ಮೀರುತ್ತಿದೆ.
ಉಳಿದಂತೆ ದಕ್ಷಿಣ ಕನ್ನಡ, ವಿಜಯಪುರ, ಬಳ್ಳಾರಿ, ಕಲಬುರಗಿ,
ಯಾದಗಿರಿ, ಮೈಸೂರು ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇಂದು ಅತೀ ಹೆಚ್ಚಿನ ಸೋಂಕು
ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯಾದ್ಯಂತ ಒಟ್ಟು 1003 ಕೋವಿಡ್
ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ
ಇಂದಿನವರೆಗೆ ಒಟ್ಟು 33418 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು
ಇವರಲ್ಲಿ 13836 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ
ಸಂಖ್ಯೆ 19035 ಇದೆ.
(ಮಾಹಿತಿ
ಉದಯವಾಣಿ ಕೃಪೆ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ