Breaking: ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!
ಬೆಂಗಳೂರು, ಜುಲೈ 11: ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣ ತಪ್ಪಿರುವ
ಹಿನ್ನೆಲೆ ಒಂದು ವಾರ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಪೂರ್ಣ
ಲಾಕ್‌ಡೌನ್ ಜಾರಿ ಮಾಡಲಾಗಿದೆ.
14.07.2020ರ ಮಂಗಳವಾರ ರಾತ್ರಿ 8.00
ಗಂಟೆಯಿಂದ ಏಳು ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ
ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತೆ ಎಂದು ಮುಖ್ಯಮಂತ್ರಿ
ಯಡಿಯೂರಪ್ಪ ಟ್ವಿಟ್ಟರ್‌ನಲ್ಲಿ ಖಚಿತಪಡಿಸಿದ್ದಾರೆ..
ಈ ಅವಧಿಯಲ್ಲಿ ಎಂದಿನಂತೆ
ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ
ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು
ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.
ದಿನಬಳಕೆ
ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ
ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ.
ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ
ಕೊವಿಡ್ ನಿಯಂತ್ರಣ ಮಾಡಲು ಒಂದು ವಾರ ಲಾಕ್‌ಡೌನ್ ಅಗತ್ಯ ಎಂದು ತಜ್ಞರು ಸಿಎಂಗೆ ಸಲಹೆ
ನೀಡಿದ್ದರು. ತಜ್ಞರ ಸಲಹೆ ಸಮ್ಮತಿಸಿರುವ ಯಡಿಯೂರಪ್ಪ ಬೆಂಗಳೂರು ಲಾಕ್‌ಡೌನ್ ಮಾಡಲು
ಒಪ್ಪಿದ್ದಾರೆ.
(ಮಾಹಿತಿ Oneindia ಕೃಪೆ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ