ಹೊಸದಿಲ್ಲಿ / ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ
ಆಯ್ಕೆಯಾದ ಅನಂತರ ಇದೇ ಮೊದಲ ಬಾರಿಗೆ ಪಕ್ಷದ ಸಂಘಟನೆಯಲ್ಲಿ ಬದಲಾವಣೆಗೆ ಕೈ ಹಾಕಿರುವ
ಜೆ.ಪಿ.ನಡ್ಡಾ ಅವರು ಕರ್ನಾಟಕದ ಮೂವರಿಗೆ ಪ್ರಮುಖ ಸ್ಥಾನ ನೀಡಿದ್ದಾರೆ. ಸಂಸದ ತೇಜಸ್ವಿ
ಸೂರ್ಯ ಅವರಿಗೆ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಸ್ಥಾನ, ಸಚಿವ ಸಿ.ಟಿ. ರವಿಗೆ
ಪ್ರಧಾನ ಕಾರ್ಯದರ್ಶಿ ಹುದ್ದೆ ಮತ್ತು ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರ ಶೇಖರ್
ಅವರಿಗೆ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನ ನೀಡಲಾಗಿದೆ.
ರಾಜ್ಯದ ಮತ್ತೂಬ್ಬ ನಾಯಕ ಬಿ.ಎಲ್.ಸಂತೋಷ್ ಅವರು ಪಕ್ಷದ ಪ್ರಮುಖ ಸ್ಥಾನವಾದ ಪ್ರಧಾನ ಕಾರ್ಯದರ್ಶಿ (ಸಂಘಟನೆ)ಯಲ್ಲಿ ಮುಂದುವರಿಯಲಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ರಾಮ್ ಮಾಧವ್ ಮತ್ತು ಕರ್ನಾಟಕ ಉಸ್ತುವಾರಿ ಪಿ.
ಮುರಳೀಧರ ರಾವ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆರವು ಮಾಡಲಾಗಿದೆ.
ಬಿಜೆಪಿ
ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಿದ ಪ್ರಧಾನಿ ಮೋದಿ,
ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ
ಸಂಘಟನೆಯ ಹಿರಿಯರಿಗೆ ನನ್ನ ಪ್ರಣಾಮಗಳು. -ತೇಜಸ್ವಿ ಸೂರ್ಯ
(ಮಾಹಿತಿ ಕೃಪೆ ಉದಯವಾಣಿ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ