ಬಳ್ಳಾರಿ: ಹೊಸಪೇಟೆಯ ತುಂಗಭದ್ರಾ ಡ್ಯಾಂನಿಂದ, ತುಂಗಭದ್ರಾ ನದಿಗೆ 35 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ.
ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿದ್ದು, ಭಾರೀ ಪ್ರಮಾಣದ ನೀರು ಜಲಾಶಯ ಸೇರುತ್ತಿದೆ. ಡ್ಯಾಂನ ಒಳಹರಿವು 40 ಸಾವಿರ ಕ್ಯುಸೆಕ್ಗೆ ಏರಿಕೆಯಾಗಿದೆ. ಒಮ್ಮೆಲೆ ಒಳಹರಿವು ಏರಿಕೆಯಾದ ಹಿನ್ನೆಲೆ ತುಂಗಭದ್ರಾ ಮಂಡಳಿ ಜಲಾಶಯದ 10 ಗೇಟ್ಗಳನ್ನು ತೆರೆದು ನದಿಗೆ ನೀರು ಹರಿಸಿದೆ.
ಜಲಾಶಯದ ಗರಿಷ್ಠ ಮಟ್ಟ 1,633 ಅಡಿ ಹಾಗೂ ನೀರಿನ ಸಂಗ್ರಹ ಸಾಮರ್ಥ್ಯ 100.855 ಟಿಎಂಸಿ ಇದೆ. ನದಿಗೆ ನೀರು ಹರಿಸಿದ ಹಿನ್ನೆಲೆ, ಹಂಪಿಯ ಕೆಲ ಸ್ಮಾರಕಗಳು ಜಲಾವೃತವಾಗಿವೆ.
(ಮಾಹಿತಿ ಕೃಪೆ news first live)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ