
ಬಳ್ಳಾರಿ: 'ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಉಳಿಯುವುದಿಲ್ಲ' ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದರು.
ಉತ್ತರ ಕರ್ನಾಟಕ ಜಿಲ್ಲೆಗಳ ವೈಮಾನಿಕ ಸಮೀಕ್ಷೆಗೆ ತೆರಳುವ ಮುನ್ನ ಜಿಂದಾಲ್‌ನ ಏರ್ ಸ್ಟ್ರಿಪ್‌ಗೆ ಬಂದಿಳಿದ ಅವರು, ಯತ್ನಾಳ ಹೇಳಿಕೆ ಕುರಿತು ಯಾವ ಪ್ರತಿಕ್ರಿಯೆಯನ್ನೂ ನೀಡದೆ ನಿರ್ಗಮಿಸಿದರು.
'ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆಯಾಗಿದೆ, ಇಂದು ಕಲಬುರ್ಗಿ, ವಿಜಯಪುರ, ಯಾದಗಿರಿಗೆ ವೈಮಾನಿಕ ಸಮೀಕ್ಷೆಗೆ ಹೋಗುತ್ತಿದ್ದೇನೆ. ನಂತರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು' ಎಂದು ಸುದ್ದಿಗಾರರಿಗೆ ತಿಳಿಸಿದರು
'ಮನೆ ಕಳೆದುಕೊಂಡವರು ಹಾಗೂ, ಬೆಳೆ ಹಾನಿ ಬಗ್ಗೆ ಮಾಹಿತಿ ಪಡೆದು ಪರಿಹಾರ ಕೊಡಲಾಗುವುದು. ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಲಾಗಿದೆ' ಎಂದರು.
'ರಾಜ್ಯದಲ್ಲಿ ಆದ ಮಳೆ ನಷ್ಟದ ಕುರಿತು ಪ್ರಧಾನಮಂತ್ರಿಯ ಗಮನವನ್ನೂ ಸೆಳೆಯಲಾಗಿದೆ' ಎಂದರು.
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ