
ಬೆಂಗಳೂರು: 'ನಾವು ನಿಮ್ಮ ಜತೆ ಇದ್ದೇವೆ' ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬ ಬೇಡಿಕೆ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಹಾಗೂ ನಗರ ಸಾರಿಗೆ ಸಂಸ್ಥೆಗಳ ನೌಕರರನ್ನು ಬನಶಂಕರಿ ಬಸ್ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಭೇಟಿ ಮಾಡಿದ ಶಿವಕುಮಾರ್, ನೌಕರರ ಅಹವಾಲು ಆಲಿಸಿದರು.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರು, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ದೊಡ್ಡ ಆಲಹಳ್ಳಿ ಕಾಂಗ್ರೆಸ್ ಮುಖಂಡ ಬಾಬು ಜೊತೆ ಇದ್ದರು.
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ