ಬೆಂಗಳೂರು: ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ನಡೆಯುತ್ತಿರುವ ಭಾರತ್ ಬಂದ್ ಉದ್ದೇಶಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಕೆ.ಸುಧಾಕರ್ ಅವರು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
ಯಡಿಯೂರಪ್ಪ ಅವರು, ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವ ಸಲುವಾಗಿ ಮಸೂದೆಗಳನ್ನು ಜಾರಿಗೆ ತರಲಾಗಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದುವರಿಯಲಿದ್ದು, ರೈತರು ಹೆಚ್ಚಿನ ಲಾಭ ಗಳಿಸಲು ಈ ಕಾಯ್ದೆಗಳು ನೆರವು ನೀಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಪ್ರತಿಪಕ್ಷಗಳು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಕಾಯ್ದೆಗಳನ್ನು ವಿರೋಧಿಸುತ್ತಿವೆ. ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ.
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ