
ಬೆಂಗಳೂರು, ಡಿಸೆಂಬರ್ 12: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ನಿರೀಕ್ಷೆ ಇದೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಉಡುಪಿಯ ಕೋಟಾದಲ್ಲಿ 2 ಸೆಂ.ಮೀ, ಮಾಣಿ, ಕದ್ರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೀದರ್‌ನಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ತುಂತುರು ಮಳೆಯಾಗುತ್ತಿದೆ.(ಮಾಹಿತಿ ಕೃಪೆ Oneindia)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ