WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, May 2, 2020

ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮಗೆ ಎಷ್ಟು ದುಡ್ಡು ಬೇಕು ಹೇಳಿ

ಡಿ.ಕೆ ಶಿವಕುಮಾರ್
ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮಗೆ ಎಷ್ಟು ದುಡ್ಡು ಬೇಕು ಹೇಳಿ ಕೆಪಿಸಿಸಿ ವತಿಯಿಂದ ನಾನು ಕಟ್ಟಿ ಕೊಡುತ್ತೇನೆ. ಆದರೆ ಬೆಳಗ್ಗೆಯಿಂದ ಊಟ ತಿಂಡಿ ಇಲ್ಲದೇ ಕಂಗಾಲಾಗಿರುವ ಈ ಪ್ರಯಾಣಿಕರು ಸುರಕ್ಷಿತವಾಗಿ ಅವರ ಊರಿಗೆ ಹೋಗಲು ಬಸ್ ವ್ಯವಸ್ಥೆ ಕಲ್ಪಿಸಿ ಈ ಸರ್ಕಾರಕ್ಕೆ ಒಂದು ಸಣ್ಣ ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ

ಕೋವಿಡ್19 ನಿಯಂತ್ರಣ ಹಾಗೂ ಲಾಕ್ ಡೌನ್ ಕುರಿತು ಮುಖ್ಯಮಂತ್ರಿ ಶ್ರೀ @BSYBJP ಅವರು ಜಿಲ್ಲಾಧಿಕಾರಿಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು.



ನಡು ರಸ್ತೆಯಲ್ಲೇ ಸಚಿವ ಈಶ್ವರಪ್ಪ ಕಾಲಿಗೆ ಅಡ್ಡಬಿದ್ದ ತಹಸೀಲ್ದಾರ್‌..!

ಶಿವಮೊಗ್ಗ(ಮೇ.02): ತಾಲೂಕು ದಂಡಾಧಿಕಾರಿಯೂ ಆಗಿರುವ ತಹಶೀಲ್ದಾರ್‌ ಸಚಿವರ ಕಾಲಿಗೆ ಸಾರ್ವಜನಿಕವಾಗಿ ಅಡ್ಡ ಬಿದ್ದು ನಮಸ್ಕರಿಸಿದ ಘಟನೆ ಶುಕ್ರವಾರ ಇಲ್ಲಿ ನಡೆದಿದ್ದು, ಈ ಪ್ರಸಂಗ ಸಾರ್ವಜನಿಕರ ತೀವ್ರ ಟೀಕೆಗೆ ಒಳಗಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಎನ್‌. ಜೆ.ನಾಗರಾಜ್‌ ಅವರೇ ಈ ರೀತಿ ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿದವರು.
ತಮ್ಮ ಖಡಕ್‌ ಶೈಲಿಯಿಂದ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದ ತಹಸೀಲ್ದಾರ್‌ ಗಿರೀಶ್‌ ವರ್ಗಾವಣೆಗೊಂಡ ಬಳಿಕ ಆ ಸ್ಥಾನಕ್ಕೆ ನಿಯುಕ್ತಿಗೊಂಡ ನಾಗರಾಜ್‌ ಗುರುವಾರವಷ್ಟೇ ಅಧಿಕಾರ ಸ್ವೀಕರಿಸಿದ್ದರು. ಇದಕ್ಕೆ ಮುನ್ನ ಇವರು ಚೆನ್ನಗಿರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಶಂಕರಮೂರ್ತಿಗೆ ಮೋದಿ ದೂರವಾಣಿ ಕರೆ, ಸಹಪಾಠಿ ಆರೋಗ್ಯ ವಿಚಾರಿಸಿದ ಪ್ರಧಾನಿ
ಶುಕ್ರವಾರ ಮಧ್ಯಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.
ಈಶ್ವರಪ್ಪ ಅವರು ಓಂ ಶಕ್ತಿ ಸಂಘಟನೆಯಿಂದ ಬಡವರಿಗೆ ಆಹಾರದ ಕಿಟ್‌ ಹಂಚುವ ಕಾರ್ಯಕ್ರಮಕ್ಕೆಂದು ಹಳೆ ತೀರ್ಥಹಳ್ಳಿ ರಸ್ತೆಗೆ ಆಗಮಿಸಿದ ವೇಳೆ ಅಲ್ಲಿಗೆ ಆಗಮಿಸಿದ ನಾಗರಾಜ್‌ ದಿಢೀರನೆ ಸಚಿವರ ಕಾಲಿಗೆ ಎರಗಿದರು. ಇದರ ಬೆನ್ನಲ್ಲೇ ಜೊತೆಗಿದ್ದ ಕಂದಾಯ ಅಧಿಕಾರಿ ವಿಜಯ್‌ಕುಮಾರ್‌ ಕೂಡಾ ಕಾಲಿಗೆ ಬಿದ್ದರು. ಈ ಘಟನೆ ಕಂಡು ಸಾರ್ವಜನಿಕರು ಒಂದು ಕ್ಷಣ ಆವಕ್ಕಾದರು. ತಾಲೂಕು ದಂಡಾಧಿಕಾರಿಯೂ ಆದ ತಹಶೀಲ್ದಾರ್‌ ಅವರ ಈ ವರ್ತನೆಗೆ ಸಾರ್ವಜನಿಕವಾಗಿ ವ್ಯಾಪಕ ಟೀಕೆ ಎದುರಾಗಿದೆ.

ಸಿಎಂ-ಜಿಲ್ಲಾಧಿಕಾರಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಪ್ರಮುಖಾಂಶಗಳು..!

ಬೆಂಗಳೂರು, (ಮೇ.೦2): ಲಾಕ್‌ಡೌನ್‌ ಅನ್ನು ಕೇಂದ್ರ ಸರ್ಕಾರ ಮೇ.17ರ ವರೆಗೆ ವಿಸ್ತರಿಸಿದ ಬೆನ್ನಲ್ಲೇ ಇತ್ತ ರಾಜ್ಯ ಸರ್ಕಾರ ಮುಂದೆ ಏನ್ಮಾಡ್ಬೇಕು ಎನ್ನುವ ಬಗ್ಗೆ ಸಿಎಂ ಸಭೆ ನಡೆಸಿದರು.
ಕೋವಿಡ್-19 ನಿಯಂತ್ರಣ ಹಾಗೂ ಲಾಕ್ ಡೌನ್ ವಿಷಯಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.
ಮದ್ಯ ಬೆನ್ನಲ್ಲೇ KSRTC ಬಸ್ ಸಂಚಾರಕ್ಕೂ ಅನುಮತಿ: ಯಾವಾಗಿನಿಂದ..?
ಇಂದು (ಶನಿವಾರ) ವೀಡಿಯೊ ಕಾನ್ಫರೆನ್ಸ್‌ನಲ್ಲಿ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
* ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.
* ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ ವಹಿಸಲು ಅವರು ನಿರ್ದೇಶಿಸಿದರು.
* ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನ.
* ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಸೂಚನೆ.
* ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ನಿರ್ಧಾರ.
* ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಕ್ಸಸ್ ಆಯ್ತು ಕೊರೋನಾ ಗುಣಪಡಿಸುವ ಔಷಧ: ಡೊನಾಲ್ಡ್ ಟ್ರಂಪ್ ಮಹತ್ವದ ನಿರ್ಧಾರ

ಕೊರೋನಾ ನಿವಾರಣೆಗೆ ರಾಮಬಾಣ ಎಂದೇ ಹೇಳಲಾಗುತ್ತಿರುವ ರೆಮ್ ಡಿಸಿವರ್ ಔಷಧವನ್ನು ಸೋಂಕಿತರಿಗೆ ನೀಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಗೆ ಸೂಚಿಸಿದ್ದಾರೆ.
ಪ್ರಯೋಗದ ವೇಳೆ ಕೊರೋನಾ ಸೋಂಕಿತರಿಗೆ ನೀಡಲಾದ ರೆಮ್ ಡಿಸಿವರ್ ಔಷಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಈ ಔಷಧವನ್ನು ಪಡೆದ ಶೇಕಡ 50 ರಷ್ಟು ಮಂದಿ ಬೇಗನೆ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಔಷಧವನ್ನು ಸೋಂಕಿತರಿಗೆ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ ತಪ್ಪು ಮಾಹಿತಿಯನ್ನು ನೀಡಿತ್ತು ಎಂದು ಡೊನಾಲ್ಡ್ ಟ್ರಂಪ್ ಆರೋಪ ಮಾಡಿದ್ದಾರೆ. ಆದರೆ ಅವರ ಆರೋಪವನ್ನು ಅಲ್ಲಗಳೆದಿರುವ ವಿಶ್ವ ಆರೋಗ್ಯ ಸಂಸ್ಥೆ ಜನವರಿ 30 ರಂದೇ ಅಪಾಯದ ಮುನ್ಸೂಚನೆ ನೀಡಲಾಗಿತ್ತು ಎಂದು ಹೇಳಿದೆ.

ಸರಕಾರದಿಂದ ಅವ್ಯವಹಾರ: ಡಿಕೆಶಿ

ಬೆಂಗಳೂರು: ಸರಕಾರಕ್ಕೆ ನೀಡಿದ್ದ ಸಹಕಾರ ಕಾಲಾವಕಾಶ ಮುಗಿದಿದೆ. ಬಡವರಿಗೆ ವಿತರಿಸುವ ಅಕ್ಕಿಯಿಂದ ಹಿಡಿದು, ಹಾಲು, ತರಕಾರಿ, ದಿನಸಿ ಹಂಚಿಕೆವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇನ್ನೇನಿದ್ದರೂ ನಾವು ಸರಕಾರದ ವೈಫಲ್ಯಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ.
ರೈತರು ಮತ್ತಿತರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿ, ರಾಜಕಾರಣ ಮಾಡಬಾರದು ಮತ್ತು ಮಾನವೀಯತೆ ದೃಷ್ಟಿಯಿಂದ ಸರಕಾರದ ಜತೆ ಕೈ ಜೋಡಿಸಿದ್ದೇವೆ. ಕಳೆದ 40 ದಿನಗಳಲ್ಲಿ ಸರಕಾರ ಏನು ಮಾಡಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಸಚಿವರ ನಡುವೆ ಸಮನ್ವಯತೆ, ಅಧಿಕಾರಿಗಳಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಪ್ರತಿ ವಿಚಾರದಲ್ಲೂ ದಂಧೆ ನಡೆಯುತ್ತಿದೆ. ಇದನ್ನು ನೋಡಿಕೊಂಡು ಕುಳಿತುಕೊಳ್ಳಲು ಇನ್ನು ಸಾಧ್ಯವಿಲ್ಲ ಎಂದು ಹೇಳಿದರು.ಪಿಂಚಣಿ ಹಣ ಸರಿಯಾಗಿ ತಲುಪಿಲ್ಲ
ಕೇಂದ್ರ ಮತ್ತು ರಾಜ್ಯ ಸರಕಾರ ಜನರಿಗೆ ಏನು ಆಶ್ವಾಸನೆ ಕೊಟ್ಟರೋ ಅದರಲ್ಲಿ ಒಂದೇ ಒಂದೂ ಕಾರ್ಯ ರೂಪಕ್ಕೆ ಬಂದಿಲ್ಲ. ಆಹಾರ ವಿತರಣೆಯಲ್ಲಿ ಶೇ. 20ರಷ್ಟು ಕೆಲಸ ಆಗಿರುವುದು ಬಿಟ್ಟರೆ, ಆರೋಗ್ಯ ವಿಷಯದಿಂದ ಹಿಡಿದು ಕಾರ್ಮಿಕರ ಸಮಸ್ಯೆವರೆಗೂ ಎಲ್ಲೂ ಕೆಲಸ ಆಗಿಲ್ಲ. ಆದಾಯ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿದಾಗ ಪಿಂಚಣಿ ಹಣ ಕೂಡ ಸರಿಯಾಗಿ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದು ಗೊತ್ತಾಗಿದೆ.ಇದನ್ನು ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
“ಎಲ್ಲ ವಿಚಾರಗಳಲ್ಲೂ ಸರಕಾರ ವಿಫಲ’
ಹಾಲು, ಅಕ್ಕಿ ಕೊಡುವುದರಲ್ಲೂ ಅವ್ಯವಹಾರ. ಈವರೆಗೂ ಸರಕಾರ ಒಂದೇ ಒಂದು ಕಡೆ ತರಕಾರಿಗಳನ್ನು ಖರೀದಿ ಮಾಡಿಲ್ಲ. ಇನ್ನು ವಾಹನ ಸಾಲ ಪಡೆದಿರುವವರಿಗೆ ಕಂತಿನ ವಿನಾಯಿತಿ, ಬಡ್ಡಿ ಮನ್ನಾ ಅಥವಾ ವಿಮೆ ಕಂತು ತಡವಾಗಿ ಕಟ್ಟಲು ಅವಕಾಶ ಕಲ್ಪಿಸಲಾಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಎಲ್ಲ ವಿಚಾರಗಳಲ್ಲೂ ವಿಫಲವಾಗಿರುವುದು ಎದ್ದು ಕಾಣುತ್ತದೆ. ಇಂಥ ಪರಿಸ್ಥಿತಿಯಲ್ಲಿ ಸರಕಾರಗಳು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದನ್ನು ನಾನು ಈವರೆಗೂ ನೋಡಿರಲಿಲ್ಲ. ವಿಪಕ್ಷದ ಪ್ರತಿನಿಧಿಗಳಾಗಿ ನಮ್ಮ ನಾಯಕರು ವಾಹನ ಚಾಲಕರಿಂದ, ಅಸಂಘಟಿತ ಕಾರ್ಮಿಕರವರೆಗೂ ಸಮಾಜದ ಎಲ್ಲ ವರ್ಗದವರನ್ನು ಕರೆದು ಮಾತನಾಡಿ ಅವರ ಕಷ್ಟಕ್ಕೆ ಧ್ವನಿಯಾಗಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

Friday, May 1, 2020

ಎಸ್‌ಬಿಐಗೆ 173 ಕೋಟಿ ರೂ ವಂಚಿಸಿದ ದೆಹಲಿ ಮೂಲದ ಕಂಪನಿ

ನವದೆಹಲಿ: ಇಡೀ ದೇಶ ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದ ತತ್ತರಿಸುತ್ತಿದ್ದರೆ ಅತ್ತ ದೆಹಲಿ ಮೂಲದ ಕಂಪನಿ ವಿರುದ್ಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಬಹುಕೋಟಿ ವಂಚಿಸಿದ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 173 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ದೆಹಲಿ ಮೂಲದ ಕಂಪನಿ ಮತ್ತು ಅದರ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಶುಕ್ರವಾರ ತಿಳಿಸಿದೆ.
ದೆಹಲಿಯ ರೋಹಿನಿಯಲ್ಲಿ ನೋಂದಾಯಿತ ಕಚೇರಿ ರಾಮ್ ದೇವ್ ಇಂಟರ್‌ನ್ಯಾಷನಲ್‌ ಲಿಮಿಟೆಡ್ ಕಂಪನಿ ಮೇಲೆ ಪ್ರಕರಣ ದಾಖಲಾಗಿದೆ ಹಾಗೂ ಅದರ ನಿರ್ದೇಶಕರಾದ ನರೇಶ್ ಕುಮಾರ್, ಸುರೇಶ್ ಕುಮಾರ್ ಮತ್ತು ಸಂಗಿತಾ ಸೇರಿದಂತೆ ಮೂವರು ಅಪರಿಚಿತ ಸಾರ್ವಜನಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಕರ್ನಲ್‌ ಶಾಖೆಗೆ ಈ ಕಂಪನಿಯು 173.11 ಕೋಟಿ ರೂ ಬೃಹತ್‌ ಮೊತ್ತದ ವಂಚನೆ ಹಾಗೂ ಮೋಸ ಮಾಡಿದೆ. ಬ್ಯಾಂಕ್‌ ಮೂಲಕ ಸಾಲ ಪಡೆದು ಕಂಪನಿಯ ಆವರಣದಲ್ಲಿ ನಿರ್ಮಿಸಿದ್ದ ಯಂತ್ರೋಪಕರಣಗಳನ್ನು ಅನಧೀಕೃತವಾಗಿ ತೆಗೆಯಲಾಗಿದೆ. ಅಲ್ಲದೇ, ಸಾಲ ಪಡೆಯಲು ಹಲವು ನಕಲಿ ದಾಖಲೆಗಳನ್ನು ನೀಡಲಾಗಿದ ಎಂದು ಸಿಬಿಐ ವಕ್ತಾರ ಆರ್ ಕೆ ಗೌರ್ ಅವರು ತಿಳಿಸಿದ್ದಾರೆ.

ಕೊನೆಗೂ ಕುಡುಕರ ಮೊರೆ ಆಲಿಸಿದ ಕೇಂದ್ರ; ಹಸಿರು ವಲಯಗಳಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹೇರಿದಾಗಿನಿಂದಲೂ ಬಂದ್ ಆಗಿದ್ದ ಮದ್ಯದಂಗಡಿಗಳ ಬಾಗಿಲು ತೆರೆಯಲು ಕೊನೆಗೂ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಹೌದು.. ದೇಶದ ಹಸಿರು ವಲಯಗಳಲ್ಲಿ ಮೇ 4ರಿಂದ ಮದ್ಯ ಮಾರಾಟಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಲಾಕ್ ಡೌನ್ ವಿಸ್ತರಣೆಗೆ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಹಸಿರು ವಲಯಗಳಲ್ಲಿ ಮದ್ಯದಂಗಡಿಗಳು ಮತ್ತು ಪಾನ್ ಅಂಗಡಿಗಳನ್ನು ತೆರೆಯಬಹುದು ಎಂದು ಸೂಚಿಸಿದೆ. ಆದರೆ, ಮದ್ಯದಂಗಡಿಯಿಂದ ಪಾರ್ಸಲ್ ಕೊಂಡೊಯ್ಯಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪರಸ್ಪರ ಕನಿಷ್ಠ ಆರು ಅಡಿ ದೂರವನ್ನು ಕಾಪಾಡಬೇಕು. ಅಂಗಡಿಯಲ್ಲಿ ಒಂದೇ ಸಮಯದಲ್ಲಿ ಐದಕ್ಕಿಂತ ಹೆಚ್ಚು ಜನರು ಇರುವಂತಿಲ್ಲ. ಕೇವಲ 5 ಜನ ಮಾತ್ರ ಒಂದೇ ಬಾರಿಗೆ ಇರಬೇಕು ಎಂಬ ನಿಯಮಗಳನ್ನು ವಿಧಿಸಲಾಗಿದೆ.
ಪಾನ್ ಅಂಗಡಿಗಳಿಗೂ ಅವಕಾಶ
ಮದ್ಯದಂಗಡಿಗಲು ಮಾತ್ರವಲ್ಲದೇ ಪಾನ್​ ಶಾಪ್​ ತೆರೆಯುವುದಕ್ಕೂ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಸಾಮಾಜಿಕ ಅಂತರ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಉಳಿದಂತೆ ದೇಶವ್ಯಾಪಿ ವಿಮಾನ, ರೈಲು, ಮೆಟ್ರೋ, ಅಂತಾರಾಜ್ಯ ರಸ್ತೆ ಇತ್ಯಾದಿ ಸಂಚಾರ ಸ್ಥಗಿತ ನಿರ್ಧಾರ ಮುಂದುವರಿಯಲಿದೆ. ಹಾಗೆಯೇ, ಶಾಲೆ ಕಾಲೇಜು ಇತ್ಯಾದಿ ಶಿಕ್ಷಣ ಸಂಸ್ಥೆಗಳು ಇರುವುದಿಲ್ಲ. ಸಿನಿಮಾ ಹಾಲ್, ಮಾಲ್​ಗಳು, ಹೊಟೆಲ್, ರೆಸ್ಟೋರೆಂಟ್​ಗಳ ಬಂದ್ ಮುಂದುವರಿಯುತ್ತದೆ. ಜನಜಾತ್ರೆ ಸೇರುವ ಕಾರ್ಯಕ್ರಗಳು ನಿಷಿದ್ಧ. ಪೂಜಾ ಮಂದಿರಗಳಿಗೂ ಅವಕಾಶ ಇರುವುದಿಲ್ಲ. ಮೊದಲಿದ್ದ ಇವೆಲ್ಲ ನಿರ್ಬಂಧಗಳು ಮೇ 17ರವರೆಗೂ ಮುಂದುವರಿಯಲಿವೆ.

Thursday, April 30, 2020

ಮೇ 4ರ ಬಳಿಕ ರಾಜ್ಯದಲ್ಲಿ ಕೈಗಾರಿಕಾ ಚಟುವಟಿಕೆ ಆರಂಭ: ಸರ್ಕಾರದ ತೀರ್ಮಾನ

ಬೆಂಗಳೂರು:ಮೇ 4 ರ ಬಳಿಕ ಕೋವಿಡ್‌ ಕಂಟೇನ್ಮೆಂಟ್‌ ಬಿಟ್ಟು, ಬೆಂಗಳೂರು ನಗರವೂ ಸೇರಿ ರಾಜ್ಯದ ಎಲ್ಲ ಕಡೆಗಳಲ್ಲಿ ಕೈಗಾರಿಕೆ ಚಟುವಟಿಕೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಮುಂದಿನ ಮೂರರಿಂದ ನಾಲ್ಕು ತಿಂಗಳುಗಳ ಕಾಲ ಕೊರೊನಾ ಸಮಸ್ಯೆ ಇರುತ್ತದೆ. ಅದರ ಜತೆಗೇ ಬದುಕು ಸಾಗಿಸಬೇಕಾಗುತ್ತದೆ ಎಂದೂ ಅವರು ಎಚ್ಚರಿಸಿದರು.ತ
ರಾಜ್ಯದಲ್ಲಿ ಕೋವಿಡ್‌-19 ನಿಯಂತ್ರಣಕ್ಕೆ ಕೈಗೊಂಡ ಕಠಿಣ ಕ್ರಮಗಳು, ಚಿಕಿತ್ಸಾ ಕ್ರಮ, ಸರ್ಕಾರ ಕಲ್ಪಿಸಿದ ಸೌಲಭ್ಯ ಮತ್ತು ಮಾಧ್ಯಮಗಳು ನಡೆಸಿದ ಜಾಗೃತಿ ಆಂದೋಲನದಿಂದಾಗಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲೆಡೆ ಕಳೆದ 3- 4 ದಿನಗಳಿಂದ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ.ಇದೇ ಸ್ಥಿತಿ ಮುಂದುವರಿದರೆ ಬೆಂಗಳೂರು ನಗರದ ಸುತ್ತುಮುತ್ತ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆ ಆರಂಭಿಸಲು ಅನುಕೂಲವಾಗುತ್ತದೆ. ಇನ್ನು ಎರಡು ಮೂರು ದಿನ ಕಾದು ನೋಡುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ಕೈಗಾರಿಕೆಗಳನ್ನು ಆರಂಭಿಸಲು ಏನೆಲ್ಲ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಕೈಗಾರಿಕೋದ್ಯಮಿಗಳ ಜತೆ ಚರ್ಚೆ ನಡೆಸಲಿದ್ದೇವೆ ಎಂದರು.
ಒಂದು ವೇಳೇ ಕೊರೊನಾ ಸಮಸ್ಯೆ 2-3 ತಿಂಗಳು ಮುಂದುವರಿದರೆ, ಕೆಂಪು ವಲಯದಲ್ಲು ಕಠಿಣ ನಿರ್ಬಂಧ ವಿಧಿಸಿ, ಮತ್ತೊಂದು ಕಡೆ ಆರ್ಥಿಕ ಚಟುವಟಿಕೆ ಮುಂದುವರಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರು ಹೇಳಿದಂತೆ, ಕೊರೊನಾ ಸಮಸ್ಯೆ ಜತೆಗೆ ಹೋರಾಡುತ್ತಲೇ, ಆರ್ಥಿಕ ಚಟುವಟಿಕೆ ಪುನಶ್ಚೇತನ ಮಾಡಬೇಕು. ಎರಡೂ ಒಟ್ಟಿಗೆ ನಡೆಯಬೇಕು ಎಂದು ಅವರು ಹೇಳಿದರು.
ಅಂತರ್ ಜಿಲ್ಲೆ- ಅಂತರ್ ರಾಜ್ಯ ಸಂಚಾರ:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲಾಕ್‌ಡೌನ್‌ನಿಂದ ಸಿಕ್ಕಿಕೊಂಡವರು ಅಂತರ್‌ ಜಿಲ್ಲೆ ಮತ್ತು ಅಂತರ್‌ ರಾಜ್ಯಗಳಿಗೆ ಹೋಗಲು ಅಥವಾ ಬರಲು ಒಂದು ಬಾರಿ ಅವಕಾಶ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಇತರರಿಗೆ ಅನುಕೂಲವಾಗಲಿದೆ. ಈ ಸಂಬಂಧ ಮುಖ್ಯಕಾರ್ಯದರ್ಶಿಯವರು ಮಾರ್ಗಸೂಚಿ ಹೊರಡಿಸುವರು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಹೊರ ರಾಜ್ಯಗಳಿಂದ ಬರುವವರು ಇದ್ದರೆ ಅವರನ್ನು ಕೋವಿಡ್‌-19 ಪರೀಕ್ಷೆಗೆ ಒಳಪಡಿಸಿ, ನೆಗೆಟಿವ್‌ ಬಂದರೆ ಮಾತ್ರ ಬರಲು ಅವಕಾಶ ನೀಡಲಾಗುತ್ತದೆ. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ಹೇಳಿದರು.
ಈ ರೀತಿ ತಮ್ಮ ಊರುಗಳಿಗೆ ಹೋಗುವವರು ತಮ್ಮದೇ ಖರ್ಚಿನಲ್ಲಿ ಹೋಗಬೇಕು. ಸರ್ಕಾರ ಖರ್ಚು ವೆಚ್ಚ ಭರಿಸುವುದಿಲ್ಲ. ಒಂದು ಗುಂಪು ಸೇರಿ ಬಸ್ಸಿನಲ್ಲಿ ಹೋಗಲು ಬಯಸಿದರೆ ಅವರಿಗೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಲಾಗುತ್ತದೆ. ಅದರ ವೆಚ್ಚವನ್ನು ಅವರೇ ಭರಿಸಬೇಕಾಗುತ್ತದೆ. ಪ್ರಯಾಣಕ್ಕೆ ಅನುಮತಿಯನ್ನು ಸರ್ಕಾರ ನೀಡುತ್ತದೆ ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದರು.
ಕೆಂಪು ವಲಯ ಬಿಟ್ಟು ಬೇರೆ ಕಡೆಗಳಲ್ಲಿ ಕೈಗಾರಿಕಾ ಚಟುವಟಿಕೆ ನಡೆಸಲು ಅವಕಾಶ ನೀಡಲಾಗುವುದು. ಈ ಸಂಬಂಧ ಕೆಲವರು ಅಂತರ್‌ ಜಿಲ್ಲೆಗಳ ಮಧ್ಯೆ ಓಡಾಡಬೇಕಾಗುತ್ತದೆ. ಅಂತಹವರಿಗೆ ಪಾಸ್‌ ನೀಡಲು ಕೈಗಾರಿಕಾ ಆಡಳಿತ ಮಂಡಳಿಗಳು ಜಿಲ್ಲಾಡಳಿತಗಳಿಗೆ ಮನವಿ ಮಾಡಬಹುದು ಎಂದರು.
* ಮೇ 3 ರವರೆಗೆ ಮದ್ಯದಂಗಡಿಗಳು, ಸಲೂನ್‌ಗಳು ಮತ್ತು ರೆಸ್ಟೊರೆಂಟ್‌ಗಳು ತೆರೆಯುವಂತಿಲ್ಲ. ಈ ಸಂಬಂಧ ಕೇಂದ್ರ ಸರ್ಕಾರದ ನಿರ್ದೇಶನದಂತೆ ಕ್ರಮ
* ಮೇ 3 ರ ಬಳಿಕ ಬಹುತೇಕ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ಪ್ರಧಾನಿಯವರು ಅನುಮತಿ ನೀಡುವ ಸಾಧ್ಯತೆ ಇದೆ.
ಸಚಿವ ಸಂಪುಟದ ಇತರ ತೀರ್ಮಾನಗಳು:
* ಹೊಸ ಮರಳು ನೀತಿಗೆ ಒಪ್ಪಿಗೆ. ಇದರ ಅನ್ವಯ ನದಿ ಪಾತ್ರಗಳಲ್ಲಿ, ಪಟ್ಟಾ ಭೂಮಿಯಲ್ಲಿ, ಕೆರೆ, ಗ್ರಾಮೀಣ ಪ್ರದೇಶದ ಹಳ್ಳಕೊಳ್ಳಗಳಲ್ಲಿ ಮರಳು ಬ್ಲಾಕ್‌ ಗುರುತಿಸಲಾಗುತ್ತದೆ. ಅಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲಾಗುವುದು.
*ಮರಳು ಮೆಟ್ರಿಕ್‌ ಟನ್‌ಗೆ ₹ 700 ರಂತೆ ನಿಗದಿ ಮಾಡಲಾಗುವುದು. ಈ ಮರಳನ್ನು ಜನತಾ ಮನೆ, ಸಣ್ಣಪುಟ್ಟ ನಿರ್ಮಾಣ ಕಾರ್ಯಗಳಿಗೆ ಬಳಸಬಹುದು. ಜಿಲ್ಲಾ ದಂಡಾಧಿಕಾರಿಗಳು ಮತ್ತು ಎಇಇಗಳ ಸಮನ್ವಯದ ಮೂಲಕ ಕಾರ್ಯ ನಿರ್ವಹಿಸಬೇಕು. ಇದರಿಂದ ಮರಳು ದಂಧೆಗೆ ಕಡಿವಾಣ ಬೀಳಲಿದೆ. ಬೇಕಾಬಿಟ್ಟಿ ಮಾರಾಟಕ್ಕೆ ಮತ್ತು ದರ ನಿಗದಿ ಮಾಡಲು ಅವಕಾಶವಿಲ್ಲ.
*ಇದರಿಂದ ಸರ್ಕಾರಕ್ಕೆ ಸುಮಾರು ₹200 ಕೋಟಿ ರಾಜಸ್ವ ನಿರೀಕ್ಷಿಸಲಾಗಿದೆ. ಹಿಂದೆ ₹130 ಕೋಟಿ ಸಿಗುತ್ತಿತ್ತು.
* ನಾಗರಿಕಾ ಸೇವಾ ವರ್ಗೀಕರಣದಡಿ ಶಿಸ್ತುಕ್ರಮಕ್ಕೊಳಗಾದ ನೌಕರರಿಗೆ ಶಿಕ್ಷೆ ಪ್ರಮಾಣ ನಿಗದಿ.
* ಶಿಕ್ಷಣ ಇಲಾಖೆಯಲ್ಲಿ ಸಂಬಳ ಬಿಡುಗಡೆ ಸಂಬಂಧ ಲೆಕ್ಕ ಶೀರ್ಷಿಕೆಯನ್ನು ಬದಲಿಸಬೇಕಾದ ಪ್ರಮೇಯ ಒದಗಿದ್ದರಿಂದ ನಾಲ್ವರು ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ಲೋಕಾಯುಕ್ತ ತನಿಖೆ ನಡೆಸಲಾಗಿತ್ತು. ಸರ್ಕಾರದ ಹಿತದೃಷ್ಟಿಯಿಂದಾಗಿ ಅವರು ಈ ಕ್ರಮ ಕೈಗೊಂಡಿದ್ದರಿಂದ ನಾಲ್ಕು ಅಧಿಕಾರಿಗಳ ಮೇಲೆ ಕ್ರಮ ಕೈಬಿಡಲು ತೀರ್ಮಾನ.

Wednesday, April 29, 2020

BIGG NEWS : ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ : ಕರ್ನಾಟಕದಲ್ಲಿ ಸಾವಿನ ಸಂಖ್ಯೆ 21ಕ್ಕೆ ಏರಿಕೆ

 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸಾವಿನ ಸರಣಿ ಮುಂದುವರೆದಿದೆ. ತುಮಕೂರಿನಲ್ಲಿ ಸಾರಿ ಪ್ರಕರಣದ 74 ವರ್ಷದ ವೃದ್ಧಯೊಬ್ಬರು ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಮಾಹಿತಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದಂತ ಸಚಿವ ಸುರೇಶ್ ಕುಮಾರ್, ಸಾರಿ ಪ್ರಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ 74 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿರುವ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಅಂದಹಾಗೇ ಇಂದು ಹೊಸದಾಗಿ 11 ಕೊರೋನಾ ಕೇಸ್ ರಾಜ್ಯದಲ್ಲಿ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 534ಕ್ಕೆ ಏರಿಕೆಯಾಗಿದೆ. ಅಲ್ಲದೇ ಇದೇ ವೇಳೆ ತುಮಕೂರಿನಲ್ಲಿ ಕೊರೋನಾ ಸೋಂಕಿತ ವೃದ್ಧರೊಬ್ಬರು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಕ್ಲಿನಿಕ್‌ಗಳ ಮೇಲೆ ದಾಳಿ: ಕೊಟ್ಟೂರಿನಲ್ಲಿ ಇಬ್ಬರು ನಕಲಿ ವೈದ್ಯರು ವಶಕ್ಕೆ


ಕೊಟ್ಟೂರು(ಏ.29): ಕೊಟ್ಟೂರು ಪಟ್ಟಣದಲ್ಲಿ ನಕಲಿ ವೈದ್ಯರು ಆಸ್ಪತ್ರೆ ನಡೆಸುತ್ತಿದ್ದಾರೆ ಎಂಬ ದೂರಿನ ಮೇರೆಗೆ ತಹಸೀಲ್ದಾರ್‌ ಜಿ. ಅನಿಲ್‌ಕುಮಾರ್‌ ನೇತೃತ್ವದ ಅಧಿಕಾರಿಗಳ ತಂಡ ಇಲ್ಲಿನ ಎರಡು ಕ್ಲಿನಿಕ್‌ಗಳ ಮೇಲೆ ಮಂಗಳವಾರ ದಾಳಿ ನಡೆಸಿ ಇಬ್ಬರು ನಕಲಿ ವೈದ್ಯರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಲ್ಲಿನ ಗಾಂಧಿ ವೃತ್ತದ ಬಳಿಯ ಜಗದೀಶ, ರೇಣುಕ ಚಿತ್ರಮಂದಿರದ ಹೊಟೇಲೊಂದರ ಕಟ್ಟಡದಲ್ಲಿದ್ದ ಷಣ್ಮುಖಪ್ಪ ಎಂಬ ವೈದ್ಯರನ್ನು ಈ ಸಂಬಂಧ ಬಂಧಿಸಿ ಅವರ ಕ್ಲಿನಿಕ್‌ಗಳಲ್ಲಿ ಬಳಸುತ್ತಿದ್ದ ವೈದ್ಯಕೀಯ ಸಾಮಾನುಗಳನ್ನು ಜಪ್ತಿ ಮಾಡಿದರು.

ಲಾಕ್‌ಡೌನ್‌ ಮಧ್ಯೆಯೂ ಕೊಟ್ಟೂರೇಶ್ವರನಿಗೆ ಪೂಜೆ ಸಲ್ಲಿಸಿದ ಶಾಸಕ ಪೂಜಾ​ರ್‌..!

ಈ ನಕಲಿ ವೈದ್ಯರು ಕೇವಲ ಪಿಯುಸಿ ವ್ಯಾಸಂಗ ಮಾತ್ರ ಮಾಡಿದ್ದರೂ ಕೆಲ ನಕಲಿ ದಾಖಲೆಗಳನ್ನು ಇರಿಸಿಕೊಂಡು ಕ್ಲಿನಿಕ್‌ಗಳನ್ನು ನಡೆಸುತ್ತಿದ್ದರು ಎಂದು ಇತ್ತೀಚಿಗೆ ತಹಸೀಲ್ದಾರರಿಗೆ ಕೊಟ್ಟೂರು ತಾಲೂಕಿನ ಪದವೀಧರ ವೈದ್ಯರ ಸಂಘದ ಪದಾಧಿಕಾರಿಗಳು ದೂರು ಸಲ್ಲಿಸಿದ್ದರು.

ತಹಸೀಲ್ದಾರರೊಂದಿಗೆ ಟಿಎಚ್‌ಒ ಡಾ. ಷಣ್ಮುಖ ನಾಯ್ಕ, ಡಾ. ಪೃಥ್ವಿ, ಪಟ್ಟಣ ಪಂಚಾಯಿತಿ ಎಚ್‌.ಎಫ್‌.ಬಿದರಿ, ಪಿಎಸ್‌ಐ ಎ. ಕಾಳಿಂಗ ದಾಳಿ ತಂಡದಲ್ಲಿದ್ದರು.

Cm of Karnataka clik image


Tuesday, April 28, 2020

ಕೇಳಿ ಬಂದ ಸುದ್ದಿ


ಕೊರೊನಾ ವೈರಸ್‌ ಸೋಂಕಿನ 6 ಹೊಸ ಲಕ್ಷಣಗಳ ಬಗ್ಗೆ ನಿಮಗೆ ತಿಳಿದಿದೆಯೇ?

ವಾಷಿಂಗ್ಟನ್:‌ ಚೀನಾದ ವುಹಾನ್‌ನಲ್ಲಿ ಮೊದಲು ಪತ್ತೆಯಾದ ಕೊರೊನಾ ವೈರಸ್‌ ಸೋಂಕು ಜಗತ್ತಿನ ಬಹುತೇಕ ದೇಶಗಳಲ್ಲಿ ಹಬ್ಬಿದೆ. ಈ ಮೊದಲು ಕೊರೊನಾ ವೈರಸ್‌ ಸೋಂಕು ಪೀಡಿತರಲ್ಲಿ ಕೇವಲ ಮೂರು ಲಕ್ಷಣಗಳನ್ನು ಗುರುತಿಸಲಾಗಿತ್ತು. ಸೋಂಕು ಪತ್ತೆಯಾಗಿ ತಿಂಗಳುಗಳು ಕಳೆದ ನಂತರ ಹೊಸದಾಗಿ ಆರು ರೋಗ ಲಕ್ಷಣಗಳನ್ನು ಕಂಡುಹಿಡಿಯಲಾಗಿದೆ.
ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಕೊರೊನಾ ಸೋಂಕಿನ ಆರು ಹೊಸ ರೋಗ ಲಕ್ಷಣಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಹಿಂದೆ ಕೇವಲ ಮೂರು ರೋಗ ಲಕ್ಷಣಗಳನ್ನು ಪಟ್ಟಿ ಮಾಡಲಾಗಿತ್ತು. ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಗಳು ಕೊರೊನಾ ಸೋಂಕಿನ ಮೂರು ಲಕ್ಷಣಗಳಾಗಿದ್ದವು.
ಈಗ ಶೀತ, ಮೈ ನಡುಗುವಿಕೆ, ಸ್ನಾಯು ಸೆಳೆತ, ತಲೆ ನೋವು, ಗಂಟಲು ನೋವು ಮತ್ತು ಹಠಾತ್ತನೆ ರುಚಿ ಅಥವಾ ವಾಸನೆ ಕಂಡುಹಿಡಿಯುವ ಸಾಮರ್ಥ್ಯ ಕಳೆದುಕೊಳ್ಳುವುದು ಕೋವಿಡ್‌ನ ಹೊಸ ಲಕ್ಷಣಗಳಾಗಿವೆ.ಎದೆಯಲ್ಲಿ ನಿರಂತರ ನೋವು ಅಥವಾ ಒತ್ತಡ, ಹೊಸ ತೆರನಾದ ಗೊಂದಲ ಅಥವಾ ಎಚ್ಚರ ತಪ್ಪುವಿಕೆ, ತುಟಿಗಳು ಅಥವಾ ಮುಖ ನೀಲಿ ಬಣ್ಣಕ್ಕೆ ತಿರುಗುವಿಕೆ ಕೊರೊನಾ ವೈರಸ್‌ ಸೋಂಕಿನ ಮುನ್ಸೂಚನೆಗಳೆಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ತಿಳಿಸಿದೆ.

ಏ.29 ರಿಂದ ಬೆಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯಾರಂಭ: ಆರ್. ಅಶೋಕ

ಬೆಂಗಳೂರು: ನಾಳೆ (ಏ.29 ರಿಂದ) ಯಿಂದ ಬೆಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಆದೇಶ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಬೇರೆ ಬೇರೆ ಜಿಲ್ಲೆಗಳಲ್ಲಿ ಉಪನೋಂದಣಾಧಿಕಾರಿ ಕಚೇರಿಗಳು ತೆರೆದಿವೆ. ಜನರು ಕಚೇರಿಗಳಿಗೆ ಬರುತ್ತಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದೆದೆ. ಆದರೆ ಕಚೇರಿ ತೆರೆದ ಕೂಡಲೇ ಜನರು ಬರಲು ಉಪನೋಂದಣಾಧಿಕಾರಿಗಳ ಕಚೇರಿ ಎನ್ನುವುದು ಹೊಟೇಲ್ ಅಲ್ಲ.
ಈಗಷ್ಟೆ ಆರಂಭವಾಗಿವೆ. ಕಚೇರಿ ಕೆಲಸಗಳು ನಡೆಯುತ್ತಿರುತ್ತವೆ. ಹತ್ತು ದಿನಗಳಲ್ಲಿ ಎಲ್ಲವೂ ಸರಿ ಆಗಲಿದೆ ಎಂದು ಪ್ರಶ್ನೆಯೊಂದಕ್ಕೆ ಅಶೋಕ್ ಉತ್ತರಿಸಿದರು.

Cm of Karnataka

ಕೋವಿಡ್19: ಬೆಳಗಿನ ವರದಿ ಒಟ್ಟು ಪ್ರಕರಣಗಳು: 520 ಮೃತಪಟ್ಟವರು: 20 ಗುಣಮುಖರಾದವರು: 198 ಹೊಸ ಪ್ರಕರಣಗಳು: 8 ಇತರೆ ಮಾಹಿತಿ: ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.


ಕೋವಿಡ್-19: ರಾಜ್ಯದಲ್ಲಿ ಮತ್ತೆ 8 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮತ್ತೆ 8 ಹೊಸ ಪ್ರಕರಣಗಳು ಮಂಗಳವಾರ ಬೆಳಕಿಗೆ ಬಂದಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಆರು ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
395ನೇ ರೋಗಿಯ ಸಂಪರ್ಕದಲ್ಲಿದ್ದ 55 ವರ್ಷದ ವೃದ್ಧ, 40 ವರ್ಷದ ಮಹಿಳೆ, 43 ವರ್ಷದ ವ್ಯಕ್ತಿ, 28 ವರ್ಷದ ಯುವತಿ, 45 ವರ್ಷದ ಮಹಿಳೆ ಮತ್ತು 22 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ.
ಮೊದಲು ಆರೋಗ್ಯ ಇಲಾಖೆಯ ಮಾಹಿತಿಯಲ್ಲಿ ಈ ರೋಗಿಗಳು 425ನೇ ರೋಗಿಯ ಸಂಪರ್ಕದಲ್ಲಿದ್ದರು ಎಂದು ತಿಳಿಸಲಾಗಿತ್ತು. ನಂತರ ಜಿಲ್ಲಾಧಿಕಾರಿ ಶರತ್ ಅವರು ಅವರು 395ನೇ ರೋಗಿಯ ಸಂಪರ್ಕದಲ್ಲಿದ್ದರು ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.ಇದರ ಜೊತೆಗೆ, ಗದಗದ 75 ವರ್ಷದ ವೃದ್ಧರಲ್ಲಿ ಕೂಡ ಸೋಂಕು ಪತ್ತೆಯಾಗಿದೆ. ಇವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಜೊತೆಗೆ ಬಿಬಿಎಂಪಿಯ 135ನೇ ಕಂಟೈನ್ ಮೆಂಟ್ ವಲಯಕ್ಕೆ ಭೇಟಿನೀಡಿದ 48 ವರ್ಷದ ವ್ಯಕ್ತಿಯಲ್ಲಿ ಕೂಡ ಸೋಂಕು ದೃಢಪಟ್ಟಿದೆ.
ಸೋಮವಾರ ರಾತ್ರಿ ಕಲಬುರಗಿ ಜಿಲ್ಲೆಯ 57 ವರ್ಷದ ವ್ಯಕ್ತಿಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದರಿಂದ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 520ಕ್ಕೇರಿಕೆಯಾಗಿದೆ. ಒಟ್ಟು 21 ಜನರು ಮೃತಪಟ್ಟಿದ್ದಾರೆ ಮತ್ತು 198 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಕೊರೋನಾ ಪೀಡಿತರ ಜೀವ ರಕ್ಷಿಸಿ: ಪ್ಲಾಸ್ಮಾ ದಾನ ಮಾಡುವಂತೆ ಗುಣಮುಖರಾದ ರೋಗಿಗಳಿಗೆ ವೈದ್ಯರ ಮನವಿ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಈ ನಡುವೆ ಕೊರೋನಾಗೆ ರಾಮಬಾಣವೆಂದೇ ಹೇಳಲಾಗುತ್ತಿರುವ ಪ್ಲಾಸ್ಮಾ ಥೆರಪಿಗೆ ಗುಣಮುಖರಾದ ಸೋಂಕಿತರು ಪ್ಲಾಸ್ಮಾ ದಾನ ಮಾಡುವಂತೆ ವೈದ್ಯರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಇಬ್ಬರು ಗುಣಮುಖರಾದ ಸೋಂಕಿತರು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದು, ಉಳಿದವರಾರು ಮುಂದಕ್ಕೆ ಬಂದಿಲ್ಲ. ಹೀಗಾಗಿ ಪ್ಲಾಸ್ಮಾ ದಾನ ಮಾಡುವಂತೆ ವೈದ್ಯರು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಷ್ಟೇ ಏರಿಕೆಯಾಗುತ್ತಿಲ್ಲ. ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಬೆಂಗಳೂರು ಹಾಗೂ ಮೈಸೂರು ನಗರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.
ಇದರ ಜೊತೆಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಇಂತಹವರು ಇತರರು ಗುಣಮುಖರಾಗರು ಸಹಾಯ ಮಾಡಬೇಕೆಂದು ಡಾ. ವಿಶಾಲ್ ರಾವ್ ಅವರು ಹೇಳಿದ್ದಾರೆ.
ಪ್ಲಾಸ್ಮಾ ಥೆರಪಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಈಗಾಗಲೇ ಈ ಪ್ರಯೋಗ ರಾಜ್ಯದಲ್ಲಿ ಆರಂಭವಾಗಿದೆ. ಮುಂದಕ್ಕೆ ಬರುವ ಎಲ್ಲಾ ದಾನಿಗಳನ್ನು ನಾವು ಪರಿಗಣಿಸುತ್ತಿದ್ದೇವೆ. ನಮ್ಮಿಂದ ಸಾಧ್ಯವಾದಷ್ಟು ರೋಗಿಗಳಿಗೆ ನಾವು ಚಿಕಿತ್ಸೆ ನೀಡುತ್ತೇವೆ. ಒಬ್ಬ ಗುಣಮುಖನಾದ ಸೋಂಕಿತ ವ್ಯಕ್ತಿಯ ಪ್ಲಾಸ್ಮಾದಿಂದ ಇಬ್ಬರು ರೋಗಿಗಳ ಸೋಂಕನ್ನು ದೂರಾಗಿಸಬಹುದು ಎಂದು ತಿಳಿಸಿದ್ದಾರೆ.

ರೇವಾ ವಿವಿ: 'ಜೀವ ಸೇತು' ಮೆಡಿಕಲ್ ವೆಂಟಿಲೇಟರ್ ಬಿಡುಗಡೆ

ಬೆಂಗಳೂರು: ರೇವಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕೊರೊನಾ ಸೋಂಕಿತ ರೋಗಿಗಳಿಗೆ ಅನುಕೂಲವಾಗಲೆಂದು, ನೂತನವಾಗಿ 'ಜೀವ ಸೇತು' ಮೆಡಿಕಲ್ ವೆಂಟಿಲೇಟರ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ್ದಾರೆ. ಇದನ್ನು ಶನಿವಾರ ಬಿಡುಗಡೆ ಮಾಡಲಾಯಿತು.
'ಕೋವಿಡ್-19ರ ವಿರುದ್ಧ ಇಡೀ ದೇಶವೇ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶ ನಮ್ಮದಾಗಿತ್ತು. ಈ ಕುರಿತು ವೈದ್ಯರೊಂದಿಗೆ ಚರ್ಚಿಸಿದಾಗ, ಉಸಿರಾಟದ ಸಮಸ್ಯೆ ನಿವಾರಣೆಗೆ ಅನುಕೂಲವಾಗುವ ವೆಂಟಿಲೇಟರ್‌ ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದರು. ನಮ್ಮ ವಿ.ವಿ ತಂಡ ಈ ನಿಟ್ಟಿನಲ್ಲಿ ಶ್ರಮಿಸಿ, ವೆಂಟಿಲೇಟರ್‌ ವಿನ್ಯಾಸಗೊಳಿಸಿದೆ' ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಶ್ಯಾಮರಾಜು ತಿಳಿಸಿದರು.
'ಸದ್ಯಕ್ಕೆ ರೂ.35 ಸಾವಿರ ವೆಚ್ಚದಲ್ಲಿ ಎರಡು ವೆಂಟಿಲೇಟರ್‌ಗಳನ್ನು ಸಿದ್ಧಪಡಿಸಲಾಗಿದೆ.
ಆರ್ಕಿಟೆಕ್ಚರ್, ಮೆಕಾನಿಕಲ್, ಎಲೆಕ್ಟ್ರಿಕಲ್ಸ್‌, ಎಲೆಕ್ಟ್ರಾನಿಕ್ಸ್‌ ಹಾಗೂ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ವಿದ್ಯಾರ್ಥಿಗಳು ಒಗ್ಗೂಡಿ ಇದನ್ನು ಅಭಿವೃದ್ಧಿ ಪಡಿಸಿದ್ದು, ತಜ್ಞ ವೈದ್ಯರು ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ' ಎಂದರು.
'ಸಾಮಾಜಿಕ ಕಾರ್ಯ ಮಾಡುತ್ತಿರುವ ಆಸ್ಪತ್ರೆಗಳಿಗೆ ಕಡಿಮೆ ದರದಲ್ಲಿ ವೆಂಟಿಲೇಟರ್‌ ಪೂರೈಸಲು ಆದ್ಯತೆ ನೀಡಲಾಗುವುದು. ಭವಿಷ್ಯದಲ್ಲೂ ಈ ಸಾಧನ ಸಿದ್ಧಪಡಿಸುವ ಗುರಿ ಹೊಂದಲಾಗಿದೆ' ಎಂದರು.

Monday, April 27, 2020

ಇಡೀ ವಿಶ್ವದ ಗಮನ ಸೆಳೆದ ಭವಿಷ್ಯ: ಮೇ 21 ಕ್ಕೆ ಭಾರತದಲ್ಲಿ ಕೊರೋನಾ ಅಂತ್ಯ

ಸಿಂಗಾಪುರ್: ವಿಶ್ವವನ್ನು ವ್ಯಾಪಿಸಿರುವ ಮಹಾಮಾರಿ ಕೊರೋನಾ ವೈರಸ್ ಮುಂದಿನ ತಿಂಗಳಿಗೆ ಅಂತ್ಯವಾಗಲಿದೆ ಎಂದು ಸಂಶೋಧನೆಯೊಂದು ಹೇಳಿದೆ.
ಭಾರತದಲ್ಲಿ ಮೇ 21 ರ ವೇಳೆಗೆ ಕೊರೋನಾ ಸೋಂಕು ಶೇಕಡ 97ರಷ್ಟು ಕಡಿಮೆಯಾಗಲಿದೆ ಎಂದು ಸಿಂಗಾಪುರ್ ದತ್ತಾಂಶ ವಿಶ್ಲೇಷಕರು ಹೇಳಿದ್ದಾರೆ. ಸಿಂಗಾಪುರ ತಂತ್ರಜ್ಞಾನ ಮತ್ತು ವಿನ್ಯಾಸ ವಿಶ್ವವಿದ್ಯಾಲಯದ ಸಂಶೋಧಕರು ನೀಡಿರುವ ಮಾಹಿತಿಯಂತೆ ಮೇ 21 ಕ್ಕೆ ಭಾರತ ಸೇರಿ ಹಲವು ದೇಶಗಳಲ್ಲಿ ಇದು ಅಂತ್ಯವಾಗಲಿದೆ.
ಕೃತಕ ಬುದ್ಧಿಮತ್ತೆ ಆಧಾರಿತ ದತ್ತಾಂಶ ವಿಶ್ಲೇಷಣೆಯಿಂದ ಹಲವು ದೇಶಗಳಲ್ಲಿ ಮೇ ತಿಂಗಳಲ್ಲಿ ಮುಕ್ತಾಯವಾಗಲಿದೆ. ಶೈಕ್ಷಣಿಕ ಮತ್ತು ಸಂಶೋಧನೆಗೆ ಈ ಅಧ್ಯಯನಕ್ಕೆ ಮಾತ್ರ ಈ ಭವಿಷ್ಯ ಎಂದು ಹೇಳಲಾಗಿದೆ. ಸಂಶೋಧನೆಗೆ ಶಂಕಿತ, ಸೋಂಕಿತ, ಗುಣಮುಖ ಮಾದರಿಯನ್ನು ಬಳಸಲಾಗಿದೆ. ವಿವಿಧ ದೇಶಗಳಲ್ಲಿ ಕೊರೋನಾ ಸೋಂಕು ಮುಕ್ತಾಯವಾಗುವ ದಿನಗಳನ್ನು ದತ್ತಾಂಶ ಆಧಾರದಲ್ಲಿ ಹೇಳಲಾಗಿದೆ.

BIG NEWS : ಕರ್ನಾಟಕದಲ್ಲಿ ಇಂದಿನಿಂದ ಕೊರೊನಾ ಸೋಂಕಿತರಿಗೆ `ಪ್ಲಾಸ್ಮಾ' ಚಿಕಿತ್ಸೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸೋಂಕಿತರನ್ನು ಗುಣಪಡಿಸಲು ಪ್ಲಾಸ್ಮಾ ಚಿಕಿತ್ಸೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇಂದು ಚಿಕಿತ್ಸೆ ಆರಂಭಿಸುತ್ತಿದೆ. ಶನಿವಾರ ಪ್ಲಾಸ್ಮಾ ಥೆರಪಿಗೆ ಚಾಲನೆ ನೀಡಲಾಗಿದ್ದು, ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಮಾಡಲಾಗುತ್ತಿದ್ದು, ಇಂದು ರೋಗಿಗಳಿಗೆ ಚಿಕಿತ್ಸೆ ಆರಂಭಿಸಲಾಗುತ್ತದೆ. ಇದಕ್ಕೆ ಬೆಂಗಳೂರು ವೈದ್ಯಕೀಯ ಕಾಲೇಜು, ಸಂಶೋಧನಾ ಸಂಸ್ಥೆ ಹಾಗೂ ಎಚ್ ಸಿಜೆ ಕ್ಯಾನ್ಸರ್ ಆಸ್ಪತ್ರೆ ಸಹಯೋಗ ಇರಲಿದೆ.
ಕೊರೊನಾದಿಂದ ಗುಣಮುಖರಾದವರ ರಕ್ತದಲ್ಲಿನ ಪ್ಲಾಸ್ಮಾ ತೆಗೆದು ಅದರಿಂದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಗುಣವಾದ ಒಬ್ಬರು ಮೂವರು ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಬಹುದು. ಸದ್ಯ ಗುಣವಾದವರಲ್ಲಿ ಇಬ್ಬರು ರಕ್ತದಾನಕ್ಕೆ ಮುಂದೆ ಬಂದಿದ್ದಾರೆ.ಅವರಿಂದ ಪಡೆದ ಪ್ಲಾಸ್ಮಾದ ಮೂಲಕ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ.

Sunday, April 26, 2020

ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖ, ರಾಜಕಾರಣಿಗಳು ಬೀದಿಗಿಳಿದು ಜಗಳ ಮಾಡಬಾರದು: ಆರೋಗ್ಯ ಸಚಿವ ಶ್ರೀರಾಮುಲು

ಬಳ್ಳಾರಿ: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದು, ಇದೊಂದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.
ಬೆಂಗಳೂರಿನಲ್ಲಿ ಶನಿವಾರದಿಂಧ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭವಾಗಿದ್ದು, ಸೋಮವಾರದಿಂದ ಎಲ್ಲಾ ಜಿಲ್ಲೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಚಾಲನೆ ದೊರೆಯಲಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರಲಾಗುವುದು. ಕೇಂದ್ರದ ಮಾರ್ಗಸೂಚಿಯಂತೆ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
'ಬಳ್ಳಾರಿ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೋವಿಡ್‌-19ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.ಪ್ಲಾಸ್ಮಾ ಥೆರಪಿ ಸೋಮವಾರದಿಂದ (ಏಪ್ರಿಲ್ 27) ಅಧಿಕೃತವಾಗಿ ಆರಂಭವಾಗಲಿದ್ದು, ಮತ್ತಷ್ಟು ಸೋಂಕಿತರು ಬೇಗ ಗುಣಮುಖರಾಗುವರು. ಇನ್ನು ಡೆಂಗಿ, ಜ್ವರ, ಹೃದಯ ಸಮಸ್ಯೆ ಇರುವವರಿಗೆ ಪಾಸ್‌ ವ್ಯವಸ್ಥೆ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು' ಎಂದು ಹೇಳಿದರು.
ಪತ್ರಕರ್ತರ ರಕ್ಷಣೆ ಸರ್ಕಾರದ ಹೊಣೆ
ಅಂತೆಯೇ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವ ಪತ್ರಕರ್ತರ ರಕ್ಷಣೆ ನಮ್ಮ ಸರ್ಕಾರದ ಹೊಣೆ. ಅವರಿಗೆ ಸರ್ಕಾರದಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡಿನ ಜ್ಯುಬಿಲಿಯೆಂಟ್‌ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಸೋಂಕು ಹೇಗೆ ತಗುಲಿತು ಎನ್ನುವುದು ಇದುವರೆಗೆ ಗೊತ್ತಾಗಿಲ್ಲ ಎಂದು ತಿಳಿಸಿದರು.
ಬೀದಿಗಿಳಿದು ಜಗಳ ಮಾಡಬಾರದು
ಇದೇ ವೇಳೆ ವಿಧಾನ ಪರಿಷತ್‌ ಸದಸ್ಯ ಶ್ರೀಕಂಠೇಗೌಡ ಹಿರಿಯ, ಅನುಭವಿ ರಾಜಕಾರಣಿ. ಅವರು ಬೀದಿಗಿಳಿದು ಜಗಳ ಮಾಡಬಾರದು. ಮಂಡ್ಯದಲ್ಲಿ ನಡೆದ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದು ಶ್ರೀರಾಮುಲು ಹೇಳಿದರು. 'ಶ್ರೀಕಂಠೇಗೌಡರಂತಹ ರಾಜಕಾರಣಿಗಳು ಬೇರೆಯವರಿಗೆ ಮಾದರಿಯಾಗಬೇಕು. ಅದು ಬಿಟ್ಟು ಬೀದಿಗಿಳಿದು ಜಗಳ ಸಲ್ಲ. ಪಾದರಾಯನಪುರ ಸೇರಿದಂತೆ ಅನೇಕ ಕಡೆ ಈ ರೀತಿಯ ಘಟನೆಗಳು ನಡೆದಿದ್ದು, ಅವುಗಳು ಮರುಕಳಿಸಬಾರದು. ಜನಪ್ರತಿನಿಧಿಗಳು ಬೇರೆಯವರಿಗೆ ಮಾದರಿಯಾಗಬೇಕು. ಇನ್ಮುಂದೆ ಇಂತಹ ಘಟನೆಗಳು ಆಗಬಾರದು ಎಂದು ಎಲ್ಲರಲ್ಲೂ ಮನವಿ ಮಾಡುತ್ತೇನೆ. ಪಾದರಾಯನಪುರ ಸೇರಿ ಅನೇಕ ಕಡೆ ಕೊರೊನಾ ವಾರಿಯರ್ಸ್‌ ಮೇಲೆ ಹಲ್ಲೆ ನಡೆದಿವೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಇಂತಹ ಘಟನೆಗಳು ಪುನರಾವರ್ತನೆಯಾಗಬಾರದು ಎಂದು ಎಚ್ಚರಿಕೆ ನೀಡಿದರು.

BIGG NEWS ; ರಾಜ್ಯದಲ್ಲಿ 'ಕೊರೊನಾ ಟೆಸ್ಟಿಂಗ್' ಲ್ಯಾಬ್ ಗಳನ್ನು ಹೆಚ್ಚಿಸಿ 'ICMR' ಆದೇಶ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ, ಮೇ 3 ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಕೊರೊನಾ ಟೆಸ್ಟ್ ಲ್ಯಾಬ್ ಗಳನ್ನು ಹೆಚ್ಚಿಸಿ ಐಸಿಎಮ್ ಆರ್ ( ವೈದ್ಯಕೀಯ ಸಂಶೋಧನೆ ಪರಿಷತ್) Indian Council of Medical Research ಆದೇಶ ಹೊರಡಿಸಿದೆ.
ರಾಜ್ಯದ 20 ಕಡೆ ಕೊರೊನಾ ಟೆಸ್ಟ್ ಲ್ಯಾಬ್ ಗಳನ್ನು ಹೆಚ್ಚಳ ಮಾಡಲಾಗುತ್ತಿದೆ. 14 ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟಿಂಗ್ ಹಾಗೂ 6 ಪ್ರಮುಖ ಕೊರೊನಾ ಟೆಸ್ಟ್ ಲ್ಯಾಬ್ ಗಳನ್ನು ಹೆಚ್ಚಳ ಮಾಡಲಾಗುತ್ತಿದೆ. ಹಾಸನ, ಮೈಸೂರು, ಶಿವಮೊಗ್ಗ, ಕಲಬುರಗಿ ಮತ್ತು ಬಳ್ಳಾರಿ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆಗಳಲ್ಲಿ ಲ್ಯಾಬ್ ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಐಸಿಎಮ್ ಆರ್ ( ವೈದ್ಯಕೀಯ ಸಂಶೋಧನೆ ಪರಿಷತ್) ಆದೇಶ ಹೊರಡಿಸಿದೆ.
ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಕೇಸ್ ಹೆಚ್ಚಾಗುತ್ತಿದ್ದು,, ರಾಜ್ಯದಲ್ಲಿ ಇಂದು ಹೊಸದಾಗಿ 3 ಕೊರೋನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ. ಇಂದು ದಕ್ಷಿಣಕನ್ನಡ ಓರ್ವ ಮಹಿಳೆಗೆ, ಕಲಬುರ್ಗಿಯ ಇಬ್ಬರಿಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ ಎಂಬುದಾಗಿ ತಿಳಿಸಿದೆ, ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆ ಐಸಿಎಮ್‌ಆರ್ ಈ ಕ್ರಮ ಕೈಗೊಂಡಿದೆ.

ಬಸವಣ್ಣ ಕುರಿತಾದ ಸಂಕ್ಷಿಪ್ತ ಮಾತುಗಳು

ಬಸವಣ್ಣ ಕುರಿತು ಸಂಕ್ಷಿಪ್ತ ಮಾತುಗಳನ್ನ  ಪ್ರತಿಯೊಬ್ಬರು
ಕೇಳಿ