WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, December 12, 2020

3 ಬಸ್‍ಗಳ ಮೇಲೆ ಕಲ್ಲು ತೂರಾಟ

 

ಬೆಂಗಳೂರು,ಡಿ.12- ಸಾರಿಗೆ ನೌಕರರ ಮುಷ್ಕರ ಇಂದೂ ಕೂಡ ಮುಂದುವರಿದಿದ್ದು ಸಾರ್ವಜನಿಕರ ಅನುಕೂಲಕ್ಕಾಗಿ ಹೊರಟಿದ್ದ ಮೂರು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಕಾಚರಕನಹಳ್ಳಿಯಲ್ಲಿ , ಹೆಣ್ಣೂರು ಬ್ರಿಡ್ಜ್ ಹಾಗೂ ಮೇಡಿ ಅಗ್ರಹಾರದಲ್ಲಿ ಬೆಳಗ್ಗೆ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಲಾಗಿದ್ದು, ಗಾಜುಗಳು ಪುಡಿಯಾಗಿವೆ.

ನಿನ್ನೆ ಒಟ್ಟು 14 ಬಸ್‍ಗಳಿಗೆ ಕಲ್ಲು ಹೊಡೆದಿದ್ದು, ಗಾಜುಗಳು ಜಖಂಗೊಂಡಿವೆ. ನಗರದ ಎಲ್ಲಾ ಡಿಫೋಗಳಿಂದ ಇಂದು 91 ಬಸ್‍ಗಳು ಸಂಚಾರಕ್ಕೆ ಹೊರಟಿವೆ. 34 ಬಸ್‍ಗಳಿಗೆ ಕಲ್ಲು: ನಿನ್ನೆ ವಿವಿಧ ಜಿಲ್ಲೆಗಳಲ್ಲಿ ಕಿಡಿಗೇಡಿಗಳು ಕೆಎಸ್‍ಆರ್‍ಟಿಸಿಯ 34 ಬಸ್‍ಗಳಿಗೆ ಕಲ್ಲು ತೂರಾಟ ಮಾಡಿ ಜಖಂಗೊಳಿಸಿದ್ದಾರೆ. 
(ಮಾಹಿತಿ ಕೃಪೆ ಈ ಸಂಜೆ)    

ಈಶ್ವರಪ್ಪ ಸಿಡಿಸಿದ ಹೊಸ ಬಾಂಬ್: ಯಡಿಯೂರಪ್ಪ - ಸಿದ್ದರಾಮಯ್ಯ ತಡರಾತ್ರಿ ಭೇಟಿ ಡಿಕೆಶಿಗೆ ತಿಳಿದಿತ್ತು

 

ದಾವಣಗೆರೆ, ಡಿ 12: "ನಮ್ಮದೇನಿದ್ದರೂ ಓಪನ್, ನಿಮ್ಮ ಹಾಗೇ ತಡರಾತ್ರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿಲ್ಲ"ಎಂದು ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಹೇಳಿದ್ದರು.

ಸಿದ್ದರಾಮಯ್ಯನವರು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿರುವ ವಿಚಾರದ ಬಗ್ಗೆ ಗ್ರಾಮೀಣಾಭಿವೃದ್ದಿ ಖಾತೆಯ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದ್ದಾರೆ. ಆ ಮೂಲಕ, ಇಬ್ಬರು ಹಿರಿಯ ನಾಯಕರು ಭೇಟಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ.

"ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ತಡರಾತ್ರಿ ಭೇಟಿಯಾಗಿದ್ದರು. ಈ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿಳಿದಿತ್ತು. ನನಗೆ ಗೊತ್ತಿರಲಿಲ್ಲ"ಎಂದು ಈಶ್ವರಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಈಶ್ವರಪ್ಪ, "ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸುಳ್ಳು ಎನ್ನುವ ಪದಕ್ಕೆ ಇನ್ನೊಂದು ಅನ್ವರ್ಥನಾಮವೇ ಸಿದ್ದರಾಮಯ್ಯ. ನಾಯಕತ್ವ ಬದಲಾವಣೆಯ ಯಾವ ವಿಚಾರವೂ ವರಿಷ್ಠರ ಮುಂದಿಲ್ಲ"ಎಂದು ಈಶ್ವರಪ್ಪ ಸ್ಪಷ್ಟ ಪಡಿಸಿದರು.

 

"ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆನ್ನುವ ಹಗಲು ಕನಸನ್ನು ಕಾಣುತ್ತಿದ್ದಾರೆ. ಆದರೆ, ರಾಜ್ಯದ ಜನತೆ ಮತ್ತೆ ಬಿಜೆಪಿಯನ್ನು ಆಶೀರ್ವದಿಸಲಿದ್ದಾರೆ"ಎನ್ನುವ ವಿಶ್ವಾಸದ ಮಾತನ್ನು ಈಶ್ವರಪ್ಪ ಆಡಿದ್ದಾರೆ.

"ಸಾರಿಗೆ ಸಂಸ್ಥೆಯ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೆ, ಸಮಯ ಸಂದರ್ಭವನ್ನು ಅರಿತು ನೌಕರರು ಪ್ರತಿಭಟನೆ ಮಾಡಬೇಕು"ಎಂದು ಈಶ್ವರಪ್ಪ ಸಾರಿಗೆ ಸಂಸ್ಥೆಯ ನೌಕರರ ಪ್ರತಿಭಟನೆಯ ಬಗ್ಗೆ ಬೇಸರ ವ್ಯಕ್ತ ಪಡಿಸಿದರು.

 

(ಮಾಹಿತಿ ಕೃಪೆ Oneindia)  

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ

 

ಬೆಂಗಳೂರು, ಡಿಸೆಂಬರ್ 12: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ನಿರೀಕ್ಷೆ ಇದೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಉಡುಪಿಯ ಕೋಟಾದಲ್ಲಿ 2 ಸೆಂ.ಮೀ, ಮಾಣಿ, ಕದ್ರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೀದರ್‌ನಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ತುಂತುರು ಮಳೆಯಾಗುತ್ತಿದೆ. 

 (ಮಾಹಿತಿ ಕೃಪೆ Oneindia)

 

ನಾವು ನಿಮ್ಮ ಜೊತೆ ಇದ್ದೇವೆ: ಸಾರಿಗೆ ನೌಕರರಿಗೆ ಡಿಕೆಶಿ ಭರವಸೆ

 

ಬೆಂಗಳೂರು: 'ನಾವು ನಿಮ್ಮ ಜತೆ ಇದ್ದೇವೆ' ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ.

ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬ ಬೇಡಿಕೆ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಹಾಗೂ ನಗರ ಸಾರಿಗೆ ಸಂಸ್ಥೆಗಳ ನೌಕರರನ್ನು ಬನಶಂಕರಿ ಬಸ್ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಭೇಟಿ ಮಾಡಿದ ಶಿವಕುಮಾರ್‌, ನೌಕರರ ಅಹವಾಲು ಆಲಿಸಿದರು.

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರು, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ದೊಡ್ಡ ಆಲಹಳ್ಳಿ ಕಾಂಗ್ರೆಸ್ ಮುಖಂಡ ಬಾಬು ಜೊತೆ ಇದ್ದರು.

 (ಮಾಹಿತಿ ಕೃಪೆ ಪ್ರಜಾವಾಣಿ)

ಸಾರಿಗೆ ನೌಕರರ ಬೆಂಬಲಿಸಿದ, ಎಚ್‌ಡಿಕೆ ಟೀಕಿಸಿದ ಕೋಡಿಹಳ್ಳಿ ವಿರುದ್ಧ ಸಿಎಂ ಆಕ್ರೋಶ

 

ಬೆಂಗಳೂರು: ಸಾರಿಗೆ ನೌಕರರನ್ನು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ದುರುದ್ದೇಶದಿಂದ ಎತ್ತಿಕಟ್ಟುತ್ತಿದ್ದಾರೆ. ಅಲ್ಲದೆ, ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ವಿರುದ್ಧ ಅವರು ಆಡಿರುವ ಲಘುವಾದ ಮಾತುಗಳು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶನಿವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, 'ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಸಮಸ್ಯೆ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಸೂಚನೆ ನೀಡಲಾಗಿದೆ. ಆದರೆ, ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರು ದುರುದ್ದೇಶದಿಂದ ಕೆಲವು ನೌಕರರನ್ನು ಎತ್ತಿಕಟ್ಟಿ, ಮುಷ್ಕರ ನಡೆಸಲು ಮತ್ತು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿದ್ದಾರೆ,' ಎಂದು ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
  
ಮುಖ್ಯಮಂತ್ರಿ ಮಾಧ್ಯಮ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ವಿರುದ್ಧದ ಕೋಡಿಹಳ್ಳಿ ಅವರ ಟೀಕೆಯನ್ನು ಸಿಎಂ ವಿರೋಧಿಸಿದ್ದಾರೆ. 'ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್‌ ಅತ್ಯಂತ ಲಘುವಾಗಿ ಮಾತಾಡಿರುವುದು ಖಂಡನೀಯ,' ಎಂದು ಸಿಎಂ ಹೇಳಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ನೌಕರರು ಸತ್ಯಾಗ್ರಹ ನಿಲ್ಲಿಸಿ ಕರ್ತವ್ಯಕ್ಕೆ ಮರಳಿ, ನಂತರ ಸಾರಿಗೆ ಸಚಿವರ ಜೊತೆಗೆ ಚರ್ಚೆಗೆ ಬರಬೇಕು ಎಂದೂ ಸಿಎಂ ಮತ್ತೊಮ್ಮೆ ಮನವಿ ಮಾಡಿದ್ದಾರೆ.

(ಮಾಹಿತಿ ಕೃಪೆ ಪ್ರಜಾವಾಣಿ)

 

Tuesday, December 8, 2020

ಭಾರತ್ ಬಂದ್ | ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ: ಯಡಿಯೂರಪ್ಪ


 ಬೆಂಗಳೂರು: ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ನಡೆಯುತ್ತಿರುವ ಭಾರತ್‌ ಬಂದ್‌ ಉದ್ದೇಶಿಸಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಸಚಿವ ಕೆ.ಸುಧಾಕರ್‌ ಅವರು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ಯಡಿಯೂರಪ್ಪ ಅವರು, ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವ ಸಲುವಾಗಿ ಮಸೂದೆಗಳನ್ನು ಜಾರಿಗೆ ತರಲಾಗಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದುವರಿಯಲಿದ್ದು, ರೈತರು ಹೆಚ್ಚಿನ ಲಾಭ ಗಳಿಸಲು ಈ ಕಾಯ್ದೆಗಳು ನೆರವು ನೀಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷಗಳು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಕಾಯ್ದೆಗಳನ್ನು ವಿರೋಧಿಸುತ್ತಿವೆ. ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ.

ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದು ಕಿಡಿಕಾರಿದ್ದಾರೆ.

(ಮಾಹಿತಿ ಕೃಪೆ ಪ್ರಜಾವಾಣಿ)

ಹೊಸಪೇಟೆಯಲ್ಲಿ ಬಂದ್‌ಗೆ ಉತ್ತಮ ಬೆಂಬಲ

ಹೊಸಪೇಟೆ: ಕೃಷಿಗೆ ಸಂಬಂಧಿಸಿದ ಮೂರು ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೇಶದ ವಿವಿಧ ರೈತ ಸಂಘಟನೆಗಳು ಕರೆ ಕೊಟ್ಟಿದ್ದ ಭಾರತ ಬಂದ್‌ಗೆ ಮಂಗಳವಾರ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ನಗರದಲ್ಲಿ ಮಂಗಳವಾರ ಬಹುತೇಕ ಮಳಿಗೆ, ಹೋಟೆಲ್‌ಗಳವರು ಬಾಗಿಲು ತೆರೆಯದೇ ಬಂದ್‌ಗೆ ಬೆಂಬಲ ಸೂಚಿಸಿದರು. ಅಲ್ಲಲ್ಲಿ ತೆರೆದಿದ್ದ ಕೆಲ ಮಳಿಗೆಗಳನ್ನು ಪ್ರತಿಭಟನಾಕಾರರು ಮುಚ್ಚಿಸಿದರು. ಸಾರಿಗೆ ಸಂಸ್ಥೆಯ ಬಸ್ಸುಗಳು ಎಂದಿನಂತೆ ಸಂಚರಿಸುತ್ತಿದ್ದವು. ಪ್ರತಿಭಟನಾಕಾರರು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ ನಂತರ ಸಂಚಾರ ಸ್ಥಗಿತಗೊಂಡಿತು. ಪರ ಊರುಗಳಿಗೆ ತೆರಳಬೇಕಿದ್ದವರು ನಿಲ್ದಾಣದಲ್ಲೇ ಕಾದು ಕುಳಿತಿದ್ದರು. ಬೆರಳೆಣಿಕೆಯಷ್ಟು ಆಟೊಗಳು ರಸ್ತೆಗಿಳಿದಿದ್ದವು. ರೈಲುಗಳ ಸಂಚಾರಕ್ಕೆ ಯಾವುದೇ ತೊಡಕು ಉಂಟಾಗಲಿಲ್ಲ.

ಬೆಳಿಗ್ಗೆ ನಗರದ ಸೋಗಿ ಮಾರುಕಟ್ಟೆ, ಎಪಿಎಂಸಿಯಲ್ಲಿ ಎಂದಿನಂತೆ ವಹಿವಾಟು ನಡೆಯಿತು. ಬೆಳಿಗ್ಗೆ 9ರ ನಂತರ ವಹಿವಾಟು ಸ್ಥಗಿತಗೊಂಡಿತು. ಬಂದ್‌ನಿಂದ ಹೆಚ್ಚಿನ ಜನ ಹೊರಬರಲಿಲ್ಲ. ಬಹುತೇಕ ರಸ್ತೆಗಳು ನಿರ್ಜನವಾಗಿದ್ದವು. ಎಂದಿನಂತೆ ದಿನಪತ್ರಿಕೆ, ಹಾಲು ಪೂರೈಕೆಯಾಯಿತು. ಮೆಡಿಕಲ್‌, ಆಸ್ಪತ್ರೆ, ಆಂಬುಲೆನ್ಸ್‌, ಪೆಟ್ರೋಲ್‌ ಬಂಕ್‌ ಸೇರಿದಂತೆ ಇತರೆ ತುರ್ತು ಸೇವೆಗಳಿದ್ದವು. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿ, ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಬಂದ್‌ ಶಾಂತಿಯುತವಾಗಿದ್ದರೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದ ಬಳಿ ಸೇರಿದ ಪ್ರತಿಭಟನಾಕಾರರು ಅಲ್ಲಿಂದ ಪ್ರಮುಖ ಮಾರ್ಗಗಳ ಮೂಲಕ ರೋಟರಿ ವೃತ್ತದ ವರೆಗೆ ರ್‍ಯಾಲಿ ನಡೆಸಿದರು. ರ್‍ಯಾಲಿಯುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಷಾ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಮುಕೇಶ್‌ ಅಂಬಾನಿ, ಅದಾನಿ ವಿರುದ್ಧ ಘೋಷಣೆ ಕೂಗಿದರು. ನಂತರ ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಡಾ.ಬಿ.ಆರ್‌. ಅಂಬೇಡ್ಕರ್‌ ಸಂಘ, ದಲಿತ ಹಕ್ಕುಗಳ ಸಮಿತಿ, ಡಿವೈಎಫ್‌ಐ, ಎಸ್‌ಎಫ್‌ಐ, ಸಿಐಟಿಯು, ದೇವದಾಸಿಯರ ಸಂಘ, ತಾಲ್ಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷ, ವಿಜಯನಗರ ಆಟೊ ಚಾಲಕರ ಸಂಘ, ಆಟೊ ಯೂನಿಯನ್‌ ಬಂದ್‌ಗೆ ಬೆಂಬಲ ಸೂಚಿಸಿ ಅದರ ಮುಖಂಡರು ಪಾಲ್ಗೊಂಡಿದ್ದರು. ಬಿಎಸ್‌ಎನ್‌ಎಲ್‌ ನೌಕರರು, ಬ್ಯಾಂಕ್‌ ಯೂನಿಯನ್‌ನವರು ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ್ದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್‌ ಮಾತನಾಡಿ, 'ರೈತರು ನಡೆಸುತ್ತಿರುವ ಹೋರಾಟಕ್ಕೆ ಜಗತ್ತಿನ ವಿವಿಧ ದೇಶಗಳಲ್ಲಿ ನೆಲೆಸಿರುವ ಭಾರತೀಯರು, ಅಲ್ಲಿನವರು ಬೆಂಬಲ ಸೂಚಿಸಿದ್ದಾರೆ. ಆದರೆ, ನಮ್ಮ ಪ್ರಧಾನಿ ಅನ್ನದಾತರ ನೋವಿಗೆ ಸ್ಪಂದಿಸುತ್ತಿಲ್ಲ. ಬದಲಾಗಿ ರೈತರನ್ನು ಹತ್ತಿಕ್ಕಲು ಅವರ ವಿರುದ್ಧ ಯೋಧರನ್ನು ಬಳಸುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ' ಎಂದು ಟೀಕಿಸಿದರು.

'ಕೇಂದ್ರ ಬಿಜೆಪಿ ಸರ್ಕಾರ ರೈತರ ಪರವಲ್ಲ, ಕಾರ್ಪೊರೇಟ್‌ ಪರವಾದ ಸರ್ಕಾರ ಎನ್ನುವುದನ್ನು ತೋರಿಸಿಕೊಟ್ಟಿದೆ. ರೈತರ ಹಿತ ಬಲಿಕೊಟ್ಟು ಕಾರ್ಪೊರೇಟ್‌ ಕಂಪನಿಗಳಿಗೆ ಅನುಕೂಲವಾಗುವ ಕಾಯ್ದೆಗಳನ್ನು ತಂದು, ರೈತರಿಗೆ ಮರಣ ಶಾಸನ ಬರೆದಿದೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ ಮುಂದುವರೆಯಲಿದೆ' ಎಂದು ತಿಳಿಸಿದರು.

ಕಾಂಗ್ರೆಸ್‌ ಮುಖಂಡ ದೀಪಕ್‌ ಸಿಂಗ್‌ ಮಾತನಾಡಿ, 'ವಾಸ್ತವದಲ್ಲಿ ಹೇಳಬೇಕೆಂದರೆ ಹೊಸಪೇಟೆಯಲ್ಲಿ ರೈತರೇ ಇಲ್ಲ. ಒಂದುವೇಳೆ ಇದ್ದಿದ್ದರೆ ಇಷ್ಟೆಲ್ಲ ನಡೆಯುತ್ತಿದ್ದರೂ ಸುಮ್ಮನಿರುತ್ತಿರಲಿಲ್ಲ. ಐಎಸ್‌ಆರ್‌ ಕಾರ್ಖಾನೆ ಮುಚ್ಚಿ ಏಳು ವರ್ಷಗಳಾಗಿವೆ. ಒಬ್ಬ ರೈತರು ಅದರ ವಿರುದ್ಧ ಧ್ವನಿ ಎತ್ತಿಲ್ಲ' ಎಂದು ಟೀಕಿಸಿದರು.

'ಕಂಡಕ್ಟರ್‌ ಆಗಿದ್ದವರು ಕೋಟ್ಯಧಿಪತಿ'

ಹೊಸಪೇಟೆ: 'ಈ ದೇಶದಲ್ಲಿ ಇಬ್ಬರು ಬಸ್‌ ಕಂಡಕ್ಟರ್‌ಗಳು ಕೋಟ್ಯಧಿಪತಿಗಳಾಗಿದ್ದಾರೆ. ಒಬ್ಬರು ನಟ ರಜನಿಕಾಂತ್‌, ಇನ್ನೊಬ್ಬರು ಅರಣ್ಯ ಸಚಿವ ಆನಂದ್‌ ಸಿಂಗ್. ಇವರಿಬ್ಬರೂ ಈ ಹಿಂದೆ ಬಸ್‌ ಕಂಡಕ್ಟರ್‌ಗಳಾಗಿದ್ದವರು. ಸಿಂಗ್‌ ಅವರು ಹಂಪಿ ವಿರೂಪಾಕ್ಷನ ದಯೆಯಿಂದ ಕೋಟ್ಯಧಿಪತಿ ಆಗಿರಬಹುದು ಅಂದುಕೊಂಡಿದ್ದೆ. ಆದರೆ, ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗಡೆ ಅವರ ಪುಸ್ತಕ ಓದಿದ ನಂತರ ಅವರು ಹೇಗೆ ಕೋಟ್ಯಧಿಪತಿಯಾದರು ಎನ್ನುವುದು ಗೊತ್ತಾಯಿತು' ಎಂದು ದಲಿತ ಹಕ್ಕುಗಳ ಸಮಿತಿ ಮುಖಂಡ ಮರಡಿ ಜಂಬಯ್ಯ ನಾಯಕ ವ್ಯಂಗ್ಯವಾಡಿದರು.

'ನಾಲ್ಕು ಸಲ ಶಾಸಕರಾಗಿ ಆಯ್ಕೆಯಾಗಿರುವ ಆನಂದ್‌ ಸಿಂಗ್‌ ಅವರು ಇತ್ತೀಚೆಗೆ ಬಡ ಹೆಣ್ಣು ಮಕ್ಕಳಿಗೆ ಸೀರೆ ಹಂಚಿ ಅವರನ್ನು ಹಂಗಿಸುವ ಕೆಲಸ ಮಾಡಿದ್ದಾರೆ. ನೀವು ಶ್ರೀಮಂತ ಎನ್ನುವುದು ಗೊತ್ತು. ಆದರೆ, ಈ ರೀತಿ ಬಡವರಿಗೆ ಅವಮಾನಿಸುವುದು ಸರಿಯಲ್ಲ. ಸ್ಥಳೀಯ ರೈತರು ಹೋರಾಟ ನಡೆಸುತ್ತಿದ್ದರು. ನಮ್ಮ 'ಚಕ್ರವರ್ತಿ' ಯಡಿಯೂರಪ್ಪ ಬೆನ್ನಿಗೆ ನಿಂತಿರುವುದು ದುರದೃಷ್ಟಕರ' ಎಂದು ಹೇಳಿದರು.

'ತುಘಲಕ್‌ ಆಡಳಿತ'

'ತುಘಲಕ್‌ ಆಡಳಿತದ ಬಗ್ಗೆ ಓದಿ ತಿಳಿದುಕೊಂಡಿದ್ದೆವು. ಆದರೆ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದ ಮೇಲೆ ಅದನ್ನು ನೋಡುತ್ತಿದ್ದೇವೆ' ಎಂದು ಡಾ.ಬಿ.ಆರ್‌. ಅಂಬೇಡ್ಕರ್‌ ಸಂಘದ ಅಧ್ಯಕ್ಷ ಎಂ.ಸಿ. ವೀರಸ್ವಾಮಿ ಹೇಳಿದರು.

'ಈ ದೇಶದ ರೈತರು ಬಹಳ ಕಷ್ಟದಲ್ಲಿದ್ದಾರೆ. ಎರಡು ವಾರಗಳಿಂದ ರೈತರು ವಿಪರೀತ ಚಳಿಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಕಷ್ಟ ಸುಖ ಆಲಿಸುವ ಬದಲು ಕೇಂದ್ರ ಗೃಹ ಸಚಿವ ಸೇರಿದಂತೆ ಬಿಜೆಪಿಯ ಪ್ರಮುಖ ಮುಖಂಡರು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ಮಗ್ನರಾಗಿದ್ದರು. ಇದು ಅವರ ಆಡಳಿತದ ವೈಖರಿ ತೋರಿಸಿಕೊಡುತ್ತದೆ' ಎಂದರು.

***

ದೇಶಕ್ಕೆ ಅನ್ನ ಕೊಡುವ ರೈತರಿಗೆ ಹೇಡಿಗಳೆಂದು ಅಪಮಾನಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲರು ₹40 ಕೋಟಿ ಪಡೆದು ಬಿಜೆಪಿಗೆ ಪಕ್ಷಾಂತರ ಆದ ನೀವು ಹೇಡಿ.
-ಜೆ. ಕಾರ್ತಿಕ್‌, ರಾಜ್ಯ ಪ್ರಧಾನ ಕಾರ್ಯದರ್ಶಿ, ರೈತ ಸಂಘ

***

ರೈತರು, ಕಾರ್ಮಿಕರು ಈ ದೇಶದ ಎರಡು ಕಣ್ಣುಗಳಿದ್ದಂತೆ. ಆದರೆ, ಕೇಂದ್ರ ಸರ್ಕಾರ ಆ ಎರಡೂ ಕಣ್ಣುಗಳನ್ನು ತೆಗೆಯಲು ಹೊರಟಿರುವುದು ಸರಿಯಲ್ಲ.
-ಭಾಸ್ಕರ್‌ ರೆಡ್ಡಿ, ಜಿಲ್ಲಾ ಅಧ್ಯಕ್ಷ, ಸಿಐಟಿಯು

(ಮಾಹಿತಿ ಕೃಪೆ ಪ್ರಜಾವಾಣಿ)

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಪರ ಮತ: ಜೆಡಿಎಸ್ ವಿರುದ್ಧ ಹೋರಾಟ, ಸೆರೆ

 


ಬೆಂಗಳೂರು: ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ ವಿರೋಧಿಸಿ ಮತ್ತು ಇದಕ್ಕೆ ಕಾರಣವಾದ ಜೆಡಿಎಸ್ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ನೂರಾರು ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು.

ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ಗಾಯತ್ರಿ ಸೇರಿ ಹಲವರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಉಳಿದ ರೈತರು ಮೌರ್ಯ ವೃತ್ತದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಗಾಂಧಿ ಪ್ರತಿಮೆ ಎದುರು ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತರು, ವಿಧಾನ ಪರಿಷತ್‌ನಲ್ಲಿ ಮಸೂದೆ ಪರ ಜೆಡಿಎಸ್‌ ಸದಸ್ಯರು ಮತ ಹಾಕಿದ ಸುದ್ದಿ ತಿಳಿಯುತ್ತಿದ್ದಂತೆ ಏಕಾಏಕಿ ರಸ್ತೆಗಿಳಿದು ಹೋರಾಟ ಆರಂಭಿಸಿದರು.

'ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಪ್ರಕಾರ ‌ಒಬ್ಬರು 450 ಎಕರೆಗೂ ಹೆಚ್ಚು ಕೃಷಿ ಭೂಮಿ ಹೊಂದಬಹುದು. ಇಂತಹ ಕರಾಳ ತಿದ್ದುಪಡಿ ತರಲು ಕಾರ್ಪೋರೇಟ್‌ ಬಂಡವಾಳಶಾಹಿಗಳ ಪರವಾಗಿ ಬಿಜೆಪಿ ಮುಂದಾಗಿದೆ. ಇವರ ಜೊತೆಗೆ ಜೆಡಿಎಸ್ ಕೂಡ ಶಾಮೀಲಾಗಿ ಮಸೂದೆ ಪರ ಮತ ಹಾಕಿದೆ' ಎಂದು ಕಿಡಿ ಕಾರಿದರು.

ಮಸೂದೆ ವಿರೋಧಿಸಿ ಈ ಹಿಂದೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕಾರ ಆಗದಂತೆ ಕಾಂಗ್ರೆಸ್ ಜತೆ ಸೇರಿ ಹೋರಾಟ ನಡೆಸಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದರು. ಮಾತಿಗೆ ತಪ್ಪಿದ ಜೆಡಿಎಸ್ ಈಗ ಬಿಜೆಪಿ ಪರ ನಿಂತಿದೆ. ರೈತರ ಪರ ಎಂದು ಹೇಳಿಕೊಳ್ಳುಲು ಆ ಪಕ್ಷಕ್ಕೆ ಈಗ ಯಾವುದೇ ನೈತಿಕತೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.