ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹಳಿಯಾಳ, ಶಿರಸಿ ಮಹಾರಾಷ್ಟ್ರದ ಗಡಿಭಾಗದ ರಾಜ್ಯದ ಜಿಲ್ಲೆಗಳಾದ, ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಾಪುರ ಸೇರಿದಂತೆ ರಾಜ್ಯಾದ್ಯಂತ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೇ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.
ವಾಯುಭಾರ ಕುಸಿತದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ ಹಾಗೂ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.
ಸಂಜೆಯ ನಂತರ ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು.ಹಲವೆಡೆ ಜಿಟಿ ಜಿಟಿ ಮಳೆ ಆರಂಭವಾಗಿ ಕೆಲವು ನಿಮಿಷಗಳಲ್ಲಿ ಜೋರಾಗಿ ಸುರಿಯಿತು. ರಸ್ತೆಗಳಲ್ಲಿ ನೀರು ಉಕ್ಕಿ ಹರಿಯಿತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.
ಪ್ರಮುಖ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು ವಾಹನಗಳು ನೀರಿನಲ್ಲೇ ಚಲಿಸುತ್ತಿದ್ದವು. ಏಕಾಏಕಿ ಮಳೆ ಸುರಿದಿದ್ದರಿಂದ ಕೆಲಸ ಮುಗಿಸಿ ಮನೆಗೆ ಹೊರಟಿದ್ದವರು ಪರದಾಡುವಂತಾಯಿತು.
ಕೊಡಗು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಶನಿವಾರಸಂತೆ ಸುತ್ತಮುತ್ತ ಆಲಿಕಲ್ಲು ಮಳೆ ಸುರಿದಿದ್ದು, ಕಾಫಿ, ಹಸಿ ಮೆಣಸಿನ ಫಲಸು ಆಲಿಕಲ್ಲು ಹೊಡೆತಕ್ಕೆ ಸಂಪೂರ್ಣವಾಗಿ ನಾಶವಾಗಿದೆ.
(ಮಾಹಿತಿ ಕೃಪೆ ಕನ್ನಡ ಪ್ರಭ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ