ಕೊಪ್ಪ : ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಮುಂದುವರೆದು ಎನ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮತ್ತೆ ಎಸ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಹೌದು, (Post-matric and Merit-cum-means Scholarship) ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಎನ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ SSP ( state scholarship portal ) ನಲ್ಲಿ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ.ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ಮಾಡುವಂತೆ ಆಯಾ ಕಾಲೇಜಿನ 'E attestation' ಆಫೀಸರ್ ಗಳಿಗೆ ಸೂಚನೆ ನೀಡಲಾಗಿದೆ.
ಅರ್ಹ ವಿದ್ಯಾರ್ಥಿಗಳು ಧೃಡೀಕೃತ ದಾಖಲೆಗಳೊಂದಿಗೆ https://ssp.postmatric.karnataka.gov.in/ portal ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಕಾಲೇಜು ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪ. ಹಾಗೂ ಶಾಲಾ/ಕಾಲೇಜು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ