ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು(ಮಾರ್ಚ್ 8) ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ.
ಹಣಕಾಸು ಖಾತೆ ಹೊಂದಿರುವ ಯಡಿಯೂರಪ್ಪನವರು 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಇಂದು ಮಂಡಿಸುವುದಾಗಿ ಟ್ವೀಟರ್ ನಲ್ಲಿ ಪ್ರಕಟಿಸಿದ್ದಾರೆ. ಇನ್ನು ಬಿಎಸ್ ಯಡಿಯೂರಪ್ಪನವರು 8ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. 2020ರಲ್ಲಿ 7ನೇ ಬಾರಿಗೆ ಬಜೆಟ್ ಮಂಡಿಸಿದ್ದರು.
ಈ ಹಿಂದೆ 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಬಾರಿ ಬಜೆಟ್ ಮಂಡಿಸಿದ್ದರು. ಆ ಬಳಿಕ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡನೆ ಮಾಡಿದ್ದರು.
(ಮಾಹಿತಿ ಕೃಪೆ ಕನ್ನಡ ಪ್ರಭ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ