ಬೆಂಗಳೂರು: ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಟ್ಯಾಕ್ಸಿ ಚಾಲಕನೊಬ್ಬ ಮನನೊಂದು ಏರ್ ಪೋರ್ಟ್ ನಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಕೊರೊನಾ ಲಾಕ್ ಡೌನ್ ಬಳಿಕ ದಿನಕ್ಕೆ 300 ರೂಪಾಯಿ ಸಂಪಾದನೆ ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕೂಡ ಅಸಾಧ್ಯವಾಗಿತ್ತು. ತೀವ್ರವಾಗಿ ಮನನೊಂದ ಚಾಲಕ ಏರ್ ಪೋರ್ಟ್ ಪಿಕ್ ಅಪ್ ಪಾಯಿಂಟ್ ನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣ ಆತನನ್ನು ತಡೆದ ಏರ್ ಪೋರ್ಟ್ ಸಿಬ್ಬದಿಗಳು ಆಸ್ಪತ್ರೆಗೆ ದಾಖಲಿಸಿದ್ದರು.
ದೇಹದ ಶೇ.70ರಷ್ಟು ಭಾಗ ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇದೀಗ ಚಾಲಕ ಸಾವನ್ನಪ್ಪಿದ್ದಾನೆ. ಮೃತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಪ್ರತಾಪ್ ಕಳೆದ 10 ವರ್ಷಗಳಿಂದ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್ ಪೋರ್ಟ್ ನ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
(ಮಾಹಿತಿ ಕೃಪೆ ಕನ್ನಡ ದುನಿಯಾ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ