ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯವಿರುವವರಿಗೆ ಆಕ್ಸಿಜನ್ ಒದಗಿಸಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ದೆಹಲಿ -ಎನ್.ಸಿ.ಆರ್. ಮೂಲದ ನಿಧಿ ಸಂಗ್ರಹ ಸಂಸ್ಥೆಯಾಗಿರುವ ಮಿಷನ್ ಆಕ್ಸಿಜನ್ ವಿದೇಶಗಳಿಂದ ಆಕ್ಸಿಜನ್ ಸಾಂದ್ರಕ ಯಂತ್ರಗಳನ್ನು ತರಿಸಿಕೊಂಡು ದೇಶದಲ್ಲಿ ಅಗತ್ಯವಿರುವ ಆಸ್ಪತ್ರೆಗಳಿಗೆ ಸರಬರಾಜು ಮಾಡುತ್ತದೆ. ಈ ಸಂಸ್ಥೆಗೆ ಸಚಿನ್ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಅವರಿಗೆ ಕೊರೋನಾ ಪಾಸಿಟಿವ್ ಆಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈಗ ಆಕ್ಸಿಜನ್ ಪೂರೈಕೆಗಾಗಿ ಮಿಷನ್ ಆಕ್ಸಿಜನ್ ಸಂಸ್ಥೆಗೆ ಅವರು ದೇಣಿಗೆ ನೀಡಿದ್ದಾರೆ.
ಕೋವಿಡ್ ವಿರುದ್ಧದ ಹೋರಾಟಕ್ಕೆ ರಾಜಸ್ಥಾನ ರಾಯಲ್ಸ್ 7.5 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಆಸ್ಟ್ರೇಲಿಯಾ ತಂಡದ ಮಾಜಿ ವೇಗಿ ಬ್ರೆಟ್ ಲೀ ಪ್ರಧಾನಮಂತ್ರಿ ಪರಿಹಾರ ನಿಧಿಗೆ 40 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಐಪಿಎಲ್ ಕೊಲ್ಕತ್ತಾ ತಂಡದ ಆಟಗಾರ ಆಸ್ಟ್ರೇಲಿಯಾದ ಬ್ಯಾಟ್ ಕಮಿನ್ಸ್ ಅವರು ಆಕ್ಸಿಜನ್ ಸಿಲಿಂಡರ್ ಖರೀದಿಸಲು 37 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
(ಮಾಹಿತಿ ಕೃಪೆ ಕನ್ನಡದುನಿಯಾ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ