ಬೆಂಗಳೂರು : ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯಿಲ್ಲದೇ 1ರಿಂದ9 ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಆದೇಶವನ್ನು ಶಿಕ್ಷಣ ಇಲಾಖೆ ಅಧಿಕೃತವಾಗಿ ಹೊರಡಿಸಿದೆ.
ಕೋವಿಡ್ ಭೀತಿಯಲ್ಲಿ ರಜೆಯಲ್ಲಿದ್ದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಇನ್ನೆರೆಡು ದಿನಗಳಲ್ಲಿ ಪರೀಕ್ಷೆ ದಿನಾಂಕವನ್ನು ತಿಳಿಸುವುದಾಗಿ ಶಿಕ್ಷಣ ಸಚಿವರು ಹೇಳಿದ್ದರು. ಆದರೆ ಇದೀಗ ಪರೀಕ್ಷೆ ನಡೆಸದೇ 1 ರಿಂದ 9 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್ ಮಾಡಲು ಆದೇಶ ಹೊರಡಿಸಿದ್ದಾರೆ. ಮೌಲ್ಯಾಂಕನ ವಿಶ್ಲೇಷಿಸಿ ಆಧರಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಇಲಾಖೆ ಹೇಳಿದೆ.
ಕರ್ನಾಟಕದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಪ್ರತಿನಿತ್ಯ ಕೋವಿಡ್ ಸಾವಿನ ಸಂಖ್ಯೆ ಕೂಡ ಏರುತ್ತಲೇ ಇದೆ. ಈಗಾಗಲೇ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಕೋನದಿಂದ ಹತ್ತು ಹಲವು ಕ್ರಮಗಳನ್ನು ಅನುಸರಿಸಲಾಗಿದ್ದು.
ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ವರ್ಷಾರಂಭ:
ಒಂದರಿಂದ ಏಳು/ಎಂಟನೇ ತರಗತಿಗಳು ಇರುವ ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರಗೆ ಬೇಸಿಗೆ ರಜೆ. ಜೂ. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ಮತ್ತು ಪ್ರೌಢಶಾಲೆಗಳಿಗೆ ಅಂದರೆ 8 ಮತ್ತು 9ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ. ಪ್ರೌಢಶಾಲೆಗಳ ಶಿಕ್ಷಕರಿಗೆ ಜೂ. 15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ. ಜೂ. 21ರಿಂದ ಜು. 5ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತವೆ. ಜು. 15 ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಮತ್ತು ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
(ಮಾಹಿತಿ ಕೃಪೆ ಉದಯವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ