114 ನೇ ಜಯಂತ್ಯುತ್ಸವ ಆಚರಣೆ: ಶಿವಕುಮಾರ ಸ್ವಾಮೀಜಿಗೆ ಭಕ್ತಿ ನಮನ
ತುಮಕೂರು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಸ್ವಾಮೀಜಿಗಳು ಪೂಜೆ ಸಲ್ಲಿಸಿದರು
ತುಮಕೂರು: ಸಿದ್ದಗಂಗಾ ಮಠದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 114ನೇ ವರ್ಷದ ಜಯಂತಿಯನ್ನು ಸರಳವಾಗಿ ಗುರುವಾರ ಆಚರಿಸಲಾಯಿತು
ಮಠಧೀಶರಾದ ಸಿದ್ದಲಿಂಗ ಸ್ವಾಮಿಜಿ ಬೆಳಗಿನ ಜಾವವೇ ಶಿವಪೂಜೆ ನೆರವೇರಿಸಿ, ನಂತರ ಶವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ತಮ್ಮ ಗುರುವನ್ನು ನೆನೆದು ಕಣ್ಣೀರಾದರು. ಕೆಲ ಸಮಯ ಧ್ಯಾನಸ್ಥ ಸ್ಥಿತಿಯಲ್ಲಿ ನಮಿಸಿದರು. ಸ್ವಾಮೀಜಿ ಪೂಜೆ ಪೂಜೆ ಪೂರ್ಣಗೊಳಿಸಿದ ನಂತರ ಸ್ವಾಮೀಜಿಗಳು, ಭಕ್ತರು ಪೂಜೆ ಮುಂದುವರಿಸಿದರು ವಿವಿಧ ಧಾರ್ಮಿಕ ನೆರವೇರಿದವು.
ಗದ್ದುಗೆ ಪೂಜೆ ನಂತರ ರುದ್ರಾಕ್ಷೀ ಮಂಟಪದಲ್ಲಿ ಶಿವಕುಮಾರ ಸ್ವಾಮೀಜಿ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸಿ, ಮಠದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು. ಮಠದ ವಿದ್ಯಾರ್ಥಿಗಳು, ವಿವಿಧ ಮಠಗಳ ಸ್ವಾಮೀಜಿಗಳು, ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು. ಕಲಾ ತಂಡಗಳು ಮೆರುಗು ತಂದವು.
ಬೆಳಿಗ್ಗೆ ಹೆಚ್ಚಿನ ಸಂಖ್ಖೆಯಲ್ಲಿ ಭಕ್ತರು ಕಂಡುಬರಲಿಲ್ಲ. ಮಧ್ಯಾಹ್ನದ ವೇಳೆಗೆ ಭಕ್ತರ ಸಂಖ್ಯೆ ಸ್ವಲ್ಪ ಮಟ್ಟಿಗೆ ಹೆಚ್ಚಾಗತೊಡಗಿತು.ಸಂಜೆ ವೇಳೇಗೆ ಈ ಸಂಖ್ಯೇ ಮತ್ತಷ್ಟು ಹೆಚ್ಚಾಯಿತು. ಭಕ್ತರು. ಅತಿಥಿಗಳಿಗಾಗಿ ಮಠದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ