ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗತೊಡಗಿದ್ದು, ಜನತೆ ಹೈರಾಣಾಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ತಾಪಮಾನ ಬಹಳಷ್ಟು ಹೆಚ್ಚಿದೆ. ರಾತ್ರಿ ಸಮಯದಲ್ಲೂ ಹಗಲಿನ ಅನುಭವವಾಗುವಂತಾಗಿದೆ.
ತಾಪಮಾನದ ಕಾರಣಕ್ಕಾಗಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಹಗಲಿನ ವೇಳೆ ಹೊರಬೀಳುವುದು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡು ವಿಭಾಗಗಳ 9 ಜಿಲ್ಲೆಗಳಲ್ಲಿ ಸರ್ಕಾರಿ ಕೆಲಸದ ಸಮಯವನ್ನು ಬದಲಿಸಿದೆ. ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ, ಕಲಬುರಗಿ ವಿಭಾಗದ ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ಇಂದಿನಿಂದ ಕಚೇರಿ ಅವಧಿ ಬೆಳಗ್ಗೆ 8ರಿಂದ ಮಧ್ಯಾಹ್ನ 1-30 ರ ವರೆಗೆ ನಿಗದಿಪಡಿಸಲಾಗಿದೆ.
(ಮಾಹಿತಿ ಕೃಪೆ ಕನ್ನಡ ದುನಿಯಾ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ