WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Friday, April 16, 2021

BIG NEWS : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್.? ಸಿಎಂ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ.?


 ಬೆಂಗಳೂರು : ಈಗಾಗಲೇ ಸೋಂಕು ಹೆಚ್ಚಿರುವಂತ ರಾಜ್ಯದ 8 ನಗರಗಳಲ್ಲಿ ಮೇ.20ರವರೆಗೆ ಕೊರೋನಾ ಕರ್ಪ್ಯೂ ಹೇರಲಾಗಿದೆ. ಹೀಗಿದ್ದೂ ಕೊರೋನಾ ಸೋಂಕಿನ ಸಂಖ್ಯೆ ಮಾತ್ರ ದಿನೇ ದಿನೇ ಏರಿಕೆಯಾಗುತ್ತಿದೆ. ಇದರಿಂದಾಗಿ ಕೊರೋನಾ ನಿಯಂತ್ರಣಕ್ಕಾಗಿ ಭಾನುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸರ್ವ ಪಕ್ಷಗಳ ಸಭೆ ನಡೆಸಲಿದ್ದು, ಮಂಗಳವಾರ ಸಚಿವರು, ಅಧಿಕಾರಿಗಳು ಹಾಗೂ ತಜ್ಞರ ಸಭೆ ನಡೆಸಲಿದ್ದಾರೆ. ಈ ಬಳಿಕ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದು ಸೇರಿದಂತೆ ಟಫ್ ರೂಲ್ಸ್ ಜಾರಿಗೆ ಕ್ರಮ ಕೈಗೊಳ್ಳಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಲಿದೆ ಎನ್ನಲಾಗುತ್ತಿದೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವಂತ ಕೊರೋನಾ ನಿಯಂತ್ರಣಕ್ಕಾಗಿ ಈಗ ಕಟ್ಟು ನಿಟ್ಟಿನ ನಿಯಮಗಳ ಜಾರಿ ತುರ್ತು ಸಂದರ್ಭವಿದೆ.

ಈಗಾಗಲೇ ಹಲವು ತಜ್ಞರೊಂದಿಗೆ ಚರ್ಚಿಸಲಾಗಿದೆ. ಕೊರೋನಾ ನಿಯಂತ್ರಣ ಕ್ರಮ ಕುರಿತಂತೆ ಸದ್ಯದಲ್ಲೇ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಇನ್ನೂ ಭಾನುವಾರ ವಿಪಕ್ಷಗಳ ನಾಯಕರು ಸೇರಿದಂತೆ ಸರ್ವ ಪಕ್ಷ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿಯೂ ರಾಜ್ಯದಲ್ಲಿನ ಕೊರೋನಾ ನಿಯಂತ್ರಣಕ್ಕಾಗಿ ಕೈಗೊಳ್ಳ ಬಹುದಾದಂತ ಕ್ರಮಗಳ ಕುರಿತಂತೆ ಸಲಹೆಯನ್ನು ಪಡೆಯಲಾಗುತ್ತದೆ. ಇದಾದ ಬಳಿಕ ಮಂಗಳವಾರ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು, ಅಲ್ಲಿಯೂ ಸರ್ವ ಪಕ್ಷ ಸಭೆಯಲ್ಲಿ ನಾಯಕರು ನೀಡಿದಂತ ಸಲಹೆ ಕುರಿತಂತೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಟಫ್ ರೂಲ್ಸ್ ಅಂತೂ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೆ ತರಲಾಗುತ್ತಿದೆ ಎಂದರು. ಈ ಮೂಲಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಸುಳಿವನ್ನು ನೀಡಿದ್ದಾರೆ.

ಅಂದಹಾಗೇ, ನಿನ್ನೆ ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 10,497 ಸೇರಿದಂತೆ ರಾಜ್ಯಾಧ್ಯಂತ 14,738 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದರಿಂದ ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿತ್ತು. ಇವರಲ್ಲಿ ಇಂದು 3,591 ಜನರು ಸೇರಿದಂತೆ ಇದುವರೆದೆ 9,99,958 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಹೀಗಾಗಿ ರಾಜ್ಯದಲ್ಲಿ 96,561 ಸಕ್ರೀಯ ಸೋಂಕಿತರು ಇರುವುದಾಗಿ ಆರೋಗ್ಯ ಇಲಾಖೆಯು ಕೊರೋನಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿತ್ತು.

ಇನ್ನೂ ಬಳ್ಳಾರಿಯಲ್ಲಿ ಆರು ಸೋಂಕಿತರು, ಬೆಳಗಾವಿಯಲ್ಲಿ ಒಬ್ಬರು, ಬೆಂಗಳೂರು ನಗರದಲ್ಲಿ 30 ಸೋಂಕಿತರು, ಬೀದರ್ ನಲ್ಲಿ ಇಬ್ಬರು, ಧಾರವಾಡದಲ್ಲಿ ಮೂವರು, ಹಾಸನದಲ್ಲಿ ನಾಲ್ವರು, ಕಲಬುರ್ಗಿ, ಕೋಲಾರದಲ್ಲಿ ಓರ್ವ, ಮೈಸೂರಿನಲ್ಲಿ ಐವರು, ರಾಮನಗರ, ಶಿವಮೊಗ್ಗ ತಲಾ ಒಬ್ಬರು, ತುಮಕೂರು, ಉತ್ತರ ಕನ್ನಡದಲ್ಲಿ ತಲಾ ಇಬ್ಬರು ಮತ್ತು ವಿಜಯಪುರದಲ್ಲಿ ಒಬ್ಬರು ಸೇರಿದಂತೆ 66 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 13,112ಕ್ಕೆ ಏರಿಕೆಯಾಗಿತ್ತು.

(ಮಾಹಿತಿ ಕೃಪೆ  Kannada News Now)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ