👉
*ತಪ್ಪಿ ಹೋಯಿತಲ್ಲೇ ಚುಕ್ಕಿ ಬೆಳಕಿನ ಜಾಡು....
ಇನ್ನಿಲ್ಲವಾಯಿತೆ ಆ ಹಕ್ಕಿ ಹಾಡು...
ತಪ್ಪಿ ಹೋಯಿತಲ್ಲೇ ಚುಕ್ಕಿ ಬೆಳಕಿನ ಜಾಡು....
ಇನ್ನಿಲ್ಲವಾಯಿತೆ ಆ ಹಕ್ಕಿ ಹಾಡು...
ಹಸಿರೆಲೆ ಹೂವಿನ ನಡುವೆ ಹುಲ್ಲು ಹಾಸಿಗೆ ಹೆ ಹೇ...
ಮುರಿದು ಹೋಯಿತೇ ಈಗ ಆ ಚುಕ್ಕಿ ಗೂಡು...
ತಪ್ಪಿ ಹೋಯಿತಲ್ಲೇ ಚುಕ್ಕಿ ಬೆಳಕಿನ ಜಾಡು....
ಇನ್ನಿಲ್ಲವಾಯಿತೆ ಆ ಹಕ್ಕಿ ಹಾಡು...
***
ಹನಿ ಹನಿಯಾಗಿ ತೊನೆದು ತೂಗಿದ ಪ್ರೀತಿ....
ಹರಿದು ಚೂರಾಯಿತೆ ಎದೆಯ ಒಲವಿನ ಬೀಡು...
ಹನಿ ಹನಿಯಾಗಿ ತೊನೆದು ತೂಗಿದ ಪ್ರೀತಿ....
ಹರಿದು ಚೂರಾಯಿತೆ ಎದೆಯ ಒಲವಿನ ಬೀಡು...
ರೆಕ್ಕೆ ಬಡಿದೊತ್ತಿ ಎತ್ತಿಕೊಳ್ಳುವ ಹಕ್ಕಿ..
ಕಾಡಿನ ಜಾಡು ಹಿಡಿಯುತ್ತ ನನ್ನ ಪಾಡು...
ತಪ್ಪಿ ಹೋಯಿತಲ್ಲೇ ಚುಕ್ಕಿ ಬೆಳಕಿನ ಜಾಡು....
ಇನ್ನಿಲ್ಲವಾಯಿತೆ ಆ ಹಕ್ಕಿ ಹಾಡು...
***
ಎಲ್ಲಿ ಹೋಯಿತೆ ವಲಸೆ ಗೂಡು ತೊರೆದಾ ಹಕ್ಕಿ...
ಸೇರಿ ಹೋಯಿತೆ ನೀಲಿ ಮುಗಿಲ ಮರೆಯ ಹಾಡು...
ಎಲ್ಲಿ ಹೋಯಿತೆ ವಲಸೆ ಗೂಡು ತೊರೆದಾ ಹಕ್ಕಿ...
ಸೇರಿ ಹೋಯಿತೆ ನೀಲಿ ಮುಗಿಲ ಮರೆಯ ಹಾಡು...
ಕಾಡ ನೆನಪಿಗೆ ಹಿಂಡಿ ತೆವಳುತಿದೆ ಜೀವ
ಮುಂದೆ ಬಯಲು ಹಿಂದೆ ಬಿದ್ದಿತ್ತು ಕಾಡು ಮೇಡು...
ತಪ್ಪಿ ಹೋಯಿತಲ್ಲೇ ಚುಕ್ಕಿ ಬೆಳಕಿನ ಜಾಡು....
ಇನ್ನಿಲ್ಲವಾಯಿತೆ ಆ ಹಕ್ಕಿ ಹಾಡು...
ಹಸಿರೆಲೆ ಹೂವಿನ ನಡುವೆ ಹುಲ್ಲು ಹಾಸಿಗೆ..
ಮುರಿದು ಹೋಯಿತೇ ಈಗ ಆ ಚುಕ್ಕಿ ಗೂಡು...
ತಪ್ಪಿ ಹೋಯಿತಲ್ಲೇ ಚುಕ್ಕಿ ಬೆಳಕಿನ ಜಾಡು....
ಇನ್ನಿಲ್ಲವಾಯಿತೆ ಆ ಹಕ್ಕಿ ಹಾಡು...
ಇನ್ನಿಲ್ಲವಾಯಿತೆ ಆ ಹಕ್ಕಿ ಹಾಡು...
ಇನ್ನಿಲ್ಲವಾಯಿತೆ ಆ ಹಕ್ಕಿ ಹಾಡು.........,
ಸಾಹಿತ್ಯ-ದೇಶ್ ಕುಲಕರ್ಣಿ
ಸಂಗೀತ-ಸಿ ಅಶ್ವಥ್
ಗಾಯನ-ಬಿ.ಆರ್ ಛಾಯ
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ