WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, April 28, 2021

ನಿಯಮ ಉಲ್ಲಂಘಿಸಿದರೆ ಎಫ್‌ಐಆರ್ ಖಚಿತ

 

ಚಾಮರಾಜನಗರ: ಕೋವಿಡ್‌ 2ನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12ರವರೆಗೆ ಘೋಷಿಸಿರುವ 14 ದಿನಗಳ ಲಾಕ್‌ಡೌನ್‌ ಅವಧಿಯಲ್ಲಿ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದರೆ ಜನರು ಕಾನೂನು ಕ್ರಮ ಎದುರಿಸಬೇಕಾಗಬಹುದು.

ಪೊಲೀಸ್‌ ಇಲಾಖೆ ನೀಡಿರುವ ಅಂಕಿ ಅಂಶಗಳ ಪ್ರಕಾರ, ಏಪ್ರಿಲ್‌ 18 ರಿಂದ ಏಪ್ರಿಲ್‌ 26ರವರೆಗೆ ಜಿಲ್ಲೆಯಾದ್ಯಂತ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜಿಲ್ಲಾ ಪೊಲೀಸರು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಗಳ ಅಡಿಯಲ್ಲಿ 69 ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೂರು ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ಏಳು ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ 62 ಪ್ರಕರಣಗಳನ್ನು ದಾಖಲಿಸಿದ್ದಾರೆ. ಚಾಮರಾಜನಗರ ಪೂರ್ವ ಠಾಣೆಯಲ್ಲಿ ಅತಿ ಹೆಚ್ಚು ಅಂದರೆ, 15 ಪ್ರಕರಣಗಳು ದಾಖಲಾಗಿವೆ. ಕೊಳ್ಳೇಗಾಲ ನಗರ ಠಾಣೆಯಲ್ಲಿ 10, ಚಾಮರಾಜನಗರ ನಗರ ಠಾಣೆಯಲ್ಲಿ ಆರು ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ಠಾಣಾ ವ್ಯಾಪ್ತಿಯಲ್ಲಿ ಟಾಟಾ ಏಸ್‌, ತೆರಕಣಾಂಬಿಯಲ್ಲಿ ಖಾಸಗಿ ಬಸ್‌ ಹಾಗೂ ಯಳಂದೂರು ಪೊಲೀಸ್‌ ಠಾಣೆಯಲ್ಲಿ ಗೂಡ್ಸ್‌ ವಾಹನವೊಂದನ್ನು ವಶಕ್ಕೆ ಪಡೆಯಲಾಗಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ಗ್ರಾಮದ ಕೋಡಿ ಬಸವೇಶ್ವರ ರಥೋತ್ಸವ ಆಚರಿಸಲು ಮುಂದಾಗಿದ್ದಕ್ಕಾಗಿ ಸೋಮವಾರ 26 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, 14 ಜನರನ್ನು ಬಂಧಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡುತ್ತಿರುವವರಿಗೆ ಪೊಲೀಸರು ಎಚ್ಚರಿಕೆ ನೀಡುವುದರ ಜೊತೆಗೆ ದಂಡವನ್ನೂ ವಿಧಿಸಿದ್ದರು.

ಗುಂಪು ಸೇರುವುದು, ಅನುಮತಿ ಇಲ್ಲದಿದ್ದರೂ ಅಂಗಡಿ ಮುಂಗಟ್ಟುಗಳನ್ನು ತೆರೆಯುವುದು. ಕಲ್ಯಾಣ ಮಂಟಪಗಳಲ್ಲಿ ಅಥವಾ ಮನೆಗಳಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ಸೇರಿಸುವುದು, ಅನಗತ್ಯವಾಗಿ ವಾಹನಗಳಲ್ಲಿ ಸಂಚರಿಸುವುದು ಸೇರಿದಂತೆ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಈ ಎರಡು ಕಾಯ್ದೆಗಳಲ್ಲಿ ಅವಕಾಶ ಇದೆ.

ಕಟ್ಟುನಿಟ್ಟಾಗಿ ಪಾಲಿಸಲು ಡಿ.ಸಿ. ಆದೇಶ: ಈ ಮಧ್ಯೆ, ಕೊರೊನಾ ವೈರಸ್ ಎರಡನೇ ಅಲೆ ಹರಡದಂತೆ ರಾಜ್ಯ ಸರ್ಕಾರ ಘೋಷಿಸಿರುವ 14 ದಿನಗಳ ಲಾಕ್‌ಡೌನ್‌ ಹಾಗೂ ಕೋವಿಡ್-19ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶಿಸಿದ್ದಾರೆ.

ಕೋವಿಡ್-19ರ ನಿರ್ವಹಣೆ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿನ ಕಾನೂನು ಮತ್ತು ಅನ್ವಯವಾಗಬಹುದಾದ ಇತರೆ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ನಾಲ್ಕು ತಾಸು ಸಡಿಲಿಕೆ

14 ದಿನಗಳ ಲಾಕ್‌ಡೌನ್‌ ಅವಧಿಯಲ್ಲಿ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ನ್ಯಾಯಬೆಲೆ ಅಂಗಡಿ, ಕಿರಾಣಿ ಅಂಗಡಿ, ದಿನಸಿ, ಹಣ್ಣು, ತರಕಾರಿ, ದಿನಪತ್ರಿಕೆ, ಹಾಲು, ಮಾಂಸ, ಮೀನು, ಪಶು ಆಹಾರ ಅಂಗಡಿಗಳು ಇರಲಿವೆ. ರೆಸ್ಟೋರೆಂಟ್‌, ಮದ್ಯದಂಗಡಿ, ಹೋಟೆಲ್‌ಗಳಿಂದ ಪಾರ್ಸೆಲ್‌ ಪಡೆಯುವುದಕ್ಕೆ ಅವಕಾಶ, ಪೆಟ್ರೋಲ್‌ ಬಂಕ್‌, ಎಟಿಎಂ, ಬ್ಯಾಂಕ್‌ಗಳು, ವಿಮೆ ಕಚೇರಿಗಳು ಕಾರ್ಯನಿರ್ವಹಿಸಲಿವೆ.

ಆರೋಗ್ಯ ಸೇವೆಗಳು, ಮೆಡಿಕಲ್‌ಗಳು, ನಿರ್ಮಾಣ, ಕೃಷಿ ಚಟುವಟಿಕೆಗಳು, ನರೇಗಾ ಕಾಮಗಾರಿಗಳು, ಇ-ಕಾಮರ್ಸ್‌ಗಳಿಗೆ ಅವಕಾಶ ನೀಡಲಾಗಿದೆ.

ಸಂಚಾರ ನಿರ್ಬಂಧ: ಕೆಎಸ್‌ಆರ್‌ಟಿಸಿ ಬಸ್‌, ಖಾಸಗಿ ಬಸ್‌, ಆಟೊ, ಟ್ಯಾಕ್ಸಿ, ಖಾಸಗಿ ವಾಹನಗಳು ಸೇರಿದಂತೆ ಬಹುತೇಕ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಂತರರಾಜ್ಯ ಸರಕು ಸಾಗಣೆ, ಆರೋಗ್ಯ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಆಟೊ, ಟ್ಯಾಕ್ಸಿ, ಖಾಸಗಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಇಲಾಖೆಯು ಅಂತರರಾಜ್ಯ ಗಡಿಗಳಲ್ಲಿ, ಅಂತರ ಜಿಲ್ಲಾ ಗಡಿಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ಸಿಬ್ಬಂದಿಯನ್ನೂ ನಿಯೋಜಿಸಿದೆ.

(ಮಾಹಿತಿ ಕೃಪೆ ಪ್ರಜಾವಾಣಿ )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ