ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 14 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, 14 ದಿನ ಗಳ ಲಾಕ್ ಡೌನ್ ನಲ್ಲಿ ರೈತರಿಗೆ ಕೃಷಿ ಚುಟುವಟಿಕೆಗಳಿಗೆ ತೊಂದರೆ ಆಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಂ ಆರಂಭಿಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಮುಂಗಾರು ಆರಂಭವಾಗುತ್ತಿರುವುದರಿಂದ ಲಾಕ್ ಡೌನ್ ಅವಧಿಯಲ್ಲಿ ಯಾವುದೇ ಇಲಾಖೆ, ಅಧಿಕಾರಿಗಳಾಗಲಿ ಕೃಷಿ ಪರಿಕರ ಸಾಗಣಿಕೆ ರೈತರ ಕೃಷಿ ಚಟುವಟಿಕೆಗಳಿಗೆ ಅಡ್ಡಿಯನ್ನುಂಟು ಮಾಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ರೈತರು ಸಹಾಯವಾಣಿ ಅಗ್ರಿವಾರ್ ರೂಂ ಆರಂಭವಾಗಿದ್ದು, ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆವರೆಗೆ ಕಾರ್ಯನಿರ್ವಹಿಸಲಿದೆ. 080-22210237 ಹಾಗೂ 080-22212818 ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.
(ಮಾಹಿತಿ ಕೃಪೆ Kannada News Now )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ