ಬೆಂಗಳೂರು : ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಏಪ್ರಿಲ್ 7 ರಿಂದ ಮುಷ್ಕರ ಕೈಗೊಂಡಿದ್ದಾರೆ. ಸಾರಿಗೆ ಸಿಬ್ಬಂದಿ ಪ್ರತಿಭಟನೆಯಿಂದ ಪ್ರಯಾಣಿಕರಿಗೆ ಮತ್ತು ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದೆ.
ಭಾರತೀಯ ರೈಲ್ವೇ ಇಲಾಖೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಪತ್ರ ಬರೆದಿದ್ದು, ಇದಕ್ಕೆ ಒಪ್ಪಿಗೆ ನೀಡಿರುವ ಕೇಂದ್ರ ರೈಲ್ವೇ ಇಲಾಖೆಯು ಬೀದರ್, ವಿಜಯಪುರ, ಮೈಸೂರು, ಬಾಗಲಕೋಟೆ, ಕಾರವಾರ, ಶಿವಮೊಗ್ಗ ಜಿಲ್ಲೆಗಳಿಗೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ.
ಇದೇ ತಿಂಗಳು ಯುಗಾದಿ ಹಬ್ಬ ಕೂಡ ಇದ್ದು, ಜನರ ಪ್ರಯಾಣಕ್ಕೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಈ ನಿರ್ಣಯವನ್ನು ತೆಗೆದುಕೊಂಡಿದೆ. ಗುರುವಾರದಿಂದ ಏಪ್ರಿಲ್ 14ರ ವರೆಗೆ ಹೆಚ್ಚಿನ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.
(ಮಾಹಿತಿ ಕೃಪೆ ಉದಯವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ