ಬೆಂಗಳೂರು, ಮೇ 06; ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತರು ಬೆಡ್‍ಗಳನ್ನು ಪಡೆಯಲು ಹರಸಾಹಸ ಪಡಬೇಕಿದೆ. ಜಾಲಹಳ್ಳಿಯಲ್ಲಿ ಇಂದು 100 ಹಾಸಿಗೆಯ ಆಸ್ಪತ್ರೆ ಉದ್ಘಾಟನೆಯಾಗುತ್ತಿದೆ.
ಜಾಲಹಳ್ಳಿಯ ಏರ್ ಫೆÇೀರ್ಸ್ ಸ್ಟೇಷನ್‍ನಲ್ಲಿ 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಸಾಮಾನ್ಯ ಜನರನ್ನು ಸಹ ಈ ಸೇನಾ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗುತ್ತದೆ. ಏರ್ ಫೆÇೀರ್ಸ್‍ನ ಕಮಾಂಡ್ ಆಸ್ಪತ್ರೆ ಸಿಬ್ಬಂದಿ ಇದರ ನಿರ್ವಹಣೆ ನೋಡಿಕೊಳ್ಳಲಿದ್ದಾರೆ.
ಬಿಬಿಎಂಪಿ ಮತ್ತು ರಾಜ್ಯ ಸರ್ಕಾರ ಸೂಚಿಸುವ ಜನರು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಆಕ್ಸಿಜನ್ ವ್ಯವಸ್ಥೆ ಹೊಂದಿರುವ ಬೆಡ್‍ಗಳು ಸಹ ಈ ಆಸ್ಪತ್ರೆಯಲ್ಲಿವೆ. ನಗರದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನಲೆಯಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಏಪ್ರಿಲ್ 27ರಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಮೇ 12ರ ಬೆಳಗ್ಗೆ 6 ಗಂಟೆಯ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ಲಾಕ್ ಡೌನ್ ಇದ್ದರೂ ರಾಜ್ಯದಲ್ಲಿ ಬುಧವಾರ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 50 ಸಾವಿರದ ಗಡಿಯನ್ನು ದಾಟಿದೆ.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ