WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, May 4, 2021

18 ದಿನಗಳ ಬಳಿಕ ಪೆಟ್ರೋಲ್‌, ಡೀಸೆಲ್ ದರ ಏರಿಕೆ : ಯಾವ ನಗರದಲ್ಲಿ ಎಷ್ಟಿದೆ?

 

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ನಿರೀಕ್ಷೆಯಂತೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. 18 ದಿನಗಳ ಕಾಲ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಮಂಗಳವಾರ (ಮೇ 04)ರಂದು ಜನಸಾಮಾನ್ಯರಿಗೆ ಏರಿಕೆಯ ಬಿಸಿ ಮುಟ್ಟಿಸಿದೆ.

ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 15 ಪೈಸೆ ಏರಿಕೆಗೊಂಡು 90.55 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 18 ಪೈಸೆ ಹೆಚ್ಚಳಗೊಂಡು 80.91 ರೂಪಾಯಿಗೆ ಮುಟ್ಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.55 ರೂ. ಮತ್ತು ಡೀಸೆಲ್ ದರ 80.91 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.76 ರೂ. ಮತ್ತು ಡೀಸೆಲ್ ದರ 83.78 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.95 ರೂ. ಮತ್ತು ಡೀಸೆಲ್ ದರ 87.98 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.67 ರೂ. ಮತ್ತು ಡೀಸೆಲ್ ದರ 85.87 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.16 ರೂ. ಮತ್ತು ಡೀಸೆಲ್ ದರ 88.25 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.55 ರೂ. ಮತ್ತು ಡೀಸೆಲ್ ದರ 85.90 ರೂ.

(ಮಾಹಿತಿ ಕೃಪೆ goodreturns.in )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ