WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, May 4, 2021

ರಾಜ್ಯದಲ್ಲಿ ರೆಮಿಡಿಸಿವಿರ್ ಪೂರೈಕೆ ಸಮಸ್ಯೆ ಹಾಗೂ ಅಭಾವ ತೀವ್ರಗೊಂಡ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ಸಿಎಂ ಬಿಎಸ್‌ ಯಡಿಯೂರಪ್ಪ ಅವರು ತುರ್ತು ಸಭೆಯನ್ನು ಕರೆದಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

 

ಬೆಂಗಳೂರು: ರಾಜ್ಯದಲ್ಲಿ ರೆಮಿಡಿಸಿವಿರ್‌ ಸಮಸ್ಯೆ ಹಾಗೂ ಅಭಾವ ತಲೆಧೋರಿದ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ತುರ್ತು ಸಭೆಯನ್ನು ಕರೆದಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದೆ.
ಮಂಗಳವಾರ ಮಧ್ಯಾಹ್ಮ 1 ಗಂಟೆಗೆ ಈ ತುರ್ತು ಸಭೆ ನಡೆಯಲಿದ್ದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮಿತಿ ಮೀರಿ ಏರಿಕೆ ಆಗುತ್ತಿದೆ. ಕೋವಿಡ್ ಲಾಕ್‌ಡೌನ್ ಜಾರಿಯಲ್ಲಿದ್ದರೂ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಆಗುತ್ತಿಲ್ಲ. ಮತ್ತೊಂದು ಕಡೆ ತುರ್ತು ಸಂದರ್ಭದಲ್ಲಿ ಬಳಕೆ ಮಾಡುವ ರೆಮಿಡಿಸಿವಿರ್ ಕೊರತೆ ಎದುರಾಗಿದೆ.
ರೆಮಿಡಿಸಿವಿರ್ ಔಷಧಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ಕೃತಕ ಅಭಾವ ಸೃಷ್ಟಿಸಲಾಗುತ್ತುದೆ ಎಂಬ ಆರೋಪವೂ ಇದೆ. ಮತ್ತೊಂದು ಕಡೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಈ ಔಷಧಿಗೆ 20,000 ರೂಪಾಯಿ ವರೆಗೆ ವಸೂಲಿ ಮಾಡುತ್ತಿದ್ದಾರೆ.
ಈ ಸಮಸ್ಯೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪನವರು ಎಚ್ಚೆತ್ತುಕೊಂಡು ತುರ್ತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ರೆಮಿಡಿಸಿವಿರ್ ಔಷಧಿ ಪೂರೈಕೆ ಸರಾಗವಾಗಿ ನಡೆಸುವ ನಿಟ್ಟಿನಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

(ಮಾಹಿತಿ ಕೃಪೆ vijaykarnataka )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ