ವಾರಾಣಸಿ, ಮೇ 29: ಹೆರಿಗೆಗೂ ಮುನ್ನ ಗರ್ಭಿಣಿಗೆ ಕೊರೊನಾ ನೆಗೆಟಿವ್ ಬಂದಿದ್ದು, ನವಜಾತ ಶಿಶುವಿಗೆ ಪಾಸಿಟಿವ್ ಬಂದಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.
ಪರೀಕ್ಷೆಗೊಳಗಾದ ಮರುದಿನ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ವೇಳೆ ಮಗುವಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಕೌಶನ್ ಕುಮಾರ್ ಗುಪ್ತಾ ತಿಳಿಸಿದ್ದಾರೆ. ಆರ್‌ಟಿ-ಪಿಸಿಆರ್ ಪರೀಕ್ಷೆಯು ಕೆಲವು ನ್ಯೂನತೆಗಳಿಂದ ಕೂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಿಎಚ್‍ಯು ಮೆಡಿಕಲ್ ಸುಪರಿಂಟೆಂಡೆಂಟ್ ತನಿಖೆಗೆ ಆದೇಶಿಸಿದ್ದಾರೆ. ಕೆಲವೇ ದಿನಗಳಲ್ಲಿ ಮತ್ತೆ ಇಬ್ಬರಿಗೂ ಹೊಸದಾಗಿ ಪರೀಕ್ಷೆ ಮಾಡಿಸಲಾಗುವುದು ಎಂದು ಹೇಳಿದ್ದಾರೆ.
ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಸರ್ ಸುಂದರ್‌ಲಾಲ್ ಆಸ್ಪತ್ರೆಯಲ್ಲಿ ಹೆರಿಗೆಗೆ ಮುನ್ನ ತಾಯಿಗೆ ಮೇ 24 ರಂದು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ನಡೆಸಲಾಗಿದೆ. ಈ ವೇಳೆ ನೆಗೆಟಿವ್ ಇರುವುದು ತಿಳಿದುಬಂದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 1,73,790 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 3617ಮಂದಿ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಒಟ್ಟು 2,77,29,247 ಪ್ರಕರಣಗಳಿವೆ, ಇದುವರೆಗೆ 2,51,78,011 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3,22,512 ಮಂದಿ ಮೃತಪಟ್ಟಿದ್ದಾರೆ, 22,28,724 ಸಕ್ರಿಯ ಪ್ರಕರಣಗಳಿವೆ.
ಇದುವರೆಗೆ ಒಟ್ಟು 20,89,02,445 ಮಂದಿಗೆ ಲಸಿಕೆ ನೀಡಲಾಗಿದೆ. ಮೇ 28ರವರೆಗೆ 34,11,19,909 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಒಂದೇ ದಿನದಲ್ಲಿ 20,80,048 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
(ಮಾಹಿತಿ ಕೃಪೆ Oneindia)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ