WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Monday, May 3, 2021

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹಾಸಿಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು

 

ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿದ್ದ ವ್ಯಕ್ತಿಗೆ ಹಾಸಿಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆ ವಿರುದ್ಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ ನೀಡಿದ್ದು, ಮಲ್ಲೇಶ್ವರಂ ವಿಭಾಗದ ಬಿಬಿಎಂಪಿ ಆರೋಗ್ಯ ಅಧಿಕಾರಿ ಸುರೇಶ್ ರುದ್ರಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಮಲ್ಲೇಶ್ವರಂನಲ್ಲಿರುವ ವೇಗೂಸ್ ಆಸ್ಪತ್ರೆ ವಿರುದ್ಧ ಎನ್ಡಿಎಂಎ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಆಸ್ಪತ್ರೆ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ದೋಷಗಳು ಕಂಡು ಬಂದಿದ್ದೇ ಆದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ದೂರಿನಲ್ಲಿ ರುದ್ರಪ್ಪ ಅವರು, ಬಿಬಿಎಂಪಿ ಮಾರ್ಗಸೂಚಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ನೀಡಬೇಕು. ಆದರೆ, ಆಸ್ಪತ್ರೆ ಸಿಬ್ಬಂದಿಗಳು ಕಳೆದ 2 ದಿನಗಳಿಂದ ಸೋಂಕಿತರನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದಾರೆ. ಏಪ್ರಿಲ್ 27-28 ರಂದು ಹಾಸಿಗೆಗಳು ಖಾಲಿಯಿಲ್ಲ ಎಂದು ಆಸ್ಪತ್ರೆ ಹೇಳಿತ್ತು. ನಂತರ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಿದಾಗ ಆಸ್ಪತ್ರೆ ತಪ್ಪು ಮಾಹಿತಿ ನೀಡಿರುವುದು ತಿಳಿದುಬಂದಿತ್ತು. ಇದಲ್ಲದೆ ಆಸ್ಪತ್ರೆ ಗಂಭೀರವಾದ ತಪ್ಪುಗಳನ್ನು ಮಾಡಿರುವುದು ಬಹಿರಂಗಗೊಂಡಿದೆ ಎಂದು ಹೇಳಿದ್ದಾರೆ.

(ಮಾಹಿತಿ ಕೃಪೆ ಕನ್ನಡ ಪ್ರಭ )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ