WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, May 4, 2021

ಔಷಧಿಗೆ ವೈದ್ಯರ ಚೀಟಿ ಕಡ್ಡಾಯ: ಬಿ.ಜಿ. ಶ್ರೀನಿವಾಸಪ್ರಸಾದ್‌

 

ಮಾಗಡಿ: ಪಟ್ಟಣದ ಔಷಧಿ ಮಾರಾಟ ಮಳಿಗೆಗಳಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೆ ಮಾತ್ರೆ ಅಥವಾ ಔಷಧಿ ಮಾರಾಟ ಮಾಡಿದರೆ ಫಾರ್ಮಸಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಹಶೀಲ್ದಾರ್‌ ಬಿ.ಜಿ. ಶ್ರೀನಿವಾಸಪ್ರಸಾದ್‌
ತಿಳಿಸಿದರು.

ಪಟ್ಟಣದ ಫಾರ್ಮಸಿಗಳಿಗೆ ಸೋಮವಾರ ಭೇಟಿ ನೀಡಿ ಔಷಧಿ ಮಳಿಗೆಗಳ ಮಾಲೀಕರಿಗೆ ಸೂಚನೆ ನೀಡಿ ಅವರು ಮಾತನಾಡಿದರು.

ಕೆಮ್ಮು, ನೆಗಡಿ, ಜ್ವರ, ಕಫದ ಸಮಸ್ಯೆಗಳಿಗೆ ರೋಗಿಗಳು ನೇರವಾಗಿ ಔಷಧಿ ಮಳಿಗೆಗಳಲ್ಲಿ ಪ್ಯಾರಾಸಿಟಾಮಾಲ್‌, ಡೊಲೊ 650 ಸೇರಿದಂತೆ ಇತರೆ ಮಾತ್ರೆ ತೆಗೆದುಕೊಂಡು ಕೋವಿಡ್ ಸೋಂಕು ಉಲ್ಬಣವಾದ ಮೇಲೆ ಆಸ್ಪತ್ರೆಗೆ ಹೋಗುವುದು ಕಂಡುಬಂದಿದೆ. ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡ ಕೂಡಲೇ ಸಾರ್ವಜನಿಕರು ವೈದ್ಯರಲ್ಲಿ ತೋರಿಸಿ ಚಿಕಿತ್ಸೆ ಪಡೆದರೆ ಕೋವಿಡ್‌ ಸೋಂಕು ಹರುಡುವುದನ್ನು ತಡೆಗಟ್ಟಬಹುದು ಎಂದರು.

ಔಷಧಿ ಮಳಿಗೆಗಳಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೆ ಮಾತ್ರೆ ಮತ್ತು ಔಷಧಿ ಮಾರಾಟ ಮಾಡುವುದು ಅಪರಾಧವಾಗಲಿದೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಔಷಧಿ ಮಳಿಗೆಗಳ ಮಾಲೀಕರು ಸಹಕರಿಸಬೇಕು. ಔಷಧಿ ಮಳಿಗೆಗಳ ಮಾಲೀಕರು ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿ ಕೊಡುವುದಿಲ್ಲ ಎಂದರು.

ಡಿಟಿಒ ಡಾ.ಕುಮಾರ್‌, ಸಿಪಿಐ ಕುಮಾರ್ ಹಾಗೂ ಪೊಲೀಸ್‌ ಸಿಬ್ಬಂದಿ ಇದ್ದರು.

(ಮಾಹಿತಿ ಕೃಪೆ ಪ್ರಜಾವಾಣಿ )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ