WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Sunday, May 2, 2021

Karnataka Bypoll Results: ಬೆಳಗಾವಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾವು-ಏಣಿ ಆಟ

 

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿಯ ಹಣಾಹಣಿಗೆ ಸಾಕ್ಷಿಯಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಮುನ್ನಡೆ ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದೆ.

ಈವರೆಗೆ, ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ 38,170 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಮಂಗಲಾ ಸುರೇಶ ಅಂಗಡಿ 39,631 ಮತಗಳನ್ನು ಗಳಿಸಿ, 1,461 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಎಂಇಎಸ್ ಹಾಗೂ ಶಿವಸೇನಾ ಬೆಂಬಲಿತ ಅಭ್ಯರ್ಥಿ ಶುಭಂ ಶೆಳಕೆ 6,321 ಮತಗಳನ್ನು ಗಳಿಸಿದ್ದಾರೆ.

ಬಸವ ಕಲ್ಯಾಣ: ಎರಡನೇ ಸುತ್ತಿನ ಮತ ಎಣಿಕೆಯಲ್ಲೂ ಬಿಜೆಪಿ ಮುನ್ನಡೆ

ಬಸವ ಕಲ್ಯಾಣ ಉಪಚುನಾವಣೆಯ ಎರಡನೇ ಸುತ್ತಿನ ಮತ ಎಣಿಕೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಶರಣು ‌ಸಲಗರ 3252 ಮತಗಳ ‌ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ‌.

ಶರಣು ‌ಸಲಗರ 6440 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಮಾಲಾ ನಾರಾಯಣರಾವ್ 3188 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನ ಸಯ್ಯದ್ ಯಶ್ರಬ್ 549 ಮತಗಳನ್ನು ಪಡೆದಿದ್ದಾರೆ.

ಒಟ್ಟು 28 ಸುತ್ತುಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.

ಮಸ್ಕಿ: ಮೂರನೇ ಸುತ್ತಿಗೂ ಕಾಂಗ್ರೆಸ್ ಮುನ್ನೆಡೆ

ಮಸ್ಕಿ ವಿಧಾನಸಭಾ ಉಪಚುನಾವಣೆ ಮತಗಳ ಎಣಿಕೆಯ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ 2350 ಮತಗಳಿಂದ ಮುನ್ನಡೆ ಸಾಧಿಸುತ್ತಿದೆ. ಮೂರನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 3588 ಮತಗಳು ಹಾಗೂ ಬಿಜೆಪಿಗೆ 2087 ಮತಗಳು ಬಂದಿವೆ. ಮೂರು ಸುತ್ತಿನ ಒಟ್ಟು‌ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಟ್ಟು 9756 ಹಾಗೂ‌ ಬಿಜೆಪಿಗೆ 7406 ಮತಗಳು ಬಂದಿವೆ.

(ಮಾಹಿತಿ ಕೃಪೆ ಪ್ರಜಾವಾಣಿ)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ