WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, June 1, 2021

ಜೂನ್ 6 ರಿಂದ ಮುಂಗಾರು ಪ್ರಾರಂಭ : ಈ ವರ್ಷ 135.48 ಲಕ್ಷ ಟನ್ ಆಹಾರ ಉತ್ಪಾದನೆಯ ಗುರಿ : ಸಿಎಂ 'BSY' ನೇತೃತ್ವದ ಸಭೆಯಲ್ಲಿ ಚರ್ಚೆ

 

ಬೆಂಗಳೂರು : 2020-21 ರಲ್ಲಿ ದಾಖಲೆ ಪ್ರಮಾಣದ 153.08 ಲಕ್ಷ ಟನ್ ಗಳಷ್ಟು ಆಹಾರ ಧಾನ್ಯ ಉತ್ಪಾದನೆ ಆಗಿದೆ, ಕಳೆದ ವರ್ಷಕ್ಕಿಂತ ಶೇ.10 ರಷ್ಟು ಹೆಚ್ಚಳವಾಗಿದೆ, ಈ ವರ್ಷ 135.48 ಲಕ್ಷ ಟನ್ ಆಹಾರ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ಇಂದಿನ ಸಭೆಯಲ್ಲಿ ಚರ್ಚೆ ನಡೆದಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶ ಹಿನ್ನೆಲೆ ಕೃಷಿ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದರು., ಸಭೆಯಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕೃಷಿ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗಿದೆ. ಕರ್ನಾಟಕದ 20 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಹಾಗೂ 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 6 ಅಥವಾ 7 ಕ್ಕೆ ಮುಂಗಾರು ಪ್ರಾರಂಭವಾಗಲಿದೆ.

2020-21 ರಲ್ಲಿ ದಾಖಲೆ ಪ್ರಮಾಣದ 153.08 ಲಕ್ಷ ಟನ್ ಗಳಷ್ಟು ಆಹಾರ ಧಾನ್ಯ ಉತ್ಪಾದನೆ ಆಗಿದೆ, ಕಳೆದ ವರ್ಷಕ್ಕಿಂತ ಶೇ.10 ರಷ್ಟು ಹೆಚ್ಚಳವಾಗಿದೆ. ಮಳೆಗಾಲದಲ್ಲಿ ಪ್ರವಾಹ ಎದುರಿಸಲ ಸಿದ್ದತೆ ನಡೆಸಲಾಗಿದ್ದು, ಪಂಚಾಯತಿ ಮಟ್ಟದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಡಿಎಪಿ ಗೊಬ್ಬರ ಮತ್ತು ಯೂರಿಯ ಗೊಬ್ಬರ ಸಕಾಲದಲ್ಲಿ ಪೂರೈಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.6. ರಾಜ್ಯದಲ್ಲಿ 690 ಕೃಷಿ ಯಂತ್ರ ಧಾರೆ ಕೇಂದ್ರಗಳು ಹಾಗೂ 210 ಗ್ರಾಮ ಮಟ್ಟದ ಕೃಷಿ ಯಂತ್ರೋಪಕರಣಗಳ ಬ್ಯಾಂಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ಆಧಾರದಲ್ಲಿ ಕೃಷಿ ಯಂತ್ರೋಪಕರಣ ಒದಗಿಸಲಾಗುತ್ತಿದೆ.

ಕೋವಿಡ್ 2ನೇ ಅಲೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಘೋಷಿಸಲಾದ ಪರಿಹಾರ ವಿತರಣೆ ಈಗಾಗಲೇ ಪ್ರಾರಂಭವಾಗಿದ್ದು, ಇದಕ್ಕಾಗಿ ಬಿಡುಗಡೆಯಾಗಿರುವ 19 ಕೋಟಿ ರೂ. ಗಳಲ್ಲಿ 15.23 ಕೋಟಿ ರೂ. ಗಳನ್ನು 36,327 ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ.

ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡಗಳು ಸಜ್ಜಾಗಿವೆ. ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

2020-21ರಲ್ಲಿ ಕೃಷಿ ಸಾಲ ಗುರಿಗಿಂತ 16 ಶೇ. ಹೆಚ್ಚು ವಿತರಣೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ 3 ಸಾವಿರ ಕೋಟಿ ರೂ. ಹೆಚ್ಚುವರಿ ಗುರಿ ನಿಗದಿ ಪಡಿಸಿದ್ದು, ಪ್ರಸಕ್ತ ಸಾಲಿನಲ್ಲಿ 21 ಸಾವಿರ ಕೋಟಿ ರೂ. ಸಾಲ ವಿತರಣೆಯ ಗುರಿ ನಿಗದಿ ಪಡಿಸಲಾಗಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಕೃಷಿ ಸಚಿವ ಬಿ.ಸಿ.ಪಾಟೀಲ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ತೋಟಗಾರಿಕಾ ಸಚಿವ ಶಂಕರ್, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

(ಮಾಹಿತಿ ಕೃಪೆ Kannada News Now )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ