ನವದೆಹಲಿ : ಕೊರೋನಾ ಸೋಂಕಿನ ತೀವ್ರತೆಯಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ನಡೆಸದಿರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಇದರ ಬೆನ್ನಲ್ಲೇ, ಐಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಕೂಡ ರದ್ದು ಪಡಿಸಲಾಗಿದೆ.
ಇಂದು ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.
ಪರೀಕ್ಷೆಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಮುಖ ಸಭೆ ನಂತರ ಜೂನ್ 1ರ ಮಂಗಳವಾರ 12ನೇ ತರಗತಿ ಸಿಬಿಎಸ್ ಇ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಸರ್ಕಾರ ತಿಳಿಸಿತ್ತು.
ಎಲ್ಲಾ ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ವ್ಯಾಪಕ ಚರ್ಚೆಯ ಆಧಾರದ ಮೇಲೆ 12ನೇ ತರಗತಿ ವಿದ್ಯಾರ್ಥಿಗಳಿಗೆ ಎಲ್ಲಾ ಆಯ್ಕೆಗಳ ಬಗ್ಗೆ ಪ್ರಧಾನಿಗೆ ವಿವರಿಸಲಾಯಿತು.
ಏತನ್ಮಧ್ಯೆ, ಸುಪ್ರೀಂ ಕೋರ್ಟ್ ಸೋಮವಾರ, ಮೇ 31 ರಂದು, 12 ನೇ ತರಗತಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಮುಂದೂಡಿತು. ಈಗ ಜೂನ್ 3ರ ಗುರುವಾರ ವಿಚಾರಣೆಗೆ ನಿಗದಿಪಡಿಸಲಾಗಿದೆ. ಇದರ ಮಧ್ಯೆ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ರದ್ದು ಪಡಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇದರ ಬೆನ್ನಲ್ಲಿಯೇ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯ ಬಳಿಕ, ಐಎಸ್‌ಇ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ.
(ಮಾಹಿತಿ ಕೃಪೆ Kannada News Now )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ